ಕಲಬುರಗಿ | ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಹಾಸ್ಟೆಲ್ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ

ಕಲಬುರಗಿ: ಹಾಸ್ಟೆಲ್‍ಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರ ಬಾಕಿ ವೇತನ ಪಾವತಿಸಬೇಕು, ಸೇವಾ ಭದ್ರತೆ ಒದಗಿಸಬೇಕು ಎಂಬ ಬೇಡಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ನಗರದ ಜಗತ್ ವೃತ್ತದಿಂದ ಪ್ರಾದೇಶಿಕ ಆಯುಕ್ತರ ಕಚೇರಿಯವರೆಗೆ ಇಂದು ವಿಭಾಗ ಮಟ್ಟದ ಬೃಹತ್ ಮೆರವಣಿಗೆ ನಡೆಸಲಾಯಿತು.

ಸಂಘದ ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಕಾಶಿನಾಥ ಬಂಡಿ, ಪರಶುರಾಮ ಹಡಲಗಿ ಅವರ ನೇತೃತ್ವದಲ್ಲಿ  ಪ್ರಾದೇಶಿಕ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಸರಕಾರಿ ಹಾಸ್ಟೆಲ್‍ಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ ಸಮಯಕ್ಕೆ ಸರಿಯಾಗಿ ವೇತನ ಪಾವತಿಸದೇ ಇರುವುದರಿಂದ ನೌಕರರು ಅತ್ಯಂತ ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದಾರೆ ಎಂದು ಪ್ರತಿಭಟನೆಕಾರರು ಆಕ್ರೋಶ ಹೊರಹಾಕಿದರು.

ಇದನ್ನು ಓದಿ : ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ವ್ಯಾಪಕ ಅವ್ಯವಹಾರ: ಅಜಯ್ ಬಿಷ್ಣೋಯಿ ವಿವಾದ

ಸಮಾಜ ಕಲ್ಯಾಣ ಇಲಾಖೆಯಲ್ಲಿ 2-3 ತಿಂಗಳ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 7-8 ತಿಂಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ 1-2 ತಿಂಗಳ ವೇತನ ಪಾವತಿಸಿಲ್ಲ. ಕೂಡಲೇ ಬಾಕಿ ವೇತನ ಪಾವತಿಸಬೇಕು, ಸೇವಾ ಭದ್ರತೆ ಒದಗಿಸಬೇಕು, ಕನಿಷ್ಠ 31 ಸಾವಿರ ರೂ.ವೇತನ ನೀಡಬೇಕು, ಸಿಬ್ಬಂದಿ ಕಡಿತ ಮಾಡಿದ ಆದೇಶ ವಾಪಸ್ ಪಡೆಯಬೇಕು, ಖಾಯಂ ನೌಕರರ ಸ್ಥಳದಲ್ಲಿ ಮಾತ್ರ ಖಾಯಂ ನೌಕರರ ವರ್ಗಾವಣೆ ಮಾಡಬೇಕು ಎಂಬ ಬೇಡಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿಪತ್ರದಲ್ಲಿ ಆಗ್ರಹಿಸಲಾಗಿದೆ.

ಇದನ್ನು ನೋಡಿ : 182 ಕೋಮು ದ್ವೇಷದ ಪ್ರಕರಣಗಳನ್ನು ಹಿಂಪಡೆದಿದ್ದ ಬಿಜೆಪಿ ಸರಕಾರ: ಸಚಿವ ರಾಮಲಿಂಗಾರೆಡ್ಡಿ Janashakthi Media

Donate Janashakthi Media

Leave a Reply

Your email address will not be published. Required fields are marked *