ಬಿಪಿಎಲ್ ಪರಿಷ್ಕರಣೆ: ಜನರು ಆಕ್ರೋಶದಿಂದ ಎಚ್ಚೆತ ರಾಜ್ಯ ಸರ್ಕಾರ- ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಸಿಎಂ ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಬಿಪಿಎಲ್ ಪರಿಷ್ಕರಣೆ ವಿಚಾರ ವಿಪಕ್ಷ ಬಿಜೆಪಿಗೆ ಅಸ್ತ್ರವೇ ಸಿಕ್ಕಂತಾಗಿದೆ. ಬಡವರ ಕಾರ್ಡ್‌ ರದ್ದಾಗಿರೋ ಕೆಲ ಪ್ರಕರಣಗಳನ್ನ ಮುಂದಿಟ್ಟು  ಬಿಜೆಪಿ ವಾಗ್ವಾದ ಶುರು ಮಾಡಿದೆ. ಮನೆಮನೆಗೆ ತೆರಳಿ ಸಮಸ್ಯೆಗಳನ್ನು ಆಲಿಸುತ್ತಿದ್ದು, ಸರ್ಕಾರದ ವಿರುದ್ಧ ಜನರು ಆಕ್ರೋಶ ಹೊರಹಾಕುತ್ತಿದ್ದಾರೆ. ಪರಿಷ್ಕರಣೆ

ಇದರಿಂದ ಎಚ್ಚೆತ್ತ ಸರ್ಕಾರ, ಯಾರೊಬ್ಬರ ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಸಿಎಂ ಸಿದ್ಧರಾಮಯ್ಯ ಸೂಚನೆ ನೀಡಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣಾ ವಿಚಾರ ಮಾತಿನ ಸಮರಕ್ಕೆ ವೇದಿಕೆ ಹಾಕಿಕೊಟ್ಟಿದೆ. ಒಂದರ್ಥದಲ್ಲಿ ಬಿಜೆಪಿ ನಾಯಕರಿಗೆ ಅಸ್ತ್ರವೇ ಸಿಕ್ಕಂತಾದ, ಸಚಿವರು ಇಲಾಖೆಯ ನಡೆಯನ್ನ ಸಮರ್ಥನೆ ಮಾಡಿಕೊಳ್ತಿದ್ದಾರೆ.

ಇನ್ನೊಂದೆಡೆ ಸಾರ್ವಜನಿಕರು ಸಹ ತಮ್ಮ ಬಿಪಿಎಲ್ ಕಾರ್ಡ್ ರದ್ದುಗೊಳಿಸಿದ್ದಕ್ಕೆ ಸರ್ಕಾರದ ವಿರುದ್ಧ ಸಿಡಿದದಿದ್ದಾರೆ. ಜಿಲ್ಲ-ಜಿಲ್ಲೆಗಳಲ್ಲೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವುದರಿಂದ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ಹೊರಡಿಸಿದ್ದಾರೆ.

ಇದನ್ನೂ ಓದಿ : ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ: ಶೇ. 10 ಅಥವಾ 20ರಷ್ಟು ಶುಲ್ಕ ಹೆಚ್ಚಿಸಿದ್ದೇವೆ ಎಂದ ದಿನೇಶ್ ಗುಂಡೂರಾವ್

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ, ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇನ್ನು ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಆದೇಶ ಹೊರಡಿಸಿದ್ದಾರೆ.

ಒಂದು ವೇಳೆ ಬಡ ಕುಟುಂಗಳವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕಳೆದ ಆಗಸ್ಟ್‌ ತಿಂಗಳಿನಲ್ಲೇ ಆಹಾರ ಇಲಾಖೆಗೆ ಇ ಗವರ್ನೆನ್ಸ್ ಇಲಾಖೆ ಮಾಹಿತಿ ಕೊಟ್ಟಿದೆ. ಇದೇ ಮಾಹಿತಿ ಇಟ್ಟುಕೊಂಡೇ 22 ಲಕ್ಷ ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಲು ಮುಂದಾಗಿದೆ. ಆದ್ರೆ, ಇದಕ್ಕೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗಿವೆ. ಸರ್ಕಾರಿ ನೌಕರರು ಅಲ್ಲದ ಹಾಗೂ ತೆರಿಗೆ ಕಟ್ಟುದವರ ಕುಟುಂಬಗಳ ಬಿಪಿಎಲ್ ಕಾರ್ಡ್‌ಗಳು ಸಹ ರಿಜೆಕ್ಟ್ ಆಗಿವೆ. ಇದರಿಂದ ನೊಂದ ಜನರು ಸಾಮಾಜಿಕ ಜಾಲತಾಣ, ಮಾಧ್ಯಮಗಳ ಮೂಲಕ ಸರ್ಕಾರವನ್ನ ತೀವು ತರಾಟೆಗೆ ತೆಗೆದುಕೊಂಡಿದ್ದಾರೆ. ಪರಿಷ್ಕರಣೆ

ಇನ್ನು ಸರ್ಕಾರ ಆಪರೇಷನ್ ರೇಷನ್ ಕಾರ್ಡ್‌ಗೆ ಇಳಿದ ವಿಚಾರ ಬಿಜೆಪಿ ನಾಯಕರನ್ನು ಸಿಡಿದೇಳುವಂತೆ ಮಾಡಿದೆ. ಇವತ್ತು ಒಂದು ಹೆಜ್ಜೆ ಮುಂದಿಟ್ಟ ಕೇಸರಿ ಪಡೆ, ಬಿಪಿಎಲ್ ಕಾರ್ಡ್ ರದ್ದಾದವರ ಮನೆ ಮನೆಗಳಿಗೆ ತೆರಳಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ನಲ್ಲಿ ಆರ್. ಅಶೋಕ್ ಸೇರಿದಂತೆ ಹಲವು ನಾಯಕರು ಕಾರ್ಡ್‌ ರದ್ದಾದವರ ಸಮಸ್ಯೆ ಆಲಿಸಿದ್ದಾರೆ. ಇದು ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ತಿಳಿದ ಸಿದ್ದರಾಮಯ್ಯ, ಕಾರ್ಡ್ ರದ್ದು ಮಾಡದಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಆದೇಶ ಮಾಡಿದ್ದಾರೆ. ಅಲ್ಲದೇ ವಿನಾಕಾರಣ ರದ್ದು ಮಾಡಿದರೆ ಕ್ರಮಕೈಗೊಳ್ಳುವ ಎಚ್ಚರಿಕೆಯನ್ನು ಸಹ ನೀಡಿದ್ದಾರೆ. ಇನ್ನು
ಈಗಾಗೇ ರದ್ದಾಗಿರುವ ಬಿಪಿಎಲ್ ಕಾರ್ಡ್‌ಗಳನ್ನು ಸಂಬಂಧಪಟ್ಟವರಿಗೆ ಸರಿ ಮಾಡಿ ವಾಪಸ್ ನೀಡುವಂತೆ ಖಡಕ್ ಸೂಚನೆ ನೀಡಿದ್ದಾರೆ. ಪರಿಷ್ಕರಣೆ

ಇದನ್ನೂ ನೋಡಿ : ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ Janashakthi Media

Donate Janashakthi Media

Leave a Reply

Your email address will not be published. Required fields are marked *