ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಘೋಷಣೆ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029ನೇ ಅವಧಿಯ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಾಗಿದ್ದು, ವಿವಿಧ ಹಂತದಲ್ಲಿ ಚುನಾವಣೆ ನಡೆಯಲಿದೆ. ರಾಜ್ಯ ಸಂಘದ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಖಜಾಂಚಿ ಸ್ಥಾನದ ಚುನಾವಣೆಗಳು ದಿನಾಂಕ 09-12-2024 ರಿಂದ ದಿನಾಂಕ 27-12-2024ರವರೆಗೆ ನಡೆಯಲಿದೆ.

ಈ ಚುನಾವಣೆಯ ಕುರಿತು ಈಗ ನ್ಯಾಯಾಲಯ ಮಹತ್ವದ ಆದೇಶವೊಂದನ್ನು ನೀಡಿದೆ. ಈ ಕುರಿತು ಸರ್ಕಾರಿ ನೌಕರರಿಗೆ ಮಾಹಿತಿಯನ್ನು ನೀಡಲಾಗಿದೆ. ಈ ಕುರಿತು ಎ. ಹನುಮನರಸಯ್ಯ, ರಾಜ್ಯ ಚುನಾವಣಾಧಿಕಾರಿಗಳು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ರಾಜ್ಯದ ಎಲ್ಲಾ ತಾಲ್ಲೂಕು ಮತ್ತು ಯೋಜನಾ ಶಾಖೆಗಳ ಚುನಾವಣಾಧಿಕಾರಿಗಳು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮಾಹಿತಿಯನ್ನು ನೀಡಿದ್ದಾರೆ.

ಶಾಖೆಗಳ ಚುನಾವಣಾಧಿಕಾರಿಗಳಿಗೆ ಸೂಚನೆ ಎಂಬ ಮಾಹಿತಿಯನ್ನು ಇದು ಒಳಗೊಂಡಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029ನೇ ಅವಧಿಯ ಸಾರ್ವತ್ರಿಕ ಚುನಾವಣಾ ಪ್ರಕ್ರಿಯೆಗಳು ಸಹಕಾರ ಸಂಘಗಳ ನೋಂದಣಿ ಕಾಯ್ದೆ-1960 ಹಾಗೂ ಸಂಘದ ಬೈಲಾ ನಿಯಮಗಳನ್ವಯ ಪಾರಂಭಗೊಂಡಿದೆ.

ಇದನ್ನೂ ಓದಿ: ಕೋಳಿ ಫಾರ್ಮ್‌ಗೆ ನೀರು ನುಗ್ಗಿ 3 ಸಾವಿರಕ್ಕೂ ಹೆಚ್ಚು ಕೋಳಿ ಮೃತ

ಈಗಾಗಲೇ ತಾಲ್ಲೂಕು ಮತ್ತು ಯೋಜನಾ ಶಾಖೆಗಳ ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ಪೂರ್ಣಗೊಂಡು ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿರುವ ಅಭ್ಯರ್ಥಿಗಳ ಹೆಸರನ್ನು ಆಯಾ ಶಾಖೆಗಳ ಚುನಾವಣಾಧಿಕರಿಗಳು ಘೋಷಿಸಿದ್ದು, ದಿನಾಂಕ 28-10-2024ರಂದು ಚುನಾವಣೆಗಳು ತಾಲ್ಲೂಕು ಹಾಗೂ ಯೋಜನಾ ಶಾಖೆಗಳಲ್ಲಿ ನಡೆಯಲಿವೆ ಎಂದು ಹೇಳಿದ್ದಾರೆ.

ನ್ಯಾಯಾಲಯದ ಆದೇಶ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಸಿ.ಆರ್.ಪಿ/ ಬಿ.ಆರ್.ಪಿ/ ಇ.ಸಿ.ಓ ಮತ್ತು ಬಿ.ಐ.ಇ.ಆರ್.ಟಿ. ಗಳು ಸಂಘಕ್ಕೆ 5 ವರ್ಷಗಳ ಸದಸ್ಯತ್ವವನ್ನು ಪಾವತಿಸಿದ್ದು, ಪ್ರಸ್ತುತ ನಡೆಯುತ್ತಿರುವ ಸಂಘದ ಚುನಾವಣೆಗಳಲ್ಲಿ ಸ್ಪರ್ಧಿಸಿರುತ್ತಾರೆ.

ಅಂತೆಯೇ, ಶಿಕ್ಷಣ ಇಲಾಖೆಯು ಹೊರಡಿಸಿರುವ ಸಂಖ್ಯೆ: ಸಿ3(4) ನಿ.ಹು.ಅ.ಪ/10/2023-24, ದಿನಾಂಕ 19-10-2024ರ ಅಧಿಕೃತ ಜ್ಞಾಪನದಲ್ಲಿ ಮೇಲೆ ತಿಳಿಸಿರುವ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಯಾವುದೇ ಸಂಘ ಸಂಸ್ಥೆಗಳ ಚುನಾವಣೆಗಳಲ್ಲಿ ಸ್ಪರ್ಧಿಸಲು/ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಬಾರದಾಗಿ ನಿರ್ಭಂದಿಸಿದೆ.

ಮೇಲ್ಕಂಡ ಇಲಾಖೆಯ ಅಧಿಕೃತ ಜ್ಞಾಪನ ಪತ್ರದ ವಿರುದ್ಧ ಮಾನ್ಯ ಕರ್ನಾಟಕ ಉಚ್ಛ ನ್ಯಾಯಲಯ, ಬೆಂಗಳೂರು ಪೀಠದಲ್ಲಿ ಸಲ್ಲಿಸಲಾದ ಡಬ್ಲ್ಯೂಪಿ. ಸಂಖ್ಯೆ: 2763/2024 (ಜಿಎಂ-ಆರ್‌ಇಎಸ್) ಮೊಕದ್ದಮೆಯಲ್ಲಿ ಮಾನ್ಯ ನ್ಯಾಯಾಲಯವು ಆದೇಶವನ್ನು ನೀಡಿದೆ. ಮಾನ್ಯ ಕರ್ನಾಟಕ ಉಚ್ಚ ನ್ಯಾಯಲಯದ ಆದೇಶದಲ್ಲಿ ಸಿ.ಆರ್.ಪಿ/ ಬಿ.ಆರ್.ಪಿ/ ಇ.ಸಿ.ಓ ಮತ್ತು ಬಿ.ಐ.ಇ.ಆರ್.ಟಿ. ಗಳು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಲು ಮತ್ತು ಮತ ಚಲಾಯಿಸಲು ಆದೇಶಿಸಿರುತ್ತದೆ.

ಆದ್ದರಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಈಗಾಗಲೇ ತಾಲ್ಲೂಕು ಮತ್ತು ಯೋಜನಾ ಶಾಖೆಗಳಲ್ಲಿ ಶಿಕ್ಷಣ ಇಲಾಖೆಯ ಸಿ.ಆರ್.ಪಿ/ ಬಿ.ಆರ್.ಪಿ/ ಇ.ಸಿ.ಓ ಮತ್ತು ಬಿ.ಐ.ಇ.ಆರ್.ಟಿ. ಗಳು ಸಂಘದ ಸದಸ್ಯತ್ವ ಹಣ ಪಾವತಿಸಿ, ಮತದಾರರ ಪಟ್ಟಿಯಲ್ಲಿ ಹೆಸರು ಇರುವವರು ಹಾಗೂ ನಾಮಪತ್ರ ಸಲ್ಲಿಸಿದವರು ಸಹಕಾರ ಸಂಘಗಳ ನೋಂದಣಿ ಕಾಯ್ದೆ-1960 ಹಾಗೂ ರಾಜ್ಯ ಸಂಘದ ಬೈಲಾ ರೀತ್ಯಾ ಚುನಾವಣೆಯಲ್ಲಿ ಸ್ಪರ್ಧಿಸಲು ಮತ್ತು ಮತ ಚಲಾಯಿಸಲು ಅವಕಾಶವಿರುತ್ತದೆ.

ಆದ್ದರಿಂದ ತಾಲ್ಲೂಕು/ ಯೋಜನಾ ಶಾಖೆಯ ಚುನಾವಣಾಧಿಕಾರಿಗಳು ಮಾನ್ಯ ಉಚ್ಚ ನ್ಯಾಯಲಯದ ಆದೇಶದಂತೆ ಹಾಗೂ ಸಂಘದ ಬೈಲಾ ರೀತ್ಯಾ ಕ್ರಮ ವಹಿಸಲು ಸೂಚಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ನೋಡಿ: ಮರಕುಂಬಿ ಪ್ರಕರಣ| ಚಾರಿತ್ರಿಕ ತೀರ್ಪು – ದಲಿತರಿಗೆ ದಕ್ಕಿದ ನ್ಯಾಯ Janashakthi Media

Donate Janashakthi Media

Leave a Reply

Your email address will not be published. Required fields are marked *