ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ – ಸಿಎಂ ಸಿದ್ದರಾಮಯ್ಯ

ಕಲಬುರಗಿ: ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಹೇಳಿದಂತೆ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದರು. ನಗರದ ಹೊರ ಹೊಲಯದಲ್ಲಿನ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದರು.

ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಬೇಕು ಎನ್ನುವ ಬೇಡಿಕೆ ಬಹಳ ವರ್ಷಗಳಿಂದ ಇದೆ. ಪ್ರತ್ಯೇಕ ಸಚಿವಾಲಯ ಮಾಡುವ ಉದ್ದೇಶ ನಮಗೆ ಇದೆ ಎಂದರು. ತೊಗರಿ ಪ್ಯಾಕೇಜ್ ತೊಗರಿಗೆ ಪ್ರತ್ಯೇಕ ಪ್ಯಾಕೇಜ್ ಘೋಷಿಸಿ ಎನ್ನುವ ಬೇಡಿಕೆ ರೈತರಿಂದ ಇದ ಕೂಗು ಬೆಳ ಸ್ಥಿತಿ ಗತಿ ಕುರಿತ ವರದಿ ಕೇಳಿದ್ದೇವೆ. ಈ ವರದಿ ಬಂದ ಬಳಿಕ ಆ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ : ದಲಿತ ವಿದ್ಯಾರ್ಥಿಯ ಭವಿಷ್ಯಕ್ಕೆ ಕೊಳ್ಳಿ ಇಟ್ಟ ಉಡುಪಿ ಜಿಲ್ಲಾಧಿಕಾರಿ ವಿರುದ್ಧ ದಸಂಸ ಪ್ರತಿಭಟನೆ 

ಜಯದೇವ ಮಹತ್ವದ ಹೆಜ್ಜೆ ಕಲಾಣ ಕರ್ನಾಟಕದ ಆರೋಗ್ಯ ವ್ಯವಸ್ಥೆಯಲ್ಲಿ ಇಂದು ಉದ್ಘಾಟನೆಗೊಳ್ಳಲಿರುವ ಜಯದೇವ ಆತ್ಮಕ್ಕೆ ಮಹತ್ವದ್ದು ರಾಜ್ಯ ಸಭೆ ಪ್ರತಿಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೋರಾಟದ ಫಲವಾಗಿ 371J ಜಾರಿಯಾಗಿದೆ. ಇಲ್ಲಿ, 371 ಬೆಡ್ ಗಳ ಆಸ್ಪತ್ರೆಯನ್ನು ಇಂದು ಉದಾಟಿಸುತ್ತಿದ್ದೇವೆ ಎಂದರು.

ಸಚಿವ ಲಕ್ಷ್ಮೀ ಹೆಬ್ಬಾಳ್ಯ‌ ಅವರಿಗೆ ಸಿ.ಟಿ.ರವಿ ಬಳಸಿದ ಪದ ಅತ್ಯಂತ ಅನಾಗರಿಕವಾದದ್ದು. ಇದು ಕ್ರಿಮಿನಲ್ ಅಪರಾಧ ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿ ಆಗಿದ್ದ ರವಿ ಬಾಯಲ್ಲಿ ಇಂಥಾ ಮಾತು  ನಾಚಿಕೆಗೇಡಿನದ್ದು. ಇತರ ವಿಧಾನ ಪರಿಷತ್‌ ಸದಸ್ಯರು ರವಿ ಆ ಪದ ಬಳಸಿರುವುದನ್ನು ಕೇಳಿಸಿಕೊಂಡಿದ್ದಾರೆ, ರವಿ ಅತ್ಯಂತ ತುಚ್ಚವಾಗಿ ಮಾತಾಡಿರುವುದು ಸತ್ಯ ಎಂದು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ನೋಡಿ : ವಕ್ಫ್ ಆಸ್ತಿ ಗೊಂದಲ: ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ – ಸಿಎಂ Janashakthi Media

Donate Janashakthi Media

Leave a Reply

Your email address will not be published. Required fields are marked *