ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿ ಅಕ್ರಮ ಮಾರಾಟ; 127 ಮುಖ್ಯ ಶಿಕ್ಷಕರಿಗೆ ನೋಟಿಸ್

ಬಾಗಲಕೋಟೆ: ಜಿಲ್ಲೆಯಲ್ಲಿ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. 18 ಲಕ್ಷ ರೂಪಾಯಿ ಮೌಲ್ಯದ ಹಾಲಿನ ಪುಡಿ, ರಾಗಿ ಹಿಟ್ಟು, ಮತ್ತು ಎಣ್ಣೆಯನ್ನು ಜಪ್ತಿ ಮಾಡಲಾಗಿದೆ. 127 ಮುಖ್ಯ ಶಿಕ್ಷಕರಿಗೆ ನೋಟಿಸ್ ನೀಡಲಾಗಿದ್ದು, ಈ ಅಕ್ರಮದಲ್ಲಿ ಶಿಕ್ಷಕರ ಪಾತ್ರವೂ ಇದೆ ಎಂಬ ಅನುಮಾನವಿದೆ.

ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿಗೆ ಕನ್ನ ಹಾಕುವ ದಂದೆ ಮೊದಲಿಂದಲೂ ನಡೆಯುತ್ತಿದ್ದೂ, ಆಗಾಗ ಪೊಲೀಸರು ಸಣ್ಣ ಪುಟ್ಟ ದಾಳಿ ಮಾಡುವುದು ವಾಪಸ್ ಬಿಟ್ಟು ಕಳಿಸುವುದು ನಡೆಯುತ್ತಲೇ ಇತ್ತು. ಆದರೆ ಕಳೆದ ಅಕ್ಟೋಬರ್ 5ರಂದು ಪೊಲೀಸರು ಭರ್ಜರಿ ದಾಳಿ ನಡೆಸಿ ಟನ್ ಗಟ್ಟಲೆ ಹಾಲಿನ ಪ್ಯಾಕೆಜ್ ಜಪ್ತಿ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 127 ಜನ ಮುಖ್ಯಶಿಕ್ಷಕರಿಗೆ ಪೊಲೀಸರು ನೊಟೀಸ್ ನೀಡಿದ್ದಾರೆ.

ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಓದುವ ಬಡ ಮಕ್ಕಳಿಗೆ ಪೌಷ್ಟಿಕತೆ ಹೆಚ್ಚಿಸಲು ಸರ್ಕಾರ ಕ್ಷೀರ ಭಾಗ್ಯ ಯೋಜನೆ ಜಾರಿಗೆ ತಂದಿದೆ. ಈ ಯೋಜನೆ ಅಡಿಯಲ್ಲಿ ಮಕ್ಕಳಿಗೆ ಹಾಲು ನೀಡಲಾಗುತ್ತೆ, ಸರ್ಕಾರದ ಮಹತ್ವ ಪೂರ್ಣ ಯೋಜನೆಗೂ ಕನ್ನ ಹಾಕಲಾಗುತ್ತಿದೆ.

ಇದನ್ನೂ ಓದಿ: ಟಾಟಾ ಸಾಮ್ರಾಜ್ಯದ ಬೆಳವಣಿಗೆ| ವೈಷ್ಣವರಾಗಿ ಪರಿವರ್ತನೆಗೊಂಡ ಮಾರ್ವಾಡಿಗಳ ದೇಶವ್ಯಾಪಿ ವಿಸ್ತರಣೆ – ಭಾಗ – 5

ಖದೀಮರು ಕಾಳ ಸಂತೆಯಲ್ಲಿ ಹಾಲಿನ ಪೌಡರ್‌ ಮಾರಾಟ ಮಾಡುವ ಜಾಲ ಪತ್ತೆಯಾಗಿದೆ. ಕಳೆದ ಅಕ್ಟೋಬರ್ 5 ರಂದು ಬಾದಾಮಿ ತಾಲ್ಲೂಕಿನ ಸೂಳಿಕೇರಿ ಗ್ರಾಮದಲ್ಲಿ ಭರ್ಜರಿ ದಾಳಿ ನಡೆದಿತ್ತು. ಶಮ್ಮಲ್ಲಿ ಸಂಗ್ರಹ ಮಾಡಿ ಇಟ್ಟಿದ್ದ ಒಟ್ಟು, 18.14 ಲಕ್ಷ ರೂ. ಮೌಲ್ಯದ ಹಾಲಿನ ಪುಡಿ ಪ್ಯಾಕೆಟ್, ರಾಗಿ ಹಿಟ್ಟು, ಅಡುಗೆ ಎಣ್ಣೆ ಪ್ಯಾಕೇಟ್ ಜಪ್ತಿ ಮಾಡಲಾಗಿತ್ತು.

ದಾಳಿ ವೇಳೆ ಆರೋಪಿ ಸಿದ್ಧಪ್ಪ ಎಂಬಾತನನ್ನು ಬಂಧಿಸಲಾಗಿತ್ತು. ವಿಚಾರಣೆಯಲ್ಲಿ ಸಿದ್ದಪ್ಪ ತಾನು ಯಾವ ಯಾವ ಸರಕಾರಿ ಶಾಲೆಯಿಂದ ಹಾಲಿನ ಪ್ಯಾಕೆಟ್ ಪಡೆದಿದೆ ಎಂದು ಬಾಯಿ ಬಿಟ್ಟಿದ್ದಾನೆ. ಆತನ ಹೇಳಿಕೆ ಮೇರೆಗೆ ಬಾಗಲಕೋಟೆ ಸಿಇಎನ್ ಠಾಣೆ ಪೊಲೀಸರು ಹುನಗುಂದ ಬಾದಾಮಿ, ಬಾಗಲಕೋಟೆ ಮೂರು ತಾಲೂಕಿನ ಸರಕಾರಿ ಶಾಲೆಗಳು 127ಕ್ಕೂ ಅಧಿಕ ಮುಖ್ಯ ಶಿಕ್ಷಕರಿಗೆ ವಿಚಾರಣೆಗೆ ಹಾಜರಾಗಲು ಪೊಲೀಸರು ನೋಟೀಸ್ ನೀಡಿದ್ದಾರೆ.

ಸಿದ್ದಪ್ಪ ಕಿತ್ತಲೆ, ಶ್ರೀಶೈಲ್ ಅಂಗಡಿ ಕೆಳಗೆ ಉಪಗುತ್ತಿಗೆದಾರನಾಗಿದ್ದನು. ಅಕ್ರಮವಾಗಿ ಈ ದಾಸ್ತಾನನ್ನು ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದನು, ಈ ಹಿನ್ನೆಲೆಯಲ್ಲಿ, ಶ್ರೀಶೈಲ ಅಂಗಡಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆರೋಪಿ ಸಿದ್ದಪ್ಪ ಕಿತ್ತಲಿ 4475 ಕೆಜಿ ಹಾಲಿನ ಪುಡಿ ಪಾಕೇಟ್, 325 ಕೆಜಿ ರಾಗಿ ಹಿಟ್ಟು, 50 ಕೆಜಿ ಅಡುಗೆ ಎಣ್ಣೆ ಪಾಕೇಟ್ ಗಳನ್ನು ಸಂಗ್ರಹ ಮಾಡಿ, ಒಂದು ಬೊಲೆರೋ ವಾಹನದಲ್ಲಿ ಮಹಾರಾಷ್ಟ್ರಕ್ಕೆ ಸಾಗಿಸ್ತಿದ್ದ.

ಸದ್ಯ 127ಕ್ಕೂ ಅಧಿಕ ಶಿಕ್ಷಕರಿಗೆ ನೋಟಿಸ್ ನೀಡಿದ ಪೈಕಿ ಕೇವಲ 27 ಜನ ಮುಖ್ಯಶಿಕ್ಷಕರು ಮಾತ್ರ ವಿಚಾರಣೆಗೆ ಹಾಜರಾಗಿದ್ದಾರೆ. ಮಕ್ಕಳ ಹಾಲಿಗೆ ಕನ್ನ ಹಾಕಿದ ಪ್ರಕರಣ ಸ್ಮಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಇದು ಶಿಕ್ಷಕರ ಪಾತ್ರವಿಲ್ಲದೆ ನಡೆಯೋಕೆ ಸಾಧ್ಯವೇ ಇಲ್ಲ. ಕೇವಲ ನೋಟೀಸ್ ಕೊಟ್ಟರೆ ಸಾಲದು ಅವರ ಮೇಲೆ ಕಠಿಣ ಕ್ರಮ ಆಗಬೇಕು ಅಂತಿದ್ದಾರೆ.

ಇದನ್ನೂ ನೋಡಿ: ವಾಯುಭಾರ ಕುಸಿತ: ಕರ್ನಾಟಕದಲ್ಲಿ ಡಿಸೆಂಬರ್‌ನಲ್ಲಿ ಭರ್ಜರಿ ಮಳೆ ನಿರೀಕ್ಷೆ – IMD ಮುನ್ಸೂಚನೆ Janashakthi Media

Donate Janashakthi Media

Leave a Reply

Your email address will not be published. Required fields are marked *