ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರ: ಗುಪ್ತಾಂಗದಲ್ಲಿ ಕೋಲು ಮತ್ತು ಮೆಣಸಿನ ಪುಡಿಯನ್ನು ಹಾಕಿ ಹಿಂಸಾಚಾರ

ಜಲೌನ್‌:  ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಆಕೆ ಗುಪ್ತಾಂಗದಲ್ಲಿ ಕೋಲು ಮತ್ತು ಮೆಣಸಿನ ಪುಡಿಯನ್ನು ಹಾಕಿ ಹಿಂಸಾಚಾರ ನಡೆಸಿರುವಂತಹ ಕೃತ್ಯ  ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ಕುರಿತು ಟೈಮ್ಸ್‌ ಆಫ್‌ ಇಂಡಿಯಾ ವರದಿ ಪ್ರಕಟಿಸಿದೆ.

ಉತ್ತರ ಪುದೇಶದ ಜಲೌನ್‌ನಲ್ಲಿ ನಡೆದ ಭೀಕರ ಘಟನೆಯೊಂದರಲ್ಲಿ ನರ್ಸ್ ಒಬ್ಬರು ತನ್ನ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆಂದು ಆರೋಪಿಸಿದ್ದಾರೆ. ಇತರ ನಾಲ್ವರು ತನ್ನನ್ನು ಹೊಡೆದಿದ್ದಾರೆ ಎಂದಿದ್ದಾರೆ. ದೌರ್ಜನ್ಯಕ್ಕೆ ಒಳಗಾದ ಮಹಿಳೆಯ ಕುಟುಂಬಸ್ತರು ಈ ಬಗ್ಗೆ ವಿವರ ನೀಡಿದ್ದು, ಹಿಂಸಾಚಾರಿಗಳು ಆಕೆಯ ಖಾಸಗಿ ಭಾಗಗಳಿಗೆ ಕೋಲು ಮತ್ತು ಮೆಣಸಿನ ಪುಡಿಯನ್ನು ತುರುಕಿ ಹಿಂಸೆ ನೀಡಿದ್ದಾರೆ. ಇದಕ್ಕೂ ಮುಂಚೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ : ಮಧ್ಯಪ್ರದೇಶ: ಚಲಿಸುತ್ತಿದ್ದ ಆಂಬ್ಯುಲೆನ್ಸ್​ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಇಂದು ಬೆಳಗ್ಗೆ, ಚುರ್ಖಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಕೆಲಸಕ್ಕೆಂದು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ನರ್ಸ್ ಅನ್ನು ಅಡ್ಡಗಟ್ಟಿ, ಆಕೆಯನ್ನು ಪೊದೆಗೆ ಎಳೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ಆಕೆಯ ಪತಿ ವಿವರಿಸಿದ್ದಾರೆ.

ಆದರೆ, ಪೊಲೀಸರು ಬೇರೆಯೇ ಹೇಳಿಕೆ ನೀಡಿದ್ದಾರೆ. ವರದಿಗಳ ಪ್ರಕಾರ, ಆ ಮಹಿಳೆಯು ತನ್ನ ಹಳ್ಳಿಯ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಳು. ವಿವಾದದ ಸಂದರ್ಭದಲ್ಲಿ ವ್ಯಕ್ತಿ ಮತ್ತು ಆತನ ಕುಟುಂಬದವರು ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಹಂತದಲ್ಲಿ ಸಾಮೂಹಿಕ ಅತ್ಯಾಚಾರ ನಡೆದ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣವು ಸುತ್ತಮುತ್ತಲೂ ಆಕ್ರೋಶವನ್ನು ಹುಟ್ಟುಹಾಕಿದೆ. ಕಾರ್ಯಕರ್ತರು ಸತ್ಯವನ್ನು ಬಹಿರಂಗಪಡಿಸಲು ಸಂಪೂರ್ಣ ಮತ್ತು ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ್ದಾರೆ.

ಇದನ್ನೂ ನೋಡಿ : ಹಾಸನ ಲೈಂಗಿಕ ದೌರ್ಜನ್ಯ| ಪೆನ್‌ಡ್ರೈವ್ ಪ್ರಕರಣ – ಪ್ರಜ್ವಲ್​ಗಿಲ್ಲ ಬೇಲ್, ಜೈಲು ಗ್ಯಾರಂಟೀನಾ?? – ಕೆಎಸ್ ವಿಮಲಾ

Donate Janashakthi Media

Leave a Reply

Your email address will not be published. Required fields are marked *