ಬಂಟ್ವಾಳ: ಕೋಮುಭಾವನೆ ಕೆರಳಿಸುವ ಅವಹೇಳನಕಾರಿ ಬರಹ ಬರೆದು ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ ಸಾಮಾಜಿಕ ಜಾಲತಾಣದ ಮೂಲಕ ವೈರಲ್ ಮಾಡಿದ ಆರೋಪದಲ್ಲಿ ಬಂಟ್ವಾಳ ತಾಲೂಕಿನ ಅರಳ ಗ್ರಾಮದ ನವಗ್ರಾಮ ಸೈಟ್ ನಿವಾಸಿಯೊಬ್ಬನನ್ನು ಬಂಧಿಸಿರುವ ಘಟನೆ ನಡೆದಿದೆ.
ಜಯಪೂಜಾರಿ ಎಂಬಾತ ಆರೋಪಿಯಾಗಿದ್ದು, ಪೊಲೀಸರ ಬಂಧನಕ್ಕೆ ಒಳಗಾಗಿದ್ದಾನೆ. ಈತನ ಫೇಸ್ ಬುಕ್ ಖಾತೆಯಲ್ಲಿ ಮಹಿಳೆಯರ ಬಗ್ಗೆ ಮಾನಕ್ಕೆ ಕುಂದುಂಟಾಗುವ, ಮಹಿಳೆಯ ತೇಜೋವಧೆಯುಂಟಾಗುವ ರೀತಿಯಲ್ಲಿ ಮತ್ತು ಧರ್ಮ ಧರ್ಮಗಳ ಮಧ್ಯೆ ಕೋಮುಭಾವನೆ ಕೆರಳುವ ರೀತಿಯಲ್ಲಿ ಅವಹೇಳನಕಾರಿಯಾಗಿ ಬರಹ ಬರೆದು ಪೋಸ್ಟ್ ಮಾಡಿದ್ದಾನೆ.
ಇದನ್ನೂ ಓದಿ: ವಿಡಿಯೋ ತೆಗೆದುಹಾಕಲು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಕೇರಳ ಹೈಕೋರ್ಟ್
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವಂತೆ ಮಾಡಿರುವುದರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೋಲೀಸರು ಸುಮೋಟೋ ಕೇಸ್ ದಾಖಲಿಸಿ ಈತನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಇದನ್ನೂ ನೋಡಿ: ಸೇಡಂ ಸನಾತನಿ ಉತ್ಸವ : ಸಂವಿಧಾನ ವಿರೋಧ ಉತ್ಸವ – ಚಿಂತಕರ ಅಭಿಮತ Janashakthi Media