ವಾಲ್ಮೀಕಿ ನಿಗಮ ಹಗರಣ | ಮಾಜಿ ಹೆಚ್ಚುವರಿ ನಿರ್ದೇಶಕ ದಾಖಲಿಸಿದ್ದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ‘ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರನ್ನು ಆರೋಪಿಯನ್ನಾಗಿಸಲು ಒತ್ತಡ ಹೇರುತ್ತಿದ್ದಾರೆ’ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯದ (ಇ ಡಿ) ಇಬ್ಬರು ಅಧಿಕಾರಿಗಳ ವಿರುದ್ಧ ಸಮಾಜ ಕಲ್ಯಾಣ ಇಲಾಖೆಯ ಮಾಜಿ ಹೆಚ್ಚುವರಿ ನಿರ್ದೇಶಕ ಬಿ ಕಲ್ಲೇಶ್ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಜಾರಿ ನಿರ್ದೇಶನಾಲಯದ ಉಪ ನಿರ್ದೇಶಕ ಮನೋಜ್‌ ಮಿತ್ತಲ್‌ ಮತ್ತು ಸಹಾಯಕ ನಿರ್ದೇಶಕ ಮುರಳಿ ಕಣ್ಣನ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಏಕಸದಸ್ಯ ಪೀಠ ಇತ್ಯರ್ಥಪಡಿಸಿತು.

ಪ್ರತಿವಾದಿ/ದೂರುದಾರರಾಗಿರುವ ಕಲ್ಲೇಶ್‌ ಪರ ವಕೀಲರು ಇ ಡಿ ಅಧಿಕಾರಿಗಳ ಪರ ವಕೀಲರಿಗೆ ದೂರು ಹಿಂಪಡೆಯುವ ಇ-ಮೇಲ್‌ ಕಳುಹಿಸಿದ್ದರು. ಅಲ್ಲದೇ, ನ್ಯಾಯಾಲಯಕ್ಕೆ ದೂರು ಹಿಂಪಡೆಯುವ ಮೆಮೊ ಸಲ್ಲಿಸಿದರು. ಇದನ್ನು ದಾಖಲೆಯಲ್ಲಿ ಸ್ವೀಕರಿಸಿದ ನ್ಯಾಯಾಲಯವು ಇ ಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ ರದ್ದುಪಡಿಸಿದ್ದು, ಅರ್ಜಿ ಇತ್ಯರ್ಥಪಡಿಸಲಾಗಿದೆ ಎಂದು ಆದೇಶಿಸಿದರು.

ಇದನ್ನೂ ಓದಿ: ಅಮೆರಿಕ ಅಧ್ಯಕ್ಷೀಯ ಚುನಾವಣೆ: ಟ್ರಂಪ್ ವಿಜಯ

ಇದಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಸ್‌ ವಿ ರಾಜು ತಮ್ಮಿಂದ ಯಾವುದೇ ಆಕ್ಷೇಪವಿಲ್ಲ ಎಂದರು.ಕಳೆದ ವಿಚಾರಣೆಯಲ್ಲಿ ಇ ಡಿ ಅಧಿಕಾರಿಗಳನ್ನು ಪ್ರತಿನಿಧಿಸಿದ್ದ ರಾಜು ಅವರು ವಿವೇಚನೆ ಬಳಸದೇ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ವಾದಿಸಿದ್ದರು.

ಪ್ರಕರಣದ ಹಿನ್ನೆಲೆ

ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ಹೆಚ್ಚುವರಿ ನಿರ್ದೇಶಕ ಕಲ್ಲೇಶ್‌ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದ ವಿಚಾರಣೆಗಾಗಿ ತಮಗೆ ಸಮನ್ಸ್‌ ಜಾರಿ ಮಾಡಿದ್ದ ಇ ಡಿ ಅಧಿಕಾರಿಗಳು ಪ್ರಕರಣದಲ್ಲಿ ಸಿಲುಕಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಪ್ರಮುಖ ಅಧಿಕಾರಿಗಳ ಹೆಸರು ಹೇಳುವಂತೆ ಬೆದರಿಕೆ ಹಾಗೂ ಒತ್ತಡ ಹಾಕಿದ್ದಾರೆ ಎಂದು ಬೆಂಗಳೂರಿನ ವಿಲ್ಸನ್‌ ಗಾರ್ಡನ್‌ ಠಾಣೆಗೆ ಮನೋಜ್‌ ಮಿತ್ತಲ್‌ ಮತ್ತು ಮುರಳಿ ಕಣ್ಣನ್‌ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇ ಡಿ ಅಧಿಕಾರಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ಗಳಾದ 3(5), 351(2) ಮತ್ತು 352 ಅಡಿ ಪ್ರಕರಣ ದಾಖಲಾಗಿತ್ತು. ಈಗ ಅದು ವಜಾಗೊಂಡಿದೆ.

ಇದನ್ನೂ ನೋಡಿ: ಸಿದ್ದರಾಮಯ್ಯ ಸರ್ಕಾರ ವಕ್ಫ್ ಪ್ರಕರಣವನ್ನು ಸಮರ್ಥವಾಗಿ ನಿಭಾಯಿಸಲು ಸೋತಿದ್ದು ಹೇಗೆ? Janashakthi Media

Donate Janashakthi Media

Leave a Reply

Your email address will not be published. Required fields are marked *