ನವದೆಹಲಿ: ಯಂತ್ರದ ಶ್ರೀಕ್ಷೆಗಳನ್ನು ಪ್ರತ್ಯೇಕಿಸುವ ಮೂಲಕ ಇವಿಎಂಗಳನ್ನು ಹ್ಯಾಕ್ ಮಾಡಬಹುದು ಎಂದು ಹೇಳಿರುವ ವ್ಯಕ್ತಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
ಸೈಯದ್ ಶುಜಾ ಎಂಬಾತ ಸುಳ್ಳು ಮತ್ತು ಆಧಾರ ರಹಿತ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದೂರನ್ನು ಮಹಾರಾಷ್ಟ್ರದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ನೀಡಿದ್ದಾರೆ.
ನವೆಂಬರ್ 30ರಂದು ದಕ್ಷಿಣ ಮುಂಬೈನ ಸೈಬರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಮತ್ತು ಐಟಿ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಹಾಸನ| ಐಪಿಎಸ್ ಅಧಿಕಾರಿ ರಸ್ತೆ ಅಪಘಾತದಲ್ಲಿ ಸಾವು
ಮಹಾರಾಷ್ಟ್ರ ಚುನಾವಣೆಯಲ್ಲಿ ಯಂತ್ರದ ಫ್ರೀಕ್ವೆನ್ಸಿಗಳನ್ನು ಪ್ರತ್ಯೇಕಿಸುವ ಮೂಲಕ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು (ಇವಿಎಂ) ಹ್ಯಾಕ್ ಮಾಡಬಹುದು ಮತ್ತು ಟ್ಯಾಂಪರ್ ಮಾಡಬಹುದು ಎಂದು ವ್ಯಕ್ತಿಯೊಬ್ಬ ಹೇಳುವ ವೀಡಿಯೊವನ್ನು ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಂಡಿದ್ದರು.
ವಿಡಿಯೊದಲ್ಲಿನ ವ್ಯಕ್ತಿಯ ವಿರುದ್ಧ ಚುನಾವಣಾ ಆಯೋಗ ಈ ಕ್ರಮ ಕೈಗೊಂಡಿದೆ.
2019ರಲ್ಲಿ, ಇದೇ ರೀತಿಯ ಹೇಳಿಕೆ ನೀಡಿದ್ದ ಆತನ ವಿರುದ್ಧ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿತ್ತು. ಆದರೆ ಆತ ಬೇರೆ ದೇಶದಲ್ಲಿ ತಲೆಮರೆಸಿಕೊಂಡಿದ್ದ ಎಂದು ಮಹಾರಾಷ್ಟ್ರ, ಸಿಇಒ ಕಚೇರಿಯು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದೆ.
ಪ್ರಕರಣ ಸಂಬಂಥ ದಹಲಿ ಮತ್ತು ಮುಂಬೈ ಪೊಲೀಸರು ತವಿಖೆ ನಡೆಸುತ್ತಿದ್ದಾರೆ. ಇದು ಗಂಭೀರ ಅಪರಾಧವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೂ ಬಿಡುವುದಿಲ್ಲ ಎಂದು ಎಂದು ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಇವಿಎಂಗಳು ವೈಫೈ ಅಥವಾ ಬ್ಲೂಟೂತ್ ಸೇರಿದಂತೆ ಯಾವುದೇ ನೆಟ್‌ವರ್ಕ್‌ಗೆ ಸಂಪರ್ಕಿಸಲಾಗದ ಯಂತ್ರಗಳಾಗಿವೆ. ಅವು ಸಂಪೂರ್ಣವಾಗಿ ಟ್ಯಾಂಪರ್ ಪ್ರೊಫ್ ಆಗಿವೆ ಎಂದೂ ಚುನಾವಣಾ ಆರೋಗ ಸಮರ್ಥಿಸಿಕೊಂಡಿದೆ.
ಇದನ್ನೂ ನೋಡಿ: ಪುಸ್ತಕ ಬಿಡುಗಡೆ | “ಕಾಮ್ರೇಡ್ ಆಗಿ ನನ್ನ ಬದುಕು” |ಶೈಲಜಾ ಟೀಚರ್