ಮುಸ್ಲಿಮರಿಗೆ ಮತದಾನದ ಹಕ್ಕು | ವಿವಾದಾತ್ಮಕ ಮಾತಿಗೆ ವಿಷಾದ ವ್ಯಕ್ತಪಡಿಸಿದ ಒಕ್ಕಲಿಗರ ಮಠದ ಪೀಠಾಧ್ಯಕ್ಷ

ಬೆಂಗಳೂರು: ಒಕ್ಕಲಿಗರ ಮಠದ ಪೀಠಾಧ್ಯಕ್ಷ ಚಂದ್ರಶೇಖರನಾಥ ಸ್ವಾಮೀಜಿ ನೀಡಿದ್ದ “ದೇಶದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕನ್ನು ರದ್ದುಗೊಳಿಸಬೇಕು” ಎಂಬ ವಿವಾದಿತ ಹೇಳಿಕೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸ್ವಾಮೀಜಿ, ಸಮಾವೇಶದಲ್ಲಿ ಮುಸಲ್ಮಾನರಿಗೆ ಮತದಾನದ ಹಕ್ಕು ರದ್ದುಪಡಿಸಬೇಕು ಎಂಬ ನನ್ನ ಹೇಳಿಕೆ ಚರ್ಚೆಗೆ ಕಾರಣವಗಿದೆ.

ಇದನ್ನೂ ಓದಿ: ಹೆದ್ದಾರಿ ದುರಸ್ತಿ ಮಾಡಿ ಅಂದ್ರೆ ದೂರು ದಾಖಲಿಸುತ್ತಾರೆ – ಮುನೀರ್‌ ಕಾಟಿಪಳ್ಳ

ಬಾಯಿತಪ್ಪಿನಿಂದ ನೀಡಿರುವ ಹೇಳಿಕೆಯಿಂದ ಮುಸಲ್ಮಾನ ಸಹೋದರರಿಗೆ ಬೇಸರವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಕಿಸಾನ್‌ ಸಂಘಟನೆ ನಡೆಸಿದ ಪ್ರತಿಭಟನೆಯಲ್ಲಿ ಚಂದ್ರಶೇಖರ ಸ್ವಾಮೀಜಿಯ ಪಾಲ್ಗೊಂಡಿದ್ದರು.

ಈ ವೇಳೆ ಸ್ವಾಮೀಜಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಪಾಕಿಸ್ತಾನದ ರೀತಿಯಲ್ಲಿ ಭಾರತದಲ್ಲೂ ಕಾನೂನು ಜಾರಿಯಾಗಬೇಕು. ಭಾರತದಲ್ಲಿ ಮುಸ್ಲಿಮರಿಗೆ ಮತ ಚಲಾಯಿಸುವ ಹಕ್ಕನ್ನು ರದ್ದು ಮಾಡಬೇಕು ಎಂದು ಹೇಳಿದ್ದರು. ಎಂಬ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದಾರೆ.

ಇದನ್ನೂ ನೋಡಿ:  ನಮ್ಮನ್ನು ಗೌರವಿಸುವ ಸಂವಿಧಾನ ಬರಬೇಕಂತೆ ಪೇಜಾವರರೇ “ನಮ್ಮನ್ನು ಅಂದ್ರೆ ನಿಮ್ಮನ್ನಾ” ಮಾತ್ರನಾ? – ಕೆ.ಎಸ್.‌ ವಿಮಲಾ

Donate Janashakthi Media

Leave a Reply

Your email address will not be published. Required fields are marked *