ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸತೀಶ್ ಸೈಲ್ ಅರ್ಜಿ ವಿಚಾರಣೆ ಇತ್ಯರ್ಥವಾಗುವರೆಗೂ ಕಾರವಾರ ಕ್ಷೇತ್ರಕ್ಕೆ ಉಪಚುನಾವಣೆ ನಡೆಸದಂತೆ ನಿರ್ದೇಶನ ನೀಡಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸತೀಶ್ ಸೈಲ್ ಗೆ ವಿಧಿಸಿರುವ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟಿರುವ ಹೈಕೋರ್ಟ್, ಕಾರವಾರ ಕ್ಷೇತ್ರಕ್ಕೆ ಉಪಚುನಾವಣೆ ನಡೆಸದಂತೆ ಸೂಚನೆ ನೀಡಿದೆ.
ಇದನ್ನೂ ಓದಿ: ತೊಗರಿಗೆ ವಿಶೇಷ ಪ್ಯಾಕೇಜ್ | ಸಿಎಂ ಕಾರಿಗೆ ಮುತ್ತಿಗೆ ಹಾಕಿದ ರೈತ ಮುಖಂಡರು
ಜನಪ್ರತಿನಿಧಿಗಳ ಕೋರ್ಟ್ ನೀಡಿರುವ ಶಿಕ್ಷೆಗೆ ತಡೆಯಾಜ್ಞೆ ಕೋರಿ ಸತೀಶ್ ಸೈಲ್ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ಹೊರಡಿಸಿದೆ. ಅಲ್ಲದೇ ವಿಧಾನಸಭೆ ಕಲಾಪದಲ್ಲಿಯೂ ಭಾಗವಹಿಸದಂತೆ ಸೂಚಿಸಿದೆ.
ಇದನ್ನೂ ನೋಡಿ: ಅಂಬೇಡ್ಕರ್ ಕುರಿತ ಹೇಳಿಕೆ | ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ Janashakthi Media