ಪದವಿ ವಿದ್ಯಾರ್ಥಿಗಳ ಅಂಕಪಟ್ಟಿ ಸಮಸ್ಯೆ ಪರಿಹಾರಕ್ಕಾಗಿ ಉನ್ನತ ಶಿಕ್ಷಣ ಸಚಿವರಿಗೆ ಎಸ್ಎಫ್ಐ ನಿಯೋಗ ಮನವಿ

ಹಾವೇರಿ: ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಅಂಕಪಟ್ಟಿಗಳನ್ನು ನಾಲ್ಕು ವರ್ಷಗಳಿಂದ ವಿತರಣೆ ಮಾಡದಿರುವ ವಿಳಂಬ ನೀತಿಯನ್ನು ಖಂಡಿಸಿ, ಲೋಪ ದೋಷ ಸರಿಪಡಿಸಿ ಶೀಘ್ರವಾಗಿ ವಿತರಿಸುವಂತೆ ಹಾಗೂ ವಿವಿಗಳಿಗೆ ಅನುದಾನ ಬಿಡುಗಡೆಗೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಹಾವೇರಿ ಜಿಲ್ಲಾ ಸಮಿತಿಯ ಕಾರ್ಯಕರ್ತರು ಹಾವೇರಿಯ ನಗರದಲ್ಲಿ ಉನ್ನತ ಶಿಕ್ಷಣ ಸಚಿವ ಡಾ||ಎಮ್ .ಸಿ. ಸುಧಾಕರ ಅವರೊಂದಿಗೆ ಚರ್ಚೆ ನಡೆಸಿ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ರಾಜ್ಯ ಉಪಾಧ್ಯಕ್ಷ ಬಸವರಾಜ ಎಸ್ ಮಾತನಾಡಿ ಎನ್ಇಪಿ ಯಲ್ಲಿ ಆನ್ಲೈನ್ ಅಂಕಪಟ್ಟಿ ಜೊತೆಗೆ ಮುದ್ರಿತಾ ಅಂಕಪಟ್ಟಿ ನೀಡಬೇಕೆಂದು ಇದೆ. ಅದಲ್ಲದೆ ಈ ವಿಷಯಕ್ಕೆ ಸಂಬಂಧಿಸಿದಂತೆ ಮಾನ್ಯ ರಾಜ್ಯಪಾಲರು 22-12-2022 ರಂದು ಎಲ್ಲಾ ವಿಶ್ವವಿದ್ಯಾನಿಲಯಗಳು ಮುದ್ರಿತಾ ಅಂಕಪಟ್ಟಿ ವಿತರಿಸಬೇಕೆಂದು ಆದೇಶ ನೀಡಿದ್ದರು ಸಹ ವಿಶ್ವವಿದ್ಯಾನಿಲಯಗಳು ಪಾಲಿಸುತ್ತಿಲ್ಲ. ಆದರಿಂದ ತಕ್ಷಣ ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಿ ಅಂಕಪಟ್ಟಿ ವಿತರಣೆ ಮಾಡಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು.

ಇದನ್ನೂ ಓದಿ : ‘ದೆಹಲಿ ಚಲೋ’ ಘೋಷಿಸಿ ರೈತರ ಪ್ರತಿಭಟನಾ ಮೆರವಣಿಗೆ; ಎಲ್ಲೆಡೆ ಟ್ರಾಫಿಕ್ ಜಾಮ್‌

ಜೊತೆಗೆ ಅಂಕಪಟ್ಟಿ ವಿತರಣೆಯಲ್ಲಿ ಸುಮಾರು 200 ಕೋಟಿ ಹಣ ದುರ್ಬಳಕೆ ಆಗಿರುವುದು ಮೇಲ್ನೋಟಕ್ಕೆ ಕಾಣುತ್ತದೆ. ಆದರಿಂದ ಅಂಕ ಪಟ್ಟಿ ವಿತರಣೆಗೆ ಸಂಬಂದಿಸಿದಂತೆ ಉನ್ನತ ಮಟ್ಟದ ತನಿಖೆ ಮಾಡಬೇಕು ಹಾಗೂ ಹಾವೇರಿ ವಿಶ್ವವಿದ್ಯಾಲಯ ಸೇರಿದಂತೆ ಎಲ್ಲಾ ವಿವಿಗಳಿಗೆ ಅನುದಾನ ಬಿಡುಗಡೆ ಮಾಡಬೇಕು. 51 ಲಕ್ಷ ವಿದ್ಯಾರ್ಥಿಗಳಿಗೆ ತಕ್ಷಣ ಮುದ್ರಿತಾ ಅಂಕಪಟ್ಟಿ ವಿತರಿಸಬೇಕು, ಯು ಸಿ ಸಿ ಎಂ ಎಸ್ ( UCCMS) ರದ್ದುಗೊಳಿಸಬೇಕು, ನಿಗದಿತ ಸಮಯದಲ್ಲಿ ಫಲಿತಾಂಶ ಕೊಡಬೇಕು. ಪದವಿ ಮುಗಿಸಿ ಮುಂದಿನ ಬಿ ಎಡ್ ವಿದ್ಯಾಭ್ಯಾಸ ಕ್ಕೆ ಅಂಕಪಟ್ಟಿ ಮೇಲೆ ಕುಲ ಸಚಿವರ ಸಹಿ ಮತ್ತು ಮೊಹರು ಕಡ್ಡಾಯವಾಗಿ ಹಾಕಬೇಕು ಎಂದು ಒತ್ತಾಯಿಸಿದರು.

ಮನವಿ ಪತ್ರ ಸ್ವೀಕರಿಸಿ ಉನ್ನತ ಶಿಕ್ಷಣ ಸಚಿವ ಡಾ|| ಎಮ್ ಸಿ ಸುಧಾಕರ ಮಾತನಾಡಿ, ಯುಸಿಸಿಎಮ್ಎಸ್ ತಂತ್ರಾಂಶ ಸಮಸ್ಯೆ ಇದೆ ಕೂಡಲೇ ಸರಿಪಡಿಸಲು ಇಲಾಖೆಗೆ ತಿಳಿಸುತ್ತೇವೆ. ಎಸ್ಎಸ್ಪಿ ಪೋರ್ಟಲ್ ಓಪನ್ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅವರೊಂದಿಗೆ ಚರ್ಚೆ ನಡೆಸಿ ದಿನಾಂಕ ವಿಸ್ತರಣೆ ಮಾಡಲು ಕ್ರಮ ತೆಗೆದುಕೊಳ್ಳುತ್ತೇವೆ. ವಿದ್ಯಾರ್ಥಿ ಸಮುದಾಯದ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನ ಮಾಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಕಾಲೇಜ್ ಘಟಕ ಅಧ್ಯಕ್ಷ ತಿರಕಪ್ಪ ಬಾತಿ, ಕಾರ್ಯದರ್ಶಿ ಲಕ್ಷ್ಮಿ ಲಮಾಣಿ, ಉಪಾಧ್ಯಕ್ಷೆ ಜ್ಯೋತಿ ಪಟ್ಟಣಶೆಟ್ಟಿ, ಸಂಜನಾ ಬಾರ್ಕಿ, ಮುಖಂಡರಾದ ಕುಮಾರಸ್ವಾಮಿ ಕೆ.ಟಿ, ಕುಬೇರ್ ಗೋಣಿ, ಅಜೇಯ ಲಮಾಣಿ, ಶ್ವೇತ ಬೇವಿನಹಳ್ಳಿ ಉಪಸ್ಥಿತರಿದ್ದರು.

ಇದನ್ನೂ ನೋಡಿ : ಕಷ್ಟದಲ್ಲಿರುವ ಕನ್ನಡವನ್ನು ಸಂರಕ್ಷಿಸೋಣ Janashakthi Media

Donate Janashakthi Media

Leave a Reply

Your email address will not be published. Required fields are marked *