ಮಾಜಿ ಮುಖ್ಯಮಂತ್ರಿ ಎಸ್‌. ಎಂ. ಕೃಷ್ಣ ಅವರ ನಿಧನ: ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ :‌ ಇಂದು ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌. ಎಂ. ಕೃಷ್ಣ ಅವರ ನಿಧನದ ಕುರಿತು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿ ಮಾತನಾಡಿದ್ದಾರೆ.

ಎಸ್‌.ಎಂ.ಕೃಷ್ಣ ಅವರು, ಮುತ್ಸದ್ಧಿ, ದೂರದೃಷ್ಟಿ ಉಳ್ಳವರಾಗಿದ್ದರು. ದೀರ್ಘಕಾಲ ರಾಜಕಾರಣ ಮಾಡಿದ್ದರು. ನಾನು ವಿದ್ಯಾರ್ಥಿ ಆಗಿದ್ದಾಗ ಎಸ್‌.ಎಂ.ಕೃಷ್ಣ ಅವರು ಕರೆದಿದ್ದ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯ ಸಭೆಯಲ್ಲಿ ಭಾಗವಹಿಸಿದ ಬಳಿಕ ನಾನು ಲೋಹಿಯಾ ಅವರ ಸಮಾಜವಾದಿ ಪಕ್ಷ ಸೇರ್ಪಡೆಯಾದೆ.

ಎಸ್‌.ಎಂ.ಕೃಷ್ಣ ಅವರು, 1962 ರ ಸ್ವತಂತ್ರವಾಗಿ ವಿಧಾನಸಭೆಗೆ ಸ್ಪರ್ಧಿಸಿದ್ದರು. ವಿಧಾನಸಭೆ, ವಿಧಾನ ಪರಿಷತ್‌, ರಾಜ್ಯಸಭೆ, ಲೋಕಸಭೆ ನಾಲ್ಕೂ ಸದನಗಳ ಸದಸ್ಯರೂ ಆಗಿದ್ದು, ರಾಜ್ಯದ ಮುಖ್ಯಮಂತ್ರಿ
ವಿಧಾನಸಭೆ ಸ್ಪೀಕರ್, ಕೇಂದ್ರ ಸಚಿವರು ಹಾಗೂ ರಾಜ್ಯಪಾಲರೂ ಆಗಿದ್ದ ಅಪರೂಪದ ರಾಜಕಾರಣಿ.

ಇದನ್ನೂ ಓದಿ : ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ನಿಧನ

ಎಸ್‌.ಎಂ.ಕೃಷ್ಣ ಅವರು ಮಹಾರಾಷ್ಟ್ರ ರಾಜ್ಯಪಾಲರಾಗಿದ್ದಾಗಲೇ ನಾನು ಕಾಂಗ್ರೆಸ್‌ ಸೇರಿದ್ದು. ಅವರು ರಾಜ್ಯಪಾಲರಾಗಿದ್ದಾಗ ನಾನು ಅವರನ್ನು ಭೇಟಿಯಾಗಿ, ನಾನು ಕಾಂಗ್ರೆಸ್ ಸೇರುವ ತೀರ್ಮಾನವನ್ನು ಅವರಿಗೆ ತಿಳಿಸಿದೆ. ಅವರು ನನ್ನ ತೀರ್ಮಾನವನ್ನು ಸ್ವಾಗತಿಸಿದ್ದರು.

ಒಳ್ಳೆ ಸಂಸದೀಯ ಪಟು, ಎಲ್ಲರನ್ನೂ ಗೌರವದಿಂದ ಕಾಣುತ್ತಿದ್ದರು. ಯಾವತ್ತೂ ದ್ವೇಷದ ರಾಜಕಾರಣ ಮಾಡಿದವರಲ್ಲ. ಅವರ ಕಾಲದಲ್ಲಿ ಡಾ.ರಾಜ್ ಕುಮಾರ್ ಅವರ ಅಪಹರಣ ಆಗಿ ಆ ಸಂದರ್ಭದ ದೊಡ್ಡ ಸವಾಲನ್ನು ಎದುರಿಸಿದ್ದರು. ಅದನ್ನು ನಿಭಾಯಿಸಿದ್ದರು.

ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಸಿಂಗಾಪುರದಂತೆ ಮಾಡಬೇಕು ಎನ್ನುವ ಉದ್ದೇಶ ಹೊಂದಿದ್ದರು. ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಎನ್ನುವ ಹೆಗ್ಗಳಿಕೆ ಬರಲು ಎಸ್.ಎಂ.ಕೃಷ್ಣ ಅವರ ಕೊಡುಗೆ ಅಪಾರ. ಕಾಂಗ್ರೆಸ್‌ ಮೂಲಕ ಸುದೀರ್ಘ ರಾಜಕಾರಣ ಮಾಡಿ ಬಿಜೆಪಿ ಸೇರಿ ಒಂದು ವರ್ಷಕ್ಕೆ ರಾಜಕೀಯ ನಿವೃತ್ತಿ ಘೋಷಿಸಿದ ದಕ್ಷ ಆಡಳಿತಗಾರ, ಸಜ್ಜನ-ಮುತ್ಸದ್ದಿ ರಾಜಕಾರಣಿ ಆಗಿದ್ದರು ಎಂದರು.

ಇದನ್ನೂ ನೋಡಿ : ಕೋವಿಡ್‌ ಹಣ ತಿಂದವರನ್ನು ಬಿಡಲ್ಲ: ಡಿಸಿಎಂ ಡಿಕೆ ಶಿವಕುಮಾರ್ Janashakthi Media

Donate Janashakthi Media

Leave a Reply

Your email address will not be published. Required fields are marked *