ಬೆಳಗಾವಿ : ರಾಜ್ಯದಲ್ಲಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶಗಳ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಪಡಿತರ ಕಾರ್ಡ್ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಅವರು ಹೇಳಿದರು.
ಇಂದು ವಿಧಾನ ಪರಿಷತ್ ನಲ್ಲಿ ವಿರೋದ ಪಕ್ಷದ ಸದಸ್ಯರು ರಾಜ್ಯದಲ್ಲಿನ ಬಿಪಿಎಲ್ ಪಡಿತರ ಕಾರ್ಡ್ ರನ್ನು ಕುರಿತು ಕೇಳಿದ ಪ್ರಶ್ನೆಗೆ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ ಹೇಕ್ ಮುನಿಯಪ್ಪ ನವರು ಮಾತನಾಡಿ, ಪಡಿತರ ಕಾರ್ಡ್ ಗಳನ್ನು ಪರಿಷ್ಕರಣೆ ಮಾಡಲು ನಾವು ಮುಂದಾದಾಗ ಕೇಂದ್ರ ಸರ್ಕಾರದ ಮಾನದಂಡಗಳ ಅಡಿಯಲ್ಲಿಯೇ ನಾವು ಪರಿಷ್ಕರಣೆ ಮಾಡಲು ಹೋಗಿದ್ದು, ಕೆಲವು ಗೊಂದಲಗಳಿಂದ ನಾವು ಅದನ್ನು ತಡೆಹಿಡಿದಿದ್ದೀವಿ.
ಅರ್ಹರ ಬಿಪಿಎಲ್ ಪಡಿತರ ಕಾರ್ಡ್ ದಾರರ ಯಾವುದೇ ಕಾರ್ಡ್ ಗಳು ರಾಗದಂತೆ ಅಧಿಕಾರಿಗಳಿಗೆ ಸೂಚಿಸಿ ರದ್ದಾದ ಬಿಪಿಎಲ್ ಕಾರ್ಡ್ ಗಳನ್ನು ಪುನರ್ ಸ್ಥಾಪಿಸಲಾಯಿತು. ಆದರೂ ಪ್ರಸ್ತುತ ಬಿಪಿಎಲ್ ಪಡಿತರ ಕಾರ್ಡ್ ಗಳಲ್ಲಿ ಅನರ್ಹ ಫಲಾನುಭವಿಗಳ ಪತ್ತೆಹಚ್ಚಲು ಗ್ರಾಮ ಪಂಚಾಯತಿ ಮಟ್ಟದಲ್ಲಿ ನಮ್ಮ ಅಧಿಕಾರಿಗಳು ಪರಿಪಕ್ವವಾದ ಅಂಕಿ ಅಂಶಗಳನ್ನು ಗುರುತಿಸಿ ನಂತರ ಅರ್ಹರಿಗೆ ಬಿಪಿಎಲ್ ಪಡಿತರ ಕಾರ್ಡ್ ವಿತರಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಪ್ರಸ್ತುತ ಈಗಿರುವ ಬಿಪಿಎಲ್ ಕಾರ್ಡ್ ಗಳಲ್ಲಿ ಶೇಕಡಾ 20 ರಷ್ಟು ಕಾರ್ಡ್ ಗಳು ಎಪಿಎಲ್ ನವರು ಸೇರಿದ್ದಾರೆ ಎಂದು ಅಂದಾಜಿಸಲಾಗಿದ್ದು ಇದನ್ನು ಅತಿ ಶೀಘ್ರದಲ್ಲಿ ಪರಿಷ್ಕರಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುತ್ತೇವೆ. ರಾಜ್ಯದಲ್ಲಿ ಸುಮಾರು ಶೇಕಡ 65%. ರಿಂದ 75% ರಷ್ಟು ಜನಸಂಖ್ಯೆಗೆ ಬಡತನ ರೇಖೆಗಿಂತ ಕೆಳಗಿರುವಂತೆ ಕಾರ್ಡ್ ಗಳನ್ನು ನೀಡಲಾಗಿದ್ದು, ಅದನ್ನು ಪರಿಷ್ಕರಿಸಿಲಾಗುತ್ತಿದ್ದು, ಈ ಪ್ರಕ್ರಿಯೆ ಪೂರ್ಣಗೊಂಡ ನಂತರ ನಿಜವಾದ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಕ್ಕೆ ತೊಂದರೆಯಾಗದಂತೆ ಜಾಗ್ರತೆ ವಹಿಸಿ ನೀಡಲಾಗುವುದು ಎಂದು ಸದನದಲ್ಲಿ ಉತ್ತರಿಸಿದರು.
ಇದನ್ನೂ ಓದಿ : ಕೋಮುಭಾವನೆ ಕೆರಳಿಸುವ ಬರಹ ಬರೆದು ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿದ ವ್ಯಕ್ತಿ ಬಂಧನ
ಅಕ್ರಮ ವಡಿವದ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ವ್ಯಕ್ತಿಗಳ ವಿರುದ್ಧ ಆರೋಪ ಸಾಬೀತಾದಲ್ಲಿ ನ್ಯಾಯಾಲಯದ ಆದೇಶದಂತೆ ಕಾನೂನು ರೀತಿ ಕ್ರಮ ವಹಿಸಲಾಗುವುದು ಎಂದು ಅಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನ ಮಾವನಶಾಸ್ತ್ರ ಇಲಾಖೆಯ ಸಚಿವರಾದ ಕೆ.ಎಚ್.ಮುನಿಯಪ್ಪ, ಹೇಳಿದರು.
ಅಕ್ರಮ ಪಣತರ ವಿರುದ್ಧ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ ಪ್ರಕ್ರಿಯೆಯು ಬಾಲ್ತಿಯಲ್ಲಿದೆ ಎಂದು ಇದೇ ಸಂದರ್ಭದಲ್ಲಿ ಸದನಕ್ಕೆ ಅವರು ತಿಳಿಸಿದರು. ವಿಧಾನ ಪರಿಷತನಲ್ಲಿ ಡಿಸೆಂಬರ್ 9ರಂದು ಸದಸ್ಯರಾದ ಟಿ.ಎನ್.ಜವರಾಯಿಗಳಿಡ, ಐವನ್ ಡಿ ಸೋಜಾ, ಸಿ.ಟಿ.ರವಿ, ಶರವಣ.ಟಿ.ಎ, ವಿರಾಣಿ ರುದ್ರವ ಹನುಮಂತಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು.
ರಾಜ್ಯಾದ್ಯಂತ ಜನವರಿ 2021 ರಿಂದ ಮೇ 2023ರ ಅವಧಿಯಲ್ಲಿ 3,35,483 ಅನರ್ಹ ಅದ್ಯ ಪಾ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಲಾಗಿದ್ದು, ಇವರಿಂದ ದೂ. 13,51,30,858 ಗಳ ದಂಡ ವಿಧಿಸಿ, ಅನರ್ಹರಿಗೆ ನೀಡಿದ
ಸವಲತ್ತುಗಳಿಂದ ಉಂಟಾದ ನಕ್ಷ್ಯವನ್ನು ಭರಿಸಲು ಸರ್ಕಾರ ಕ್ರಮವಹಿಸಿದೆ.
ಆಹಾರ ಇಲಾಖೆಯ ಉಗ್ರಾಣಗಳಿಂದ ಅಕ್ರಮವಾಗಿ ಕಾಳ ಸಂತೆಯಲ್ಲಿ ಅಕ್ಕಿ ಮಾರಾಟವಾಗುತ್ತಿರುವುದನ್ನು ತಪ್ಪಿಸಲು ಸರ್ಕಾರ ಕ್ರಮ ವಹಿಸಿದೆ. ಸಾರ್ವಜನಿಕ ವಿತರಣಾ ಪದ್ಮತಿಯಡಿ ವಿತರಿಸುವ ಪಡಿತರ ಅಕ್ರಮ ಸಾಗಣೆ ಕಂಡು ಬಂದಲ್ಲಿ ಕೂಡಲೇ ದಾಳಿ ನಡೆಸಿ, ಅಗತ್ಯ ವಸ್ತುಗಳ ಕಾಯ್ದೆ 1955 ರಡಿ ಪ್ರಕರಣ ದಾಖಲಿಸಿ, ಅಕ್ರಮ ಪಡಿತರ ದಾಸ್ತಾನು ಮುಟ್ಟುಗೋಲು ಹಾಕಿಕೊಂಡು, ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಮುಟ್ಟುಗೋಲು ದಾಸ್ತಾನನ್ನ ವಿಲೇ ಮಾಡಿ, ವಿದೇ ಪಡಿಸಿದ ಪಡಿತರ ಮೊತ್ತವನ್ನು ಸರ್ಕಾರಕ್ಕೆ ಜಮೆ ಮಾಡಲಾಗುತ್ತಿದ ಎಂದರು.
ರಾಜ್ಯಾದ್ಯಂತ 2024 25ನೇ ಸಾಲಿನಲ್ಲಿ 213 ಎನ್.ಐ.ಆರ್ ದಾಖಲಿಸಿ ಒಟ್ಟು ರೂ. 2,68,07,872 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು, 238 ಆರೋಪಿಗಳನ್ನು ಬಂಧಿಸಲಾಗಿರುತ್ತದೆ. ಈ ಕುರಿತು ಪರಿಶೀಲಿಸಲು ಮೇಲ್ವಿಚಾರಣೆ ಮಾಡಲು ಇಲಾಖಾ ವತಿಯಿಂದ ನೋಡಲ್ ಅಧಿಕಾರಿಗಳನ್ನು ವಿಭಾಗವಾರು ನೇಮಕ ಮಾಡಲಾಗಿದೆ ಎಂದರು. ಈ ಹಿಂದೆ ಕೆಲವು ಅದ್ರ ವಾ ಪಡಿತರ ಚೀಟಿ ಹೊಂದಲು ಅರ್ಹರಿದ್ದ ಫಲಾನುಭವಿಗಳು ಹಾಲಿ ಬಡತನ ರೇಖೆಗಿಂತ ಮೇಲೆ ಬಂದಿದ್ದು, ಸದರಿ ಪಡಿತರ ಚೀಟಿಗಳನ್ನು ಅದ್ಮವೇಷದ ವಡಿತರ ಚೀಟಿಗಳನ್ನಾಗಿ ಪರಿವರ್ತಿಸಲು ಕ್ರಮ ವಹಿಸಲಾಗುತ್ತಿದೆ ಎಂದರು.
ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು, ಜಿಎಸ್ ಟಿ ಅಥವಾ ಸಿಎಸ್ ಟಿ ಪಾವತಿದಾರರ ವಿವರಗಳನ್ನು ಕುಟುಂಬ ತಂತ್ರಾಂಶದಿಂ ಪಡೆದು ದಂಡ ವಸೂಲಿ ಮಾಡಲಾಗುತ್ತಿದೆ ಎಂದು ತಿಳಿಸಿದರು. ಪ್ರಸ್ತುತ ಆಹಾರ ಇಲಾಖೆಯಲ್ಲಿ ಬಳಸುವ ಸರ್ವ ಹಳೆಯದಾಗಿದೆ, ಈ ಕಾರಣದಿಂದಾಗಿ ಎನ್ ಐಸಿಯಿಂದ ಕೆಎಫ್ ಡಿಸಿ ಗೆ ಅಹಾರ ತಂತ್ರಾಂಶದ ಮೈಗ್ರೇಶನ್ ಕಾರ್ಯ ಅಂತಿಮ ಹಂತದಲ್ಲಿದ್ದು, ಈ ಕಾರ್ಯಪೂರ್ಣವಾದ ನಂತರ ಅದ್ಯವಾ ಪಡಿತರ ಚೀಟಿ ನೀಡುವ ಕಾರ್ಯ ಹಾಗೂ ಪಡಿತರ ತಿದ್ದುಪಡಿ ಕಾರ್ಯ ನಿರಂತರವಾಗಿ ನಡೆಯಲಿದೆ ಎಂದು ಬಾಕಿ ಅರ್ಜಿಗಳ ಕಾಲ ಮಿತಿ ವಿಧೇಯ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಇದನ್ನೂ ನೋಡಿ : ಸೇಡಂ ಸನಾತನಿ ಉತ್ಸವ : ಸಂವಿಧಾನ ವಿರೋಧ ಉತ್ಸವ – ಚಿಂತಕರ ಅಭಿಮತ Janashakthi Media