ಬೆಳಗಾವಿ : ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ನೀಡುವ ಪ್ರಕ್ರಿಯೆಯನ್ನು ಬರುವ 2025ರ ಫೆಬ್ರವರಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್ ಮಧು ಬಂಗಾರಪ್ಪ ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಬಡ್ತಿ
ವಿಧಾನ ಪರಿಷತ್ ನ ಪ್ರಶೋತ್ತರ ವೇಳೆಯಲ್ಲಿ ಎಸ್ ವಿ ಸಂಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ 2013ನೇ ಸಾಲಿನವರೆಗೆ ಪದೋನ್ನತಿ ಪ್ರಕ್ರಿಯೆ ನಡೆಸಲಾಗಿದೆ.
ಇದನ್ನೂ ಓದಿ : ವಿದ್ಯಾರ್ಥಿಗಳ ಹೋರಾಟ: ಪ್ರಾಂಶುಪಾಲ ಮತ್ತು ಮೇಲ್ವಿಚಾರಕದ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ
ಪದೋನ್ನತಿ ಪ್ರಕ್ರಿಯೆ ನಡೆಸುವ ಹಿನ್ನೆಲೆಯಲ್ಲಿ ರಾಜ್ಯಮಟ್ಟದಲ್ಲಿ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸುವ ಬಗ್ಗೆ, ಮಾರ್ಗದರ್ಶನ ಕೋರಿ 2024ರ ಫೆಬ್ರವರಿ ಮತ್ತು ಮಾರ್ಚ್ ಮಾಸದಲ್ಲಿ ಶಾಲಾ ಶಿಕ್ಷಣ ಇಲಾಖೆ
(ಪ್ರಾಥಮಿಕ ಮತ್ತು ಪ್ರೌಢ)ಯ ಆಯುಕ್ತರು ಹಾಗೂ ಏಪ್ರಿಲ್ ಮಾಹಯಲ್ಲಿ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.
ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಒಂದೇ ಜೇಷ್ಯತಾ ಪಟ್ಟಿ ಪಡೆದು, ತಾತ್ಕಾಲಿಕ ಜೇಷ್ಟತಾ ಪಟ್ಟಿ ಪ್ರಕಟಿಸಿ, ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಜೇಷ್ಯತಾ ಪಟ್ಟಿ ಪ್ರಕಟಿಸಿದ ನಂತರ ವರ್ಗ ಪ್ರಕ್ರಿಯೆ ನೆರವೇರಿಸಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಇದ ವೇಳೆ ತಿಳಿಸಿದರು.
ಇದನ್ನೂ ನೋಡಿ : ಕನ್ನಡ ಸಾಹಿತ್ಯ ಸಮ್ಮೇಳನ |ಮಂಡ್ಯದ ಪ್ರೀತಿಯ ನಾಟಿ ಕೋಳಿ ಸಾರುಮುದ್ದೆ ನೀಡಬೇಕು – ಎಂ.ಜಿ.ಹೆಗಡೆ Janashakthi Media