ಬೆಂಗಳೂರು: ಕರ್ನಾಟಕದಲ್ಲಿ ಬಹುನಿರೀಕ್ಷೆಯ ಉಪಚುನಾವಣೆ 2024 ಮೂರು ಕ್ಷೇತ್ರಗಳಲ್ಲಿ ನವೆಂಬರ್ 13ರಂದು ಬುಧವಾರ ಬೆಳಗ್ಗೆ 7 ಗಂಟೆಗೆ ಆರಂಭವಾಗಲಿದೆ. ಮತದಾನಕ್ಕೂ ಮೊದಲು ರಾಜ್ಯ ಚುನಾವಣಾಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಸಂಬಂಧ ಅವರು ಮಂಗಳವಾರ ಸಂಜೆ ಚುನಾವಣಾಧಿಕಾರಿಗಳು ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನಲೆಯಲ್ಲಿ ರಾಮನಗರದ ಅರ್ಚಕರಹಳ್ಳಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ ಆವರಣದಲ್ಲಿ ಮಸ್ಟರಿಂಗ್ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು.
ಮತಗಟ್ಟೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತದಾನ ಪ್ರಕ್ರಿಯೆಗೆ ಅಗತ್ಯವಿರುವ ಇವಿಎಂ ಯಂತ್ರಗಳು ಸೇರಿದಂತೆ ವಿವಿಧ ಸಲಕರಣೆಗಳೊಂದಿಗೆ ಇಂದು ಮಧ್ಯಾಹ್ನ ಮತಗಟ್ಟೆಗಳಿಗೆ ತೆರಳಿದರು. ಎಲ್ಲ ಸಿದ್ಧತೆಗಳನ್ನು ಅಧಿಕಾರಿಗಳು ಖಚಿತಪಡಿಸಿಕೊಂಡರು. ಇಲ್ಲಿನ ಮಸ್ಟರಿಂಗ್ ಕೇಂದ್ರದಿಂದ ನಿಗದಿಯಂತೆ ಚುನಾವಣಾ ಸಿಬ್ಬಂಧಿ ಇವಿಎಂ ಸಲಕರಣೆ ಸಮೇತ ಮತಗಟ್ಟೆಗಳಿಗೆ ತೆರಳಿದರೆ. ಈ ಸಿದ್ಧತೆಯನ್ನು ಮಸ್ಟಿರಿಂಗ್ ಎನ್ನಲಾಗುತ್ತದೆ.
ಇನ್ನೂ ಸಂಡೂರು ವಿಧಾನಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಬುಧವಾರ ಸಂಡೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾ ಚುನಾವಣಾಧಿಕಾರಿ ಭೇಟಿ ನೀಡಿದರು. ಈ ವೇಳೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸಹ ಉಪಸ್ಥಿತರಿದ್ದರು. ಆಯಾ ಮತಗಟ್ಟೆಗಳೀಗೆ ನಿಯೋಜನೆಗೊಂಡ ಅಧಿಕಾರಿಗಳಿಗೆ ಬೀಳ್ಕೊಟ್ಟರು. ಪೊಲೀಸರರು ಮಸ್ಟರಿಂಗ್ ಕೇಂದ್ರ ಹಾಗೂ ಮತಗಟ್ಟೆಗಳಿಗೆ ಅಗತ್ಯ ಭದ್ರತೆ ಒದಗಿಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.
ಇವತ್ತು ಮಸ್ಟರಿಂಗ್ ಕೇಂದ್ರದಲ್ಲಿ ಅಧಿಕಾರಿ, ಸಿಬ್ಬಂದಿಗೆ ಸಲಹೆ ನೀಡಲಾಯಿತು. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಚುನಾವಣಾಧಿಕಾರಿ ರಾಜೇಶ್, ಎಸ್.ಪಿ. ಶೋಭಾರಾಣಿ ಸೇರಿ ಇತರ ಅಧಿಕಾರಿಗಳು ಮಸ್ಟರಿಂಗ್ ಕಾರ್ಯದ ಮೇಲುಸ್ತುವಾರಿ ವಹಿಸಿದ್ದರು.
ಹಾವೇರಿ ಜಿಲ್ಲೆಯ ಶಿಗ್ಗಾಂವ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾನ ಕಾರ್ಯಕ್ಕೆ ನಿಯೋಜನೆಯಾದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಚುನಾವಣಾಧಿಕಾರಿಗಳು ಸಲಹೆ ನೀಡಿದರು. ಇಂದು ನವೆಂಬರ್ 12ರಂದು ಕ್ಷೇತ್ರದ ಜೆಎಂಜೆ ಹೈಸ್ಕೂಲ್ ಆವರಣಲ್ಲಿ ಮಸ್ಟರಿಂಗ್ ಕಾರ್ಯ ನಡೆಯಿತು. ಸಿಬ್ಬಂದಿಯು ಮತಗಟ್ಟೆಗಳಿಗೆ ತೆರಳಿದರು.
253 ಮತಗಟ್ಟೆ, 1200ಕ್ಕೂ ಹೆಚ್ಚು ಸಿಬ್ಬಂದಿ, ಭದ್ರತೆ
ಸಂಡೂರಿನಲ್ಲಿ ಒಟ್ಟು 253 ಮತಗಟ್ಟೆಗಳನ್ನು ನಿರ್ಮಿಸಲಾಗಿದೆ. ಒಟ್ಟು 608 ಸಹಾಯಕ ಸಿಬ್ಬಂದಿ ಇರಲಿದ್ದಾರೆ. ಒಟ್ಟು 1200ಕ್ಕೂ ಹೆಚ್ಚು ಸಿಬ್ಬಂದಿ ಸಂಡೂರಿನಲ್ಲಿ ನಿಯೋಜಿಸಲಾಗಿದೆ. ಇದೇ ರೀತಿ ಶಿಗ್ಗಾವಿ ಹಾಗೂ ಚನ್ನಪಟ್ಟಣದಲ್ಲಿ ಅಗತ್ಯ ಸಿಬ್ಬಂದಿಯನ್ನು ನೂರಾರು ಮತಗಟ್ಟೆಗಳಿಗೆ ನಿಯೋಜಿಸಲಾಗಿದೆ. ಎಲ್ಲೆಡೆ ಪೊಲೀಸ್ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ.
ನಾಳೆ ಬುಧವಾರ ಬೆಳಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗುತ್ತದೆ. ಮತಗಟ್ಟೆಗಳ ಬಳಿಕ ಮತಚೀಟಿ ನೀಡಲಾಗುತ್ತದೆ. ಮತದಾರರು ಅಗತ್ಯ ಗುರುತಿನ ಚೀಟಿ ಒಯ್ಯಬೇಕಿದೆ. ಸಂಜೆ 6ಗಂಟೆಗೆ ಮತದಾನ ಪೂರ್ಣಗೊಳ್ಳಲಿದೆ.