ಬಳ್ಳಾರಿ: ಬಳ್ಳಾರಿಯಲ್ಲಿ ಕೆಲ ದಿನಗಳಿಂದ ಬಾಣಂತಿ ಮಹಿಳೆಯ ಸುದ್ದಿ ಭಾರೀ ಸಂಚಲನ ಮೂಡಿಸಿದ್ದು, ಬಾಣಂತಿ ಮಹಿಳೆಯರ ಸಾವಿನ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ. ಆಸ್ಪತ್ರೆಗಳ ವಿರುದ್ಧ ಕುಟುಂಬಸ್ಥರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಇದೀಗ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯ ನಿರ್ದೇಶಕರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಬಳ್ಳಾರಿಯಲ್ಲಿ ಬಾಣಂತಿ ಮಹಿಳೆಯ ಸಾವು ಭಾರೀ ಸಂಚಲನ ಸೃಷ್ಟಿಸಿದೆ. ಜಿಲ್ಲೆಯಲ್ಲಿ ಈ ಬಗ್ಗೆ ಚರ್ಚೆಗಳೂ ನಡೆಯುತ್ತಿದೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಯಾಗಿದ್ದ 9 ಬಾಣಂತಿ ಮಹಿಳೆಯರು ತೀವು ಅಸ್ವಸ್ಥಗೊಂಡಿದ್ದರು ಎಂದು ವರದಿಯಾಗಿತ್ತು. ಈ ಪೈಕಿ ನಾಲ್ವರು ಬಾಣಂತಿ ಮಹಿಳೆಯರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಅಲ್ಲದೇ ಮುಸ್ಕಾನ್ ಅನ್ನೋ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಾವನ್ನಪ್ಪಿದ್ದರು. ಬಹು ಅಂಗಾಂಗಗಳ ವೈಫಲ್ಯದಿಂದ ಬಾಣಂತಿ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ : ಎನ್.ಇ.ಪಿ ಪದವಿ ವಿದ್ಯಾರ್ಥಿಗಳ 2021 ರಿಂದ ಇಲ್ಲಿಯವರೆಗೆ ಅಂಕಪಟ್ಟಿ ನೀಡದಿರುವುದು ಖಂಡಿಸಿ ಎಸ್‌ಎಫ್‌ಐ ಪ್ರತಿಭಟನೆಗೆ ಕರೆ
ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಹೆರಿಗೆ ಬಳಿಕೆ ಮಹಿಳೆಯೊಬ್ಬರು ಸಾವನ್ನಪ್ಪಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೂಡ್ಲಿಗೆ ತಾಲೂಕಿನ ಹಾಲಸಾಗರ ಗ್ರಾಮದ 20 ವರ್ಷದ ಮಹಾಲಕ್ಷ್ಮಿ ಎಂಬ ಮಹಿಳ ಸಾವನ್ನಪ್ಪಿರೋದಾಗಿ ವರದಿಯಾಗಿದೆ. ಭಾನುವಾರ ನಾರ್ಮಲ್ ಹೆರಿಗೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದ ಮಹಾಲಕ್ಷ್ಮಿ, ಬಳಿಕ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿತ್ತು ಎನ್ನಲಾಗಿದೆ. ಹೀಗಾಗಿ ಐಸಿಯುನಲ್ಲಿ ಇಟ್ಟು ಮೂರು ದಿನ ಚಿಕಿತ್ಸೆಯನ್ನೂ ವೈದ್ಯರು ನೀಡಿದ್ದರು. ಆದರೆ ಮಹಾಲಕ್ಷ್ಮಿ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಮಹಿಳೆ ಸಾವನ್ನಪ್ಪಿದ್ದು, ಇದಕ್ಕೆ ಅಲ್ಲಿನ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ ಎನ್ನಲಾಗಿದೆ. ಡೆಲಿವರಿ ವೇಳೆ ವ್ಯತ್ಯಾಸವಾಗಿ
ಮಹಾಲಕ್ಷ್ಮಿ ಗೆ ಆರೋಗ್ಯದಲ್ಲಿ ಏರುಪೇರಾಗಿದೆ. ಇಲ್ಲಿಗೆ ಬರುವ ಮೊದಲು ಮಹಾಲಕ್ಷ್ಮಿ ಚೆನ್ನಾಗಿದ್ದಳು ಎಂದು ಕುಟುಂಬಸ್ಥರು ಆರೋಪಿಸಿದ್ದಾರ ಎನ್ನಲಾಗಿದೆ.
ಬಾಣಂತಿ ಮಹಿಳೆ ಸಾವಿನ ಬಗ್ಗೆ ಬಿಮ್ಸ್ ವೈದ್ಯರು ಸ್ಪಷ್ಟನೆ ನೀಡಿದ್ದು, ಮಹಾಲಕ್ಷ್ಮಿ ಗೆ ಅನಿಮಿಯಾ ಇತ್ತು, ಮೊದಲು ಅವರು ಕೂಡ್ಲಿಗೆ ಪಿಹೆಚ್ ಸಿ ಗೆ ಕರೆದೊಯ್ದಿದ್ದರು. ಅಲ್ಲಿ ಆರೋಗ್ಯದಲ್ಲಿ ಏರುಪೇರಾಗಿತ್ತು, ಹೀಗಾಗಿ ಇಲ್ಲಿಗೆ ಕರೆದುಕೊಂಡು ಬಂದಿದ್ದರು. ನಾವು ಮೊದಲೇ ತಿಳಿಸಿ ಅಲ್ಲದೇ ನಮ್ಮ ಪ್ರಯತ್ನ ನಾವು ಮಾಡಿದ್ದೇವೆ ಎಂದು ಬಿಮ್ಸ್ ನಿರ್ದೇಶಕ ನಿರ್ದೇಶಕ ಗಂಗಾಧರ ಗೌಡ ಸ್ಪಷ್ಟನೆ ನೀಡಿದ್ದಾರೆ ಎನ್ನಲಾಗಿದೆ.
ಇದನ್ನೂ ನೋಡಿ : ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಕೃಷಿ, ಆರ್ ಡಿಪಿಆರ್ ಇಲಾಖೆಗಳ ಕಾರ್ಯ ನಿರ್ವಹಣೆಯ ಆಳ ಅಗಲ.. Janashakthi Media