ಚನ್ನಪಟ್ಟಣ : ರಾಜ್ಯದಲ್ಲಿ ವಿಧಾನಸಭಾ ಉಪಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಈಗಾಗಲೇ ಬಿಜೆಪಿಯು ಎರಡು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಇನ್ನೊಂದು ಕ್ಷೇತ್ರವನ್ನು ಮಿತ್ರ ಪಕ್ಷವಾದ ಜೆಡಿಎಸ್‌ಗೆ ಬಿಟ್ಟುಕೊಡಲು ಹೈಕಮಾಂಡ್ ಮುಂದಾಗಿದೆ. ಬಿಜೆಪಿ ಎಂಎಲ್‌ಸಿ ಸಿಪಿ ಯೋಗೇಶ್ವರ ಅವರಿಗೆ ಟಿಕೆಟ್ ಕೈತಪ್ಪುವ ಭೀತಿ ಎದುರಾಗಿದೆ. ವಿಧಾನಸಭಾ
ಜೆಡಿಎಸ್ ನಾಯಕ, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ಅವರ ಭವಿಷ್ಯದ ದೃಷ್ಟಿಯಿಂದ ಚನ್ನಪಟ್ಟಣದಿಂದ ಕಣಕ್ಕೆ ಇಳಿಸಲು ಮುಂದಾಗಿದ್ದಾರೆ. ಆದರೆ ಇತ್ತ ಮೈತ್ರಿ ಅಭ್ಯರ್ಥಿಯ ಕನಸು ಕಂಡಿದ್ದ ಬಿಜೆಪಿ ಎಂಎಲ್‌ಸಿ ಸಿಪಿ ಯೋಗೇಶ್ವರ ಅವರಿಗೆ ಟಿಕೆಟ್ ಕೈತಪ್ಪುವ ಭೀತಿ ಎದುರಾಗಿದೆ. ಒಂದು ಕಡೆ ಬಿಜೆಪಿಯ ಒಕ್ಕಲಿಗ ನಾಯಕರು ಸಿಪಿವೈ ಬೆಂಬಲಕ್ಕೆ ನಿಂತಿದ್ದಾರೆಯಾದರೂ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಮಾತ್ರ ವಿರುದ್ಧ ನಿಂತಿದ್ದಾರೆ. ಹಾಗಾಗಿ ಯೋಗೇಶ್ವರಗೆ ಟಿಕೆಟ್ ಸಿಗೋದು ಡೌಟ್ ಅಂತಲೇ ಹೇಳಲಾಗುತ್ತಿದೆ. ಇದೀಗ ಸೈನಿಕ ಅತಂತ್ರ ಸ್ಥಿತಿಯಲ್ಲಿದ್ದಾರೆ.
ಚನ್ನಪಟ್ಟಣ ಟಿಕೆಟ್ ವಿಚಾರ ಮೈತ್ರಿ ಪಕ್ಷಗಳಿಗೆ ಕಗ್ಗಂಟಾಗಿದೆ, ಹಾಗಾಗಿ ಶನಿವಾರ ರಾತ್ರಿ ಉಭಯ ಪಕ್ಷಗಳ ಮುಖಂಡರ ಸಭೆ ನಡೆಯಿತು. ಈ ವೇಳೆ ಜೆಡಿಎಸ್‌ಗೆ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಲಭ್ಯವಾಗುವುದು ಬಹುತೇಕ ಖಚಿತವಾಗಿದೆ. ಈ ಸಭೆಯಲ್ಲಿ ಕೇಂದ್ರ ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಯುವಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಮಾಜಿ ಸಚಿವ ಸಾ.ರಾ.ಮಹೇಶ್, ವೆಂಕಟರಾವ್ ನಾಡಗೌಡ ಮತ್ತು ಬಿಜೆಪಿ ವತಿಯಿಂದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಗವಹಿಸಿದ್ದರು.
ಇದನ್ನು ಓದಿ : ಮೈಸೂರು: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ಮತ್ತೊಂದು ಗಂಭೀರ ಭೂ ಅಕ್ರಮ ಆರೋಪ
ಸಂಡೂರು ಮತ್ತು ಶಿಗ್ಗಾವಿ ಕ್ಷೇತ್ರದಿಂದ ಬಿಜೆಪಿ ಕಣಕ್ಕಿಳಿಯುತ್ತಿರುವುದರಿಂದ ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿದ್ದು, ಬಿಜೆಪಿ ಮುಖಂಡರು ಸಹ ಜೆಡಿಎಸ್‌ಗೆ ನೀಡಲು ಒಲವು ತೋರಿದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್‌ಗೆ ಲಭಿಸುವುದು ಬಹುತೇಕ ಖಚಿತ. ಆದರೂ ಚನ್ನಪಟ್ಟಣ ಕ್ಷೇತ್ರದ ಆಕಾಂಕ್ಷಿಯಾಗಿರುವ ಸಿ.ಪಿ.ಯೋಗೇಶ್ವರ ತಮ್ಮ ಪಟ್ಟುಬಿಡದ ಕಾರಣ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಅಂತಿಮ ನಿರ್ಣಯ ಕೈಗೊಳ್ಳಲು ಸಾಧ್ಯವಾಗಿಲ್ಲ. ಸಿ.ಪಿ.ಯೋಗೇಶ್ವರ ಜೊತೆ ಶುಕ್ರವಾರ ಜೆಡಿಎಸ್ ಮುಖಂಡರು ಸಭೆ ನಡೆಸಿ ಮನವೊಲಿಕೆ ಪ್ರಯತ್ನ ನಡೆಸಿದ್ದರು. ಆದರೆ ಫಲಪ್ರದವಾಗಲಿಲ್ಲ. ವಿಧಾನಸಭಾ
“ಚನ್ನಪಟ್ಟಣದಲ್ಲಿ ಜೆಡಿಸ್‌ನವರು ಯಾರಿಗೆ ಬೇಕೋ ಅವರ ಹೆಸರನ್ನು ಘೋಷಣೆ ಮಾಡಿಕೊಳ್ತಾರೆ. ಈಗಾಗಲೇ ಅಮಿತ್ ಷಾ ಅವರೂ ಚನ್ನಪಟ್ಟಣದಲ್ಲಿ ಜೆಡಿಎಸ್ ನವರು ಘೋಷಣೆ ಮಾಡ್ತಾರೆ ಎಂದು ಹೇಳಿದ್ದಾರೆ. ಚನ್ನಪಟ್ಟಣ ಜೆಡಿಎಸ್‌ನವರ ಕ್ಷೇತ್ರ, ಅವರಿಗೆ ಯಾರು ಬೇಕೋ ಅವರ ಹೆಸರು ಘೋಷಣೆ ಮಾಡ್ತಾರೆ” ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಟಿಕೆಟ್ ಜಗ್ಗಾಟಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
“ಬಿಜೆಪಿಯಿಂದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಲಾಗಿದೆ, ಚನ್ನಪಟ್ಟಣದಲ್ಲಿ ಜೆಡಿಎಸ್ ನವರು ಅನೌನ್ಸ್ ಮಾಡಿಕೊಳ್ಳಬಹುದು ಅಂತ ಅಮಿತ್ ಷಾ ಹೇಳಿದ್ದಾರೆ. ಹೀಗಾಗಿ ಚನ್ನಪಟ್ಟಣದಲ್ಲಿ ಜೆಡಿಎಸ ನವರೇ ಘೋಷಣೆ ಮಾಡ್ತಾರೆ. ಎರಡೂ ಪಕ್ಷಗಳೂ ಸೇರಿ ಮೂರೂ ಕ್ಷೇತ್ರ ಗೆಲ್ಲೋದಿಕ್ಕೆ ನಿರ್ಧಾರ ಆಗಿದೆ. ಸಿಪಿ ಯೋಗೀಶ್ವರ್ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡ್ತಾರೆ. ಅಂತಿಮವಾಗಿ ಹೈಕಮಾಂಡ್ ಏನು ಹೇಳುತ್ತೋ ಅದರಂತೆ ಆಗಲಿದೆ. ಜೆಡಿಎಸ್ ಚಿನ್ಹೆಯಡಿ ಬಿಜೆಪಿಯವರು ನಿಲ್ಲುವ ಯೋಚನೆ ಇಲ್ಲ” ಎಂದು ಹೇಳಿದ್ದಾರೆ. ವಿಧಾನಸಭಾ
ಇದನ್ನು ನೋಡಿ : ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪ ಚುನಾವಣೆ: BJP JDS ಸಂಭಾವ್ಯ ಅಭ್ಯರ್ಥಿಗಳಾರು?