ಕೆರೆಗಳ ಉಳಿವಿನ ಹೋರಾಟಕ್ಕಾಗಿ ಸರ್ಕಾರ ಎಷ್ಟೇ ಕೇಸುಗಳನ್ನು ಹಾಕಿದರು ನಾವು ಬಗ್ಗುವುದಿಲ್ಲ ಜಗ್ಗುವುದಿಲ್ಲ : ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಕೆರೆಗಳನ್ನು ಒತ್ತುವರಿ ಮಾಡಿರುವ ರಿಯಲ್ ಎಸ್ಟೇಟ್ ಮಾಫಿಯಾ ಗಳ ವಿರುದ್ಧ ಪಕ್ಷವು ಸಂಪೂರ್ಣ ತೆರವುಗೊಳಿಸುವ ತನಕ ಹೋರಾಟ ಮಾಡುತ್ತದೆ ಎಂದು ಶಾಸಕ ಎಸ್ ಟಿ ಸೋಮಶೇಖರ್ ವಿರುದ್ದ ಮುಖ್ಯಮಂತ್ರಿ ಚಂದ್ರು ಕಿಡಿಕಾರಿದ್ದಾರೆ.

ಇಂದು ಸಂಜೆ ನಗರದ ಮಾಗಡಿ ರಸ್ತೆಯ ಹೇರೋಹಳ್ಳಿ ಕೆರೆ ವೀಕ್ಷಣೆಯ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಸುದ್ದಿಗಾರರೊಂದಿಗೆ ಮಾತನಾಡುತ್ತ ” ನಗರದ ಕೆರೆಗಳ ಉಳಿವಿಗಾಗಿ ಆಮ್ ಆದ್ಮಿ ಪಕ್ಷ ಎಲ್ಲ ಹೋರಾಟಗಳಿಗೂ ಸರ್ವಸಮದ್ಧವಾಗಿದೆ. ಇತ್ತೀಚೆಗೆ ಹೇರೋಹಳ್ಳಿ ಕೆರೆ ಹೋರಾಟದ ಸಂದರ್ಭದಲ್ಲಿ ಪಕ್ಷದ ನಾಯಕರುಗಳ ಮೇಲೆ ಸ್ಥಳೀಯ ಶಾಸಕ ಎಸ್ ಟಿ ಸೋಮಶೇಖರ್ ಒತ್ತಡದ ಮೇಲೆ ಪೊಲೀಸರು ಕ್ರಿಮಿನಲ್ ಮೊಕದ್ದಮೆಯನ್ನು ಹಾಕಿದ್ದಾರೆ. ಈ ರೀತಿಯ ಎಷ್ಟೇ ಕೇಸುಗಳನ್ನು ಹಾಕಿದರೂ ನಾವು ಯಾವುದೇ ಕಾರಣಕ್ಕೂ ಜಗ್ಗುವುದಿಲ್ಲ ಬಗ್ಗುವುದಿಲ್ಲ .

ಇದನ್ನೂ ಓದಿ : ಮೈಕ್ರೋ ಫೈನಾನ್ಸ್ ಕಿರುಕುಳ: ಗ್ರಾಮ ತೊರೆದ 100 ಕ್ಕೂ ಹೆಚ್ಚು ಕುಟುಂಬಗಳು

ಕೆರೆಗಳನ್ನು ಒತ್ತುವರಿ ಮಾಡಿರುವ ರಿಯಲ್ ಎಸ್ಟೇಟ್ ಮಾಫಿಯಾ ಗಳ ವಿರುದ್ಧ ಪಕ್ಷವು ಸಂಪೂರ್ಣ ತೆರವುಗೊಳಿಸುವ ತನಕ ಹೋರಾಟ ಮಾಡುತ್ತದೆ. ಎಲ್ಲಾ ಕೆರೆಗಳಲ್ಲಿ ಎಸ್ ಟಿ ಪಿ ಘಟಕಗಳನ್ನು ತೆರೆಯಬೇಕು , ನಾಗರಿಕ ಸೌಲಭ್ಯಕ್ಕಾಗಿ ಶೌಚಾಲಯ ಉತ್ತಮ ಟ್ರ್ಯಾಕ್ ಗಳು ಕುಡಿಯುವ ನೀರು ಮುಂತಾದ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು.” ಎಂದು ಸರ್ಕಾರವನ್ನು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ” ಇಂದು ಯಶವಂತಪುರ ಕ್ಷೇತ್ರಕ್ಕೆ ಬರಲು ಶಾಸಕರ ವೀಸಾ ಅಗತ್ಯವಾಗಿದೆ. ಸ್ಥಳೀಯ ಸಮಸ್ಯೆಗಳ ಬಗ್ಗೆ ಯಾರೇ ಪ್ರಶ್ನೆ ಮಾಡಿದರೂ ಅವರುಗಳ ಮೇಲೆ ಪೊಲೀಸ್ ಕೇಸುಗಳನ್ನು ಹಾಕಿಸುವ ಮೂಲಕ ಶಾಸಕರು ನಡೆಸುತ್ತಿರುವ ದಬ್ಬಾಳಿಕೆ – ದೌರ್ಜನ್ಯಗಳನ್ನು ಪಕ್ಷವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಜನ ಸಾಮಾನ್ಯರ ಹಿತಕ್ಕಾಗಿ ಪಕ್ಷದ ಕಾರ್ಯಕರ್ತರು ಯಾವುದೇ ತ್ಯಾಗಕ್ಕೂ ಸಿದ್ಧರಾಗಿದ್ದಾರೆ , ಯಶವಂತಪುರ ರಿಪಬ್ಲಿಕ್ ಮಾಡಲು ನಾವು ಬಿಡುವುದಿಲ್ಲ “ಎಂದು ಎಚ್ಚರಿಸಿದರು.

ವೀಕ್ಷಣೆ ಸಂದರ್ಭದಲ್ಲಿ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಡಾ. ಸತೀಶ್, ಜಗದೀಶ್ ಚಂದ್ರ, ಶಶಿಧರ್ ಆರಾಧ್ಯ , ಡಾ. ದಿನೇಶ್ ಕುಮಾರ್ ಯುವ ಘಟಕದ ರಾಜ್ಯಾಧ್ಯಕ್ಷ ಲೋಹಿತ್ ಕುಮಾರ್ ಭಾಗವಹಿಸಿದ್ದರು.

ಇದನ್ನೂ ನೋಡಿ : ನಿವೃತ್ತ ವಿಮಾ ನೌಕರರ ಪ್ರತಿಭಟನೆ : ಪಿಂಚಣಿ ನೌಕರರ ಬಿಕ್ಷೆಯಲ್ಲ, ಹಕ್ಕು Janashakthi Media

Donate Janashakthi Media

Leave a Reply

Your email address will not be published. Required fields are marked *