ಬೆಂಗಳೂರು : ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ಸಚಿವ ಸಂಪುಟದ ನಿರ್ಣಯದ ಅನ್ವಯ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ಆಯೋಗ ರಚಿಸಿ ಅಧಿಕೃತ ಆದೇಶ ಹೊರಡಿಸಿದೆ.
ಇಂದು ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಜಂಟಿಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಕರ್ನಾಟಕ ಉಚ್ಚ ಸೆಕ್ಷನ್ (3)ರಲ್ಲಿ ನೀಡಲಾದ ಅಧಿಕಾರಗಳನ್ನು ಚಲಾಯಿಸಿ, ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಶ್ರೀ ಹೆಚ್.ಎನ್.ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಲಾಗಿದೆ ಎಂದು ತಿಳಿಸಲಾಗಿದೆ.
ರಾಜ್ಯದಲ್ಲಿ ಶಿಕ್ಷಣ ಮತ್ತು ಸರಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು ಪ್ರಾಯೋಗಿಕ ಅಂಕಿಅಂಶ ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಬಗ್ಗೆ ಸೂಕ್ತ ಶಿಫಾರಸಿನೊಂದಿಗೆ ಆಯೋಗವು ಎರಡು ತಿಂಗಳ ಒಳಗಾಗಿ ವರದಿ ಸಲ್ಲಿಸಬೇಕುಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸದರಿ ವಿಚಾರಣಾ ಆಯೋಗದ The terms of references, ಕಛೇರಿ, ವಾಹನ ವ್ಯವಸ್ಥೆ ಅಗತ್ಯ ಸಿಬ್ಬಂದಿ, ಗೌರವಧನ ಮತ್ತು ಇತರ ಸವಲತ್ತುಗಳನ್ನು ಕಲ್ಪಿಸುವ ಸಂಬಂಧ ಪ್ರತ್ಯೇಕವಾಗಿ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.
ಈ ಆದೇಶವನ್ನು ಸಚಿವ ಸಂಪುಟ ಟಿಪ್ಪಣಿ ಸಂಖ್ಯೆ:ಸಿ.616/2024, ದಿನಾಂಕ: 28-10-2024ರ ನಿರ್ಣಯದನ್ವಯ ಈ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ.