ಶಿಲ್ಲಾಂಗ್: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಬಿಜೆಪಿ ಸರ್ಕಾರಕ್ಕೆ ನೀಡಿದ ಬೆಂಬಲವನ್ನು ಹಿಂಪಡೆಯಲಾಗಿದೆ ಎಂದು ನ್ಯಾಷನಲ್ ಜನತಾ ಪಕ್ಷ- NPP ಭಾನುವಾರ ತಿಳಿಸಿದೆ.
ಎನ್. ಬಿರೇನ್ ಸಿಂಗ್ ನೇತೃತ್ವದ ಸರ್ಕಾರ ಈಶಾನ್ಯ ರಾಜ್ಯದಲ್ಲಿ ಸಮಸ್ಯೆಯನ್ನು ಪರಿಹರಿಸಲು ಮತ್ತು ಸಹಜ ಪರಿಸ್ಥಿತಿ ತರುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು NPP ಆರೋಪಿಸಿದೆ.
60 ಸದಸ್ಯರ ಮಣಿಪುರ ವಿಧಾನಸಭೆಯಲ್ಲಿ ಏಳು NPP ಶಾಸಕರಿದ್ದಾರೆ. ಆಡಳಿತರೂಢ ಬಿಜೆಪಿ 32 ಸ್ಕ್ಯಾನಗಳನ್ನು ಪಡೆದು ಸರಳ ಬಹುಮತ ಮಾಡಿದೆ. ಬಿಜೆಪಿ ಮಿತ್ತ ಪಕ್ಷ ಜೆಡಿಯು ಕೂಡಾ 6 ಸ್ನಾನಗಳಲ್ಲಿ ಗೆಲುವು ಕಂಡಿದೆ.
ಇದನ್ನೂ ಓದಿ: ಸಗಣಿಯ ರಾಶಿಯಿಂದ ಅಪಾರ ಪ್ರಮಾಣದ ಹಣ ಪೊಲೀಸರ ವಶ
ಕಳೆದ ಕೆಲವು ದಿನಗಳಿಂದ ಮಣಿಪುರದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಜನರು ಭಯದಿಂದ ಬದುಕುತ್ತಿದ್ದು, ಅತಿಯಾದ ಸಂಕಷ್ಟ ಅನುಭವಿಸುತ್ತಿದ್ದಾರೆ. ಆದರೆ ಬಿಜೆಪಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ NPP ಪತ್ರ ಬರೆದಿದೆ.
ಬಿರೇನ್ ಸಿಂಗ್ ನೇತೃತ್ವದ ಸರ್ಕಾರ ಸಮಸ್ಯೆಯನ್ನು ಪರಿಹರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಗೆ ನೀಡಿದ್ದ ಬೆಂಬಲವನ್ನು ತಕ್ಷಣದಿಂದ ಹಿಂಪಡೆಯಲಾಗಿದೆ ಎಂದು NPP ಹೇಳಿದೆ.
ಇದನ್ನೂ ನೋಡಿ: ಮರಕುಂಬಿ ಪ್ರಕರಣ ; 97 ಮಂದಿಗೆ ಜಾಮೀನು | ಜಾಮೀನನ್ನು ಸಂಭ್ರಮಸಲು ಸಿದ್ದತೆ ನಡೆದಿತ್ತು – ಮರಕುಂಬಿ ಬಸವರಾಜ