ಅವಾಚ್ಯ ಪದ ಬಳಕೆ ಪ್ರಕರಣ: ಸಿ. ಟಿ ರವಿಗೆ ಸಂಕಷ್ಟ ಹೆಚ್ಚಳ

ಹುಬ್ಬಳ್ಳಿ:  ಒಂದೆಡೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದೌಪದಿ ಮುರ್ಮು ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ದೂರು ಕೊಡೋದಾಗಿ ಎಚ್ಚರಿಸಿದ್ದೂ, ಇತ್ತ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆಯೂ ಸಿಟಿ ರವಿ ಕಿಡಿಕಾರಿದ್ದಾರೆ. ಈತನ್ಮಧ್ಯೆ ಅವಾಚ್ಯ ಪದ ಬಳಕೆ ಪ್ರಕರಣದಲ್ಲಿ ಸಿ. ಟಿ ರವಿಗೆ ಸಂಕಷ್ಟ ಮತ್ತೆ ಹೆಚ್ಚಾಗಿದೆ. ಅವಾಚ್ಯ

ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್, ಅವಾಚ್ಯ ಪದಗಳನ್ನು ವಿಧಾನ ಪರಿಷತ್‌ನಲ್ಲಿ ಬಳಕೆ ಮಾಡಿರುವ ಆರೋಪದ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ಗೃಹ ಸಚಿವ ಹೇಳಿದ್ದಾರೆ. ಅವಾಚ್ಯ

ಸಿಟಿ ರವಿ ಪ್ರಕರಣದ ಬಗ್ಗೆ ಹೆಚ್ಚು ವ್ಯಾಖ್ಯಾನ ಮಾಡಲ್ಲ. ಸಿಟಿ ರವಿ ಪ್ರಕರಣವನ್ನ ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. ತನಿಖೆ ನಡೆಯುವಾಗ ನಾವು ಹೇಳಿಕೆಗಳನ್ನ ನೀಡುವುದು ಸರಿಯಲ್ಲ ಎಂದು ಹೇಳಿದರು. ಅವಾಚ್ಯ

ಸಿಟಿ ರವಿ ಪ್ರಕರಣ ಮುಗಿದ ಅಧ್ಯಾಯ ಎಂಬ ಸ್ಪೀಕರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಪರಮೇಶ್ವರ್, ಸ್ಪೀಕರ್ ಅವರು ತಮ್ಮ ಕೆಲಸ ತಾವು ಮಾಡುತ್ತಾರೆ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಅಲ್ಲಿಯ ಸಾಧಕ ಬಾಧಕಗಳನ್ನ ನೋಡಿಕೊಂಡು ಹೇಳಿಕೆ ಕೊಟ್ಟಿರಬಹುದು ಎಂದರು.

ಇದನ್ನೂ ಓದಿ: ಪಾರ್ಟಿಯಲ್ಲಿ ಬಟ್ಟೆ ಬಿಚ್ಚಿಸಿ ಥಳಿತ, ಮನನೊಂದು ಆತ್ಮಹತ್ಯೆಗೆ ಶರಣಾದ ಬಾಲಕ

ಕಾನೂನು ಪ್ರಕ್ರಿಯೆ ನಡೆಯುವಾಗ ಕೆಲವು ವಿಳಂಬವಾಗಬಹುದು. ಆದ್ರೆ ತನಿಖೆಯನ್ನ ಸರಿಯಾಗಿ ಮಾಡಬೇಕಾಗುತ್ತೆ. ಪುಕರಣದ ಸತ್ಯಾಸತ್ಯತೆ ನೋಡಬೇಕಿದೆ. ಸಿಟಿ ರವಿ ಆ ರೀತಿ ಹೇಳಿಲ್ಲ ಅಂತಾರೆ. ಹೆಬ್ಬಾಳ‌ ಪಕ್ಕದಲ್ಲಿದ್ದವರು ಆ ಮಾತು ಆಡಿದ್ದಾರೆ ಅಂತ ಹೇಳ್ತಾರೆ. ಈ ಎಲ್ಲ ವಿಚಾರಗಳ ಬಗ್ಗೆ ತನಿಖೆ ಆಗಲೆಂದೇ ಸಿಓಡಿಗೆ ಹಸ್ತತರ ಮಾಡಲಾಗಿದೆ ಎಂದರು.

ಗೃಹ ಇಲಾಖೆಯಲ್ಲಿ ಕೆಲ ಸಚಿವರ ಹಸ್ತಕ್ಷೇಪ ಆರೋಪದ ವಿಚಾರದ ಬಗ್ಗೆಯೂ ಮಾತನಾಡಿದ ಗೃಹ ಸಚಿವರು, ಪೊಲೀಸ್ ಇಲಾಖೆ ಜವಾಬ್ದಾರಿಯುತ ಇಲಾಖೆ, ಸಿಎಂ ಅಥವಾ ಗೃಹ ಸಚಿವರ ಆದೇಶವನ್ನ ಮಾತ್ರ ಪೊಲೀಸರು ಪಾಲನೆ ಮಾಡುತ್ತಾರೆ. ಬೇರೆ ಯಾರೇ ಆದೇಶ
ಮಾಡಿದ್ರೂ ಅದನ್ನ ಪಾಲನೆ ಮಾಡಲ್ಲ. ಅವರಿವರು ಆರೋಪ ಮಾಡ್ತಾರೆ ಅಂತಾ ನಾವು ಇಲಾಖೆ ನಡೆಸಲ್ಲ. ಕಾನೂನು ಚೌಕಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದರು.

ಡಾ ಜಿ. ಪರಮೇಶ್ವರ ಅಸಮರ್ಥ ಗೃಹ ಸಚಿವ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿಗೆ ಕಿಡಿಕಾರಿದ ಡಾ ಜಿ ಪರಮೇಶ್ವರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಸಮರ್ಥ ಕೇಂದ್ರ ಸಚಿವ ಅಂದರೆ ಒಪ್ಪಿಕೊಳ್ತಾರಾ? ಪ್ರಹ್ಲಾದ್ ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ. ಅದಕ್ಕೆ ಅವರು ಹಾಗೆ ಹೇಳಿದ್ದಾರೆ ಎಂದು ಹೇಳುವ ಮೂಲಕ ತಮ್ಮನ್ನ ಅಸಮರ್ಥ ಸಚಿವ ಎಂಬ ಹೇಳಿಕೆಗೆ ಜೋಶಿಗೆ ತಿರುಗೇಟು ನೀಡಿದರು.

ಹಳೇ ಹುಬ್ಬಳ್ಳಿಯ ಪೊಲೀಸ್ ಇನ್ಸ್ಪೆಕ್ಟರ್ ಸುರೇಶ್ ಯಳ್ಳೂರು ಲೈಂಗಿಕ ಕಿರುಕುಳ ಆರೋಪದ ಕುರಿತು ಪ್ರತಿಕ್ರಿಯೆ ನೀಡಿದ ಪರಮೇಶ್ವರ್, ಪೊಲೀಸ್ ಇನ್ಸ್‌ಕ್ಟರ್ ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡಿದ್ದರೆ ಖಚಿತವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಈ ಬಗ್ಗೆ ಪೊಲೀಸ್ ಆಯುಕ್ತರಿಂದ ಮಾಹಿತಿ ಪಡೆದಕೊಳ್ಳುತ್ತೇನೆ. ಮಾಹಿತಿ ಪಡೆದು ಪೊಲೀಸ್ ಇನ್ಸ್ಪೆಕ್ಟರ್ ತಪ್ಪು ಎಸಗಿದ್ದರೆ, ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಇದನ್ನೂ ನೋಡಿ: ಅಮಿತ್ ಶಾ, ಸಿ.ಟಿ.ರವಿ ಅನುಚಿತ ವರ್ತನೆ – ಸಮಾನ ಮನಸ್ಕ ಸಂಘಟನೆಗಳ ಪ್ರತಿಭಟನೆ Janashakthi Media

Donate Janashakthi Media

Leave a Reply

Your email address will not be published. Required fields are marked *