ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಮೃತಪಟ್ಟ ಇಬ್ಬರು ರೈತರು

ಚಾಮರಾಜನಗರ: ಬುಧವಾರ ರಾತ್ರಿ ಇಬ್ಬರು ರೈತರು ಜಮೀನಿಗೆ ತೆರಳುವಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಚಾಮರಾಜನಗರ ತಾಲೂಕಿನ ಅಯ್ಯನಪುರ ಗ್ರಾಮದ ನಾಗೇಂದ್ರ (45), ಮಲ್ಲೇಶ (48) ಮೃತ ರೈತರು. ತಗುಲಿ

ಅಯ್ಯನಪುರ ಗ್ರಾಮದ ಅಯ್ಯನಪುರ – ಇತ್ತಲಗುಡ್ಡೆ ಮಾರ್ಗದ ರಸ್ತೆಯಲ್ಲಿ ಇಬ್ಬರು ಬೈಕ್​ನಲ್ಲಿ ತಮ್ಮ ಜಮೀನಿಗೆ ತೆರಳುತ್ತಿದ್ದರು. ಈ ವೇಳೆ ಜೋತುಬಿದ್ದಿದ್ದ ವಿದ್ಯುತ್ ತಂತಿ ಕುತ್ತಿಗೆಗೆ ಬಿಗಿದು ವಿದ್ಯುತ್ ಪ್ರವಹಿಸಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ ಕಾಂಗ್ರೆಸ್

ಬೆಳಗ್ಗೆ ಆದರೂ ಮನೆಗೆ ರೈತರು ವಾಪಸ್​​​ ಬರದ ಕಾರಣ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ‌. ಗ್ರಾಮಸ್ಥರು ಹಾಗೂ ಸ್ಥಳೀಯ ರೈತರು ಸೆಸ್ಕ್ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸುದ್ದಿ ತಿಳಿದು ಚಾಮರಾಜನಗರ ಪೂರ್ವ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ನೋಡಿ: ವಚನಾನುಭವ -17| ಅರಗು ತಿಂದು ಕರಗುವ ದೈವವ,ಉರಿಯ ಕಂಡರೆ ಮುರುಟುವ ದೈವವನೆಂತು ಸರಿಯೆಂಬೆನೆಯ್ಯಾ

Donate Janashakthi Media

Leave a Reply

Your email address will not be published. Required fields are marked *