ವಿದ್ಯಾರ್ಥಿ ನಿಲಯಗಳಲ್ಲಿ ಅವ್ಯವಸ್ಥೆ; ಆಕ್ರೋಶ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ

ತುಮಕೂರು: ವಿವಿಧ ಇಲಾಖೆಗಳಡಿ ನಡೆಯುತ್ತಿರುವ ತುಮಕೂರು ಜಿಲ್ಲೆಯ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆ ತೀರಾ ಹದಗೆಟ್ಟ ಪರಿಸ್ಥಿತಿಯಲ್ಲಿದ್ದು, ಯಾರೂ ಹೇಳೋರು, ಕೇಳೋರಿಲ್ಲದಂತಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅವ್ಯವಸ್ಥೆ

ಇತ್ತೀಚೆಗಷ್ಟೇ ಕೊರಟಗೆರೆ ತಾಲೂಕು ಬಜ್ಜನಹಳ್ಳಿ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ಸಾವಿಗೀಡಾಗಿರುವುದು ಅಧಿಕಾರಿಗಳ ವೈಫಲ್ಯ ಎದ್ದು ಕಾಣುತ್ತಿದೆ. ಕಚೇರಿಯಲ್ಲಿ ಕುಳಿತು ಪತ್ರಗಳಿಗೆ ಸಹಿ ಹಾಕಲಷ್ಟೇ ತಮ್ಮ ಕರ್ತವ್ಯಗಳನ್ನು ಸೀಮಿತಗೊಳಿಸದೆ ಶಾಲಾ-ಕಾಲೇಜು, ಆಸ್ಪತ್ರೆ, ವಿದ್ಯಾರ್ಥಿ ನಿಲಯಗಳಿಗೆ ತಿಂಗಳಿಗೊಮ್ಮೆಯಾದರೂ ಭೇಟಿ ನೀಡಿ ಪರಿಶೀಲಿಸಬೇಕು. ಅವ್ಯವಸ್ಥೆಗಳು ಕಂಡು ಬಂದರೆ ಕೂಡಲೇ ಸರಿಪಡಿಸಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳಿಗೆ ಮಾತಿನ ಚಾಟಿ ಬೀಸಿದರು.

ಇದನ್ನೂ ಓದಿ: ಸಮ ಸಮಾಜದ ಕನಸುಗಳೂ, ಬುಲ್ಡೋಜರ್‌ ನ್ಯಾಯವೂ

ವಿದ್ಯಾರ್ಥಿ ನಿಲಯಗಳಲ್ಲಿರುವ ಶೌಚಾಲಯಗಳಿಗೆ ಬಾಗಿಲುಗಳೇ ಇಲ್ಲ. ವಿದ್ಯಾರ್ಥಿನಿಯರು ವ್ಯಾಸಂಗ ಮಾಡುವ ಸ್ಥಳದಲ್ಲಿ ಇಂತಹ ಅವ್ಯವಸ್ಥೆಗಳನ್ನು ನಾನು ಸಹಿಸುವುದಿಲ್ಲ. ಕೂಡಲೇ ವಸತಿ ನಿಲಯಗಳಿಗೆ ಅಗತ್ಯ ಮೂಲ ಸೌಕರ್ಯಗಳ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಅಸಡ್ಡೆ ತೋರಿದ ಅಧಿಕಾರಿಗಳು ಅಮಾನತಿನ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಸಿಇಒ ಪ್ರಭು, ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ರಾಜಣ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಉಪ ವಿಭಾಗಾಧಿಕಾರಿಗಳಾದ ಗೋಟೂರು ಶಿವಪ್ಪ, ಸಪ್ತಶ್ರೀ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ನೋಡಿ: ಪ್ರೋಮೊ| ನಿರಂಜನ 100 – ಚಿರಸ್ಮರಣೆ ಮತ್ತು ಸಮಕಾಲೀನತೆ ಉಪನ್ಯಾಸ ಸರಣಿ Janashakthi Media

Donate Janashakthi Media

Leave a Reply

Your email address will not be published. Required fields are marked *