ಮಾಜಿ ಸಂಸದ ಪುಜ್ವಲ್ ರೇವಣ್ಣ ಸಲ್ಲಿಸಿದ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪುಜ್ವಲ್ ರೇವಣ್ಣ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ತನಗೆ ಜಾಮೀನು ನೀಡಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಗೆ ಮೇಲ್ಮನವಿ ಸಲ್ಲಿಸಿದ್ದರು.

ಬಹು ಚರ್ಚಿತ ಪ್ರಕರಣವೆಂದೆ ಕರೆಯುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣರವರ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ನ್ನೊಳಗೊಂಡ ಪೀಠವು ಇಂದು ವಿಚಾರಣೆ ನಡೆಸಿತು. ಹೈಕೋರ್ಟ್‌ ಆದೇಶವನ್ನು ಎತ್ತಿ ಹಿಡಿದಿದ್ದು, ಪ್ರಜ್ವಲ್ ರೇವಣ್ಣ ಅರ್ಜಿಯನ್ನು ವಜಾಗೊಳಿಸಿತು.

ಪ್ರಜ್ವಲ್ ರೇವಣ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹ್ಯಗಿ, ಆರೋಪಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಹೀಗಾಗಿ ಅವರ ವರ್ಚಸ್ಸಿಗೆ ಧಕ್ಕೆ ತರಲು ಅತ್ಯಾಚಾರದ ಆರೋಪ ಮಾಡಲಾಗಿದ್ದು, ಅವರಿಗೆ ಜಾಮೀನು ನೀಡುವಂತೆ ನ್ಯಾಯಾಲಯದ ಬಳಿ ಮನವಿ ಮಾಡಿದರು. ಆದರೆ ಆರೋಪಿ ಪ್ರಭಾವಿ ಎಂದು ಪರಗಣಿಸಿದ ಉನ್ನತ ನ್ಯಾಯಪೀಠ, ಜಾಮೀನು ಅರ್ಜಿಯನ್ನು ವಜಾಗೊಳಿಸಿತು.

ಇದನ್ನೂ ಓದಿ: ಚಿಕ್ಕಮಗಳೂರು| ಕಾಡಾನೆಗಳ ಉಪಟಳ; ಶಾಲಾ ಕಾಲೇಜುಗಳಿಗೆ ರಜಾ ಘೋಷಣೆ

ಅತ್ಯಾಚಾರ ಲೈಂಗಿಕ ದೌರ್ಜನ್ಯ, ಎಸಗಿದ ದುಷ್ಟ ಕೃತ್ಯಗಳ ವಿಡಿಯೋ ರೆಕಾರ್ಡಿಂಗ್ ಈ ಎಲ್ಲ ಆರೋಪಗಳನ್ನು ಹೊತ್ತ ಜಾತ್ಯಾತೀತ ಜನತಾದಳ ಮಾಜಿ ಸಂಸದ, ಪ್ರಭಾವಶಾಲಿಯಾಗಿರುವುದರಿಂದ ಜಾಮೀನು ನೀಡಲಾಗದು ಎಂದು ಸರ್ವೋಚ್ಚ ‌ನ್ಯಾಯಾಲಯವೂ ಕೂಡಾ ಹೇಳಿದೆ. ಅಧಿಕಾರ, ಅಂತಸ್ತು, ಹಣ, ಜಾತಿಮದಗಳ ಪರಾಕಾಷ್ಠೆಯ ದುಷ್ಕೃತ್ಯಗಳನ್ನು ವಿರೋಧಿಸಿ ರಾಜ್ಯದಾದ್ಯಂತ ಪ್ರತಿಭಟನೆಗಳು ನಡೆದಿದ್ದವು.

ಹಲವು ಮಹಿಳೆಯರ ಮೇಲೆ ಲೈಂಗಿಕ ಆಚಾರ ಪ್ರಕರಣದಲ್ಲಿ ಇದೇ ವರ್ಷ ಮೇ ತಿಂಗಳಲ್ಲಿ ಪ್ರಜ್ವಲ್ ಜರ್ಮನಿಯಿಂದ ಹಿಂದಿರುಗಿದ ನಂತರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎಸ್‌ಐಟಿ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿತ್ತು. ಪ್ರಕರಣದಲ್ಲಿ ಪ್ರಜ್ವಲ್ ಅವರ ತಂದೆ ಹಚ್ ಡಿ ರೇವಣ್ಯ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ನೋಡಿ: ಎಲ್‌ಐಸಿ ಖಾಸಗೀಕರಣದ ವಿರುದ್ಧ ಹೋರಾಟ ಬಲಗೊಳ್ಳಲಿದೆ – ಎಸ್‌.ಕೆ ಗೀತಾ Janashakthi Media

Donate Janashakthi Media

Leave a Reply

Your email address will not be published. Required fields are marked *