ರಾಮನಗರ: ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಸಂಭವಿಸಿದೆ. ಹೈವೇ
ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ಗೆ ಗುದ್ದಿದ್ದು, ಎದುರು ಬದಿಯಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಗುದ್ದಿ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಪುರುಷರು, ಹಾಗೂ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಾಮನಗರ ತಾಲೂಕಿನ ಸಂಗಬಸವನದೊಡ್ಡಿ ಬಳಿ ಮಂಗಳವಾರ ರಾತ್ರಿ ಅಪಘಾತ ಸಂಭವಿಸಿದೆ. ಸಂಗಬಸವನದೊಡ್ಡಿ ಗ್ರಾಮದ ಬಳಿ ಮೈಸೂರು ಕಡೆಗೆ ಹೋಗುತ್ತಿರುವಾಗ ಕಾರು ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿಯಾಗಿದ್ದು, ಡಿಕ್ಕಿ ರಭಸಕ್ಕೆ ಹೂಂಡಯ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ರಾಮನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದ್ನನೂ ಓದಿ : ನವಜಾತ ಶಿಶುವನ್ನು ಅಪಹರಿಸಿದ ಇಬ್ಬರು ನಕಲಿ ನರ್ಸ್; 36 ಗಂಟೆಗಳಲ್ಲಿ ಬಂಧನ
ಮೈಸೂರಿನಲ್ಲಿ ಪ್ರವಾಸಕ್ಕೆ ಬಂದಿದ್ದ ಸಾರಿಗೆ ಬಸ್ ಪಲ್ಟಿಯಾಗಿ 10 ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ. ಬಸ್ನಲ್ಲಿದ್ದ 36 ಮಕ್ಕಳ ಪೈಕಿ 10 ಮಕ್ಕಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಾಲಕ ಕುಡಿದು ಬಸ್ ಚಲಾಯಿಸುತ್ತಿದ್ದ ಎನ್ನಲಾಗಿದೆ. ಬೆಳಗಾವಿಯ ಖಾನಾಪುರ ತಾಲೂಕಿನ ಶಾಂತಿನಿಕೇತನ ಶಾಲೆಯ ಮಕ್ಕಳು ಮೈಸೂರಿಗೆ ಪ್ರವಾಸಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ನೋಡಿ : ಕೇಂದ್ರ ರಾಜ್ಯ ಸರ್ಕಾರಗಳ ರೈತ – ಕಾರ್ಮಿಕ ವಿರೋಧಿ ನೀತಿಯ ವಿರುದ್ಧ ಐತಿಹಾಸಿಕ ಹೋರಾಟಕ್ಕೆ ಸಿದ್ದತೆ