ಬೆಂಗಳೂರು: ಎನ್ಡಿಎ ಅಭ್ಯರ್ಥಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ. ಯೋಗೇಶ್ವರ್ ಮನವೊಲಿಸಲು ನಾನು ಪ್ರಯತ್ನಿಸಿದ್ದೆ. ಅವರು ದುಡುಕಿದರು ಎನ್ನಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಅಭಿಪ್ರಾಯಪಟ್ಟಿದ್ದಾರೆ.
ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಸಂಬಂಧ ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಯೋಗೇಶ್ವರ್ ಗೆ ಟಿಕೆಟ್ ನೀಡಬೇಕೆಂದು ಹಿರಿಯ ನಾಯಕರಿಗೆ ಮನವಿ ಮಾಡಿದ್ದೇವೆ. ಎಚ್.ಡಿ.ಕುಮಾರಸ್ವಾಮಿ ಶಾಸಕರಾಗಿದ್ದು ಅವರ ತೀರ್ಮಾನ ಪ್ರಮುಖವಾಗಿರುತ್ತದೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೇಳಿದ್ದಾರೆ.
ಇದನ್ನೂ ಓದಿ: ದರ್ಭಾಂಗಾ ಬಾಗ್ಮತಿ ಎಕ್ಸ್ಪ್ರೆಸ್ ರೈಲು : ಬೋಲ್ಟ್ ನಟ್ಗಳನ್ನು ತೆಗದುಹಾಕಿ ರೈಲು ಹಳಿ ತಪ್ಪಿಸಲು ಪಿತೂರಿ
ಯೋಗೇಶ್ವರ್ ತಪ್ಪು ತೀರ್ಮಾನ ಕೈಗೊಳ್ಳುತ್ತಾರೆಂದು ನನಗೆ ಅನ್ನಿಸುತ್ತಿಲ್ಲ. ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿಗೆ ಈ ಹಿಂದೆ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಈಗಾಗಲೇ ಸ್ಪರ್ಧೆ ಮಾಡಲ್ಲ ಎಂದರು.
ಸೀಟು ಅವರದ್ದೇ ಆಗಿರುವುದರಿಂದ ಹಾಗೂ ಎನ್ಡಿಎ ಪಾರ್ಟನರ್ ಆಗಿರುವುದರಿಂದ ಜೆಡಿಎಸ್ನವರ ಸಲಹೆ ಪ್ರಮುಖವಾಗಿರುತ್ತದೆ. ಇನ್ನು ಎರಡು ದಿನದಲ್ಲಿ ಎಲ್ಲವೂ ತೀರ್ಮಾನವಾಗಲಿದೆ. ಡಿ.ಕೆ.ಶಿವಕುಮಾರ್ ಸಹೋದರ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಯಾರನ್ನೋ ಕರೆದುಕೊಂಡು ಬರುತ್ತೇನೆ ಎಂದು ಹೇಳಬಹುದು. ಆದರೆ, ಅಂತಿಮವಾಗಿ ಎಲ್ಲವನ್ನೂ ಜನರು ತೀರ್ಮಾನಿಸುತ್ತಾರೆ ಎಂದರು.
ಇದನ್ನೂ ನೋಡಿ: ಬಿಗ್ಬಾಸ್ ಶೋ ಶೀಘ್ರದಲ್ಲೇ ಅಂತ್ಯ? ಮಾನವ ಹಕ್ಕು ಉಲ್ಲಂಘನೆ! Janashakthi Media