ಬೆಳಗಾವಿ: ನಿಯಮ ಉಲ್ಲಂಘನೆ ಮಾಡಿ ಡ್ರಗ್ಸ್ ಮಾರಾಟ ಮಡುತ್ತಿದ್ದ 292 ಫಾರ್ಮಸಿಗಳ ಪರವಾನಿಗೆ ರದ್ದು ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ನಿಯಮಾವಳಿ ಉಲ್ಲಂಘನೆ, ಮಾದಕ ದ್ರವ್ಯಗಳ ಅಕ್ರಮ ಮಾರಾಟ ಮತ್ತು ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ 292 ಫಾರ್ಮಸಿಗಳ ಪರವಾನಗಿಯನ್ನು ಹಿಂಪಡೆದಿದೆ ಎಂದು ಅವರು ತಿಳಿಸಿದ್ದಾರೆ.
ಇಲಾಖೆ ಅಧಿಕಾರಿಗಳು ನಡೆಸಿದ ತಪಾಸಣೆ ವೇಳೆ, ಅಕ್ರಮ ಎಸಗಿರುವುದು ಪತ್ತೆಯಾದ ಕಾರಣ 1,245 ಫಾರ್ಮಸಿಗಳ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ ಎಂದು ಅವರು ವಿಧಾನ ಪರಿಷತ್ತಿಗೆ ತಿಳಿಸಿದ್ದಾರೆ.
ಇದನ್ನೂ ಓದಿ: ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ನಿಧನ
ಈ ಹಿನ್ನೆಲೆಯಲ್ಲಿ 292 ಫಾರ್ಮಸಿಗಳ ಪರವಾನಿಗೆ ರದ್ದು ಪಡಿಸಲಾಗಿದೆ. 1245 ಫಾರ್ಮಸಿಗಳ ಪರವಾನಿಗೆಯನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಈಗಾಗಲೇ 20 ಫಾರ್ಮಸಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, 6 ಕಂಪನಿಗಳಿಗೆ ಶಿಕ್ಷೆ ಪ್ರಕಟಿಸಲಾಗಿದೆ ಎಂದು ವಿಧಾನಪರಿಷತ್ ನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ತಿಳಿಸಿದ್ದಾರೆ.
ಇದನ್ನೂ ನೋಡಿ: ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಸುದ್ದಿಗೋಷ್ಠಿ | B. K. Hariprasad