ರಾಮನಗರ: ಸಾಲ ಕೊಡಿಸುವುದಾಗಿ ಹೇಳಿ ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೊಬ್ಬರು ಬಿಜೆಪಿ ಮುಖಂಡನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಬ್ಯೂಟಿಷಿಯನ್ ಕೆಲಸ ಮಾಡಿಕೊಂಡಿರುವ ವಿವಾಹಿತ ಮಹಿಳೆಗೆ ಸಾಲ ಕೊಡಿಸುವುದಾಗಿ ನಂಬಿಸಿ ರಾಮನಗರದ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು.
ಇದನ್ನೂ ಓದಿ: ಬಳ್ಳಾರಿ: ಲಕ್ಕಿ ಡಿಪ್ ಹೆಸರಲ್ಲಿ ವಂಚನೆ – ಗಿಫ್ಟ್ ಕೊಡುತ್ತೆವೆ ಎಂದು ನಂಬಿಸಿ ಹಣ ಪಡೆದು ಪರಾರಿ
ಮಹಿಳೆ ನೀಡಿದ ಈ ದೂರಿನ ಮೇರೆಗೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸೂರನಹಳ್ಳಿಯ ಬಿಜೆಪಿ ಮುಖಂಡ ಚಲುವರಾಮು ಎನ್ನುವರನ್ನು ಸಾತನೂರು ಪೊಲೀಸರು ಬಂಧಿಸಿದ್ದಾರೆ.
ಅಲ್ಲದೇ ಬಳಿಕ ವಿಡಿಯೋ ಕಾಲ್ ಮಾಡಿ ನಗ್ನ ದೇಹ ತೋರಿಸುವಂತೆ ಬೆದರಿಕೆ ಹಾಕುತ್ತಿದ್ದ, ನಿನ್ನ ಖಾಸಗಿ ವಿಡಿಯೋ ಇದೆ. ಎಲ್ಲಾ ಕಡೆ ಹಾಕುತ್ತೇನೆ ಎಂದು ಬೆದರಿಕೆ ಹಾಕಿರುವುದಾಗಿ ಮಹಿಳೆ ಸಾತನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನ ಮೇರೆಗೆ ಇದೀಗ ಸಾತನೂರು ಪೊಲೀಸರು, ಬಿಜೆಪಿ ಮುಖಂಡ ಚಲುವರಾಮು ಎನ್ನುವರನ್ನು ಬಂಧಿಸಿದ್ದಾರ. ಇನ್ನೊಬ್ಬ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.
ಇದನ್ನೂ ನೋಡಿ: ಅಂಬೇಡ್ಕರ್ ನಮಗೆ ವ್ಯಸನ ಅಲ್ಲ, ನಿತ್ಯ ಸ್ಮರಣೆ! -ಸಂತೋಷ್ ಲಾಡ್ Janashakthi Media