ಬಾಣಂತಿಯರ ಸಾವಿನ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ

ಬಳ್ಳಾರಿ: ಶುಕ್ರವಾರದಂದು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ, ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. IV ರಿಂಗರ್ ಲ್ಯಾಕ್ಟೇಟ್ ದ್ರಾವಣದ ಜೊತೆಗೆ ಶಸ್ತ್ರಚಿಕಿತ್ಸಾ ಕೊಠಡಿಯ ಅಸ್ವಚ್ಛತೆಯೂ ಸಾವುಗಳಿಗೆ ಕಾರಣವಾಗಿರಬಹುದು ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ. ಸ್ಫೋಟಕ

ಬಳ್ಳಾರಿ  ಆಸ್ಪತ್ರೆಯಲ್ಲಿ (BIMS) ಬಾಣಂತಿಯರ ಸಾವಿಗೆ ಕೇವಲ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣವಲ್ಲ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿನ ಅಸ್ವಚ್ಛತೆ ಕೂಡ ಕಾರಣವಾಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದೂ, ಶಸ್ತ್ರಚಿಕಿತ್ಸಾ ಕೊಠಡಿಯ ಸ್ವಚ್ಛತೆ ಮತ್ತು ನೈರ್ಮಲ್ಯ ಪರಿಶೀಲನೆ ಅಗತ್ಯವಿದೆ ಎಂದು ಅವರು ಒತ್ತಾಯಿಸಿದ್ದಾರೆ. ಸ್ಫೋಟಕ

ಗರ್ಭಿಣಿಯರ ದಾಖಲಾತಿ ಸಂಖ್ಯೆಯಲ್ಲೂ ಗಣನೀಯ ಇಳಿಕೆಯಾಗಿದೆ. ಆಸ್ಪತ್ರೆಯಲ್ಲಿನ ಹೆರಿಗೆ ವಾರ್ಡ್, ಶಸ್ತ್ರಚಿಕಿತ್ಸಾ ಕೊಠಡಿ, ಆಸ್ಪತ್ರೆಗೆ ಸರಬರಾಜು ಆಗುವ ನೀರಿನ ಟ್ಯಾಂಕ್‌ಗಳನ್ನು ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಾಣಂತಿಯರ ಸಾವಿಗೆ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣವಲ್ಲ. ಹೆರಿಗೆಯಾದ ಶಸ್ತ್ರಚಿಕಿತ್ಸಾ ಕೊಠಡಿ ಕೂಡ ಕಾರಣವಾಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದರು. ಸ್ಫೋಟಕ

ಇದನ್ನೂ ಓದಿ: ಪತಿ ಮತ್ತು ಅವರ ಕುಟುಂಬದ ವಿರುದ್ಧ ಸೆಕ್ಷನ್ 498(A) ಸಾಧನವಾಗಿ ಬಳಸಬಾರದು: ಸುಪ್ರೀಂ ಕೋರ್ಟ್

ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಶಸ್ತ್ರಚಿಕಿತ್ಸೆಯಾದ ಬಳಿಕ ನಂಜು, ಬ್ಯಾಕ್ಟಿರಿಯಾದಿಂದ ಇನ್ಸೆಕ್ಷನ್ ಆಗುವ ಸಾಧ್ಯತೆ ಇರುತ್ತೆ. ಹೀಗಾಗಿ, ಶಸ್ತ್ರಚಿಕಿತ್ಸಾ ಕೊಠಡಿಯ ಗಾಳಿ, ಗೋಡೆ, ಟೇಬಲ್ ಇಡೀ ಹರಿಗೆ ಸ್ಪ್ಯಾಬ್ ಸ್ಯಾಂಪಲ್ ವರದಿ ಬೇಕಿದೆ. ಶಸ್ತ್ರಚಿಕಿತ್ಸಾ ಕೊಠಡಿಯಿಂದಲೂ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ಸ್ವಚ್ಛತೆ ಇಲ್ಲದಿದ್ದರೆ ಇನ್ಸೆಕ್ಷನ್ ಆಗಿ ಬಾಣಂತಿಯರು ಸಾವನ್ನಪ್ಪುವ ಸಾಧ್ಯತೆ ಇರುತ್ತದೆ. ಹೀಗಾಗಿ, ಅದರ ವರದಿ ಬೇಕು ಅಂತ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಬಾಣಂತಿಯರ ಸಾವಿಗೆ ಕೇವಲ ಕೇವಲ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣನಾ ಅಥವಾ ಬೇರೆ ಇನ್ನಾವುದಾದರೂ ಕಾರಣ ಇದೆಯಾ ಎಂಬುವುದು ವರದಿ ಬಂದ ಬಳಿಕ ಗೊತ್ತಾಗುತ್ತೆ ಎಂದು ಹೇಳಿದರು. ಗರ್ಭಿಣಿಯರ ದಾಖಲಾತಿ ಸಂಖೆಯಲ್ಲಿ ಇಳಿಕೆ ಐವರು ಬಾಣಂತಿಯರ ಸಾವಿನಿಂದ ಜನರು ಆತಂಕಗೊಂಡಿದ್ದು, ಬಿಮ್ಸ್‌ಗೆ ದಾಖಲಾಗುವ ಗರ್ಭಿಣಿಯರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ.

ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗುವ ಗರ್ಭಣಿಯರ ಸಂಖ್ಯೆ ಶೇ 50 ರಷ್ಟು ಕುಸಿತವಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ 585 ಗರ್ಭಿಣಿಯರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಅಕ್ಟೋಬರ್‌ನಲ್ಲಿ 577 ಗರ್ಭೀಣಿಯರು ದಾಖಲಾಗಿದ್ದರು. ನವೆಂಬರ್ ತಿಂಗಳಲ್ಲಿ 289 ಗರ್ಭಿಣಿಯರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂಖ್ಯೆ ಡಿಸೆಂಬರ್ ತಿಂಗಳಲ್ಲಿ ದಿಢೀರ್ ಕುಸಿತವಾಗಿದೆ. ಶನಿವಾರ ಡಿಸೆಂಬರ್ 13ನೇ ತಾರೀಖಿನವರೆಗೆ ಕೇವಲ 80 ಜನ ಗರ್ಭಿಣಿಯರು ದಾಖಲಾಗಿದ್ದಾರೆ.

ಏನಿದು ಘಟನೆ

ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣ, ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ನವೆಂಬರ್ 9 ರಂದು ಜಿಲ್ಲಾ ಆಸ್ಪತ್ರೆಯಲ್ಲಿ 14 ಬಾಣಂತಿಯರಿಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಈ ಪೈಕಿ ಒಂಬತ್ತು ಬಾಣಂತಿಯರ ಆರೋಗ್ಯದಲ್ಲಿ ಏಕಾಏಕಿ ಏರುಪೇರು ಕಂಡುಬಂದಿತ್ತು. ತಕ್ಷಣ ಏನಾಯಿತು ಅಂತ ಗಮನಿಸುವಷ್ಟರಲ್ಲಿ ಇಬ್ಬರು ಬಾಣಂತಿಯರು ಮೃತಪಟ್ಟಿದ್ದರು.

ನಂದಿನಿ ಹಾಗೂ ಲಲಿತಮ್ಮ ಜಿಲ್ಲಾ ಆಸ್ಪತ್ರೆಯ ಹೆರಿಗೆ ವಾರ್ಡ್‌ನಲ್ಲಿ ಕೊನೆಯುಸಿರು ಎಳೆದಿದ್ದರು. ಬಳಿಕ ಉಳಿದ ಏಳು ಬಾಣಂತಿಯರನ್ನು ಬಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಏಳು ಬಾಣಂತಿಯರಲ್ಲಿ ಬಾಣಂತಿ ರೋಜಮ್ಮ ಬಿಮ್ಸ್ ನಲ್ಲಿ ನವೆಂಬರ್ 13 ರಂದು ಮೃತಪಟ್ಟಿದ್ದರು.

ಅಲ್ಲಿಂದ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಸರ್ಕಾರ ತನಿಖಾ ತಂಡವನ್ನ ಕಳುಹಿಸಿ ಬಾಣಂತಿಯರ ಸರಣಿ ಸಾವಿನ ಬಗ್ಗೆ ಮಾಹಿತಿ ಪಡೆದುಕೊಂಡಿದೆ. ಬಾಣಂತಿಯರ ಸಾವಿಗೆ ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಕಾರಣ ಎಂದು ತನಿಖಾ ತಂಡ ಮಾಹಿತಿ ನೀಡಿತ್ತು. ಇದಾದ ಬಳಿಕ ನವೆಂಬರ್ 25 ರಂದು ಬಾಣಂತಿ ಮುಸ್ಕಾನ್, ಡಿಸೆಂಬರ್ 5 ರಂದು ಬಾಣಂತಿ ಸುಮಯಾ ಮೃತಪಟ್ಟಿದ್ದಾರೆ.

ಇದನ್ನೂ ನೋಡಿ: ಬೆಳಗಾವಿ | ಕಬ್ಬು ಬೆಳೆಗೆ ಸೂಕ್ತ ದರ ನಿಗದಿ ಮಾಡಿ – ಕಬ್ಬು ಬೆಳೆಗಾರರ ಧರಣಿ Janashakthi Media

Donate Janashakthi Media

Leave a Reply

Your email address will not be published. Required fields are marked *