ಕಲಬುರಗಿ: ಭಾನುವಾರದಂದು ರೈತ ಮುಖಂಡರು, ನೆಟೆ ರೋಗದಿಂದ ಹಾನಿಯಾದ ತೊಗರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿ ಅನ್ನಪೂರ್ಣ ಕ್ರಾಸ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಹತ್ತಾರು ರೈತ ಮುಖಂಡರು, ಜಿಲ್ಲೆಯಲ್ಲಿ 2 ಲಕ್ಷ ಹೆಕ್ಟೇರ್ ತೊಗರಿ ಬೆಳೆ ಹಾನಿಯಾಗಿದೆ. ಇದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ಕೂಡಲೇ ಪರಿಹಾರ ಹಾಗೂ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಆಗ್ರಹಿಸಿ, ಜಾಮಾಯಿಸಿದ್ದರು.
ಇದನ್ನೂ ಓದಿ: ಕುರಿ ಹಿಂಡಿನ ಮೇಲೆ ಹರಿದ ಖಾಸಗಿ ಬಸ್ಸು: 150 ಕ್ಕೂ ಹೆಚ್ಚು ಕುರಿಗಳು ಸಾವು
ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ, ಪರಿಹಾರಕ್ಕೆ ಒತ್ತಾಯಿಸುತ್ತಿದ್ದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಮುಖಂಡರಾದ ಎಂ.ಬಿ. ಸಜ್ಜನ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.
ಸೇಡಂ ರಸ್ತೆಯ ವಿಮಾನ ನಿಲ್ದಾಣದಿಂದ ಬಂದ ಸಿದ್ದರಾಮಯ್ಯ, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಕಲಬುರಗಿ ಶಾಖಾ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಇದನ್ನೂ ನೋಡಿ: ಸಂಸತ್ತಿನ ಅಧಿವೇಶನವನ್ನು ಬೀದಿ ಜಗಳದ ಮಟ್ಟಕ್ಕಿಳಿಸಿದ ಬಿಜೆಪಿಯ ಅನೈತಿಕ ರಾಜಕಾರಣದ ಅನಾವರಣ…. Janashakthi Media