ಶರಣಾದ ನಕ್ಸಲರ ಶಸ್ತ್ರಾಸ್ತ್ರ ನಾಪತ್ತೆ: ಮಹಜರು ಮಾಡಿ ಶಸ್ತ್ರಾಸ್ತ್ರಗಳನ್ನು ತರುತ್ತಾರೆ – ಸಿಎಂ ಸಿದ್ದರಾಮಯ್ಯ

ಮೈಸೂರು:  ಚಾಮರಾಜನಗರದಲ್ಲಿ ಫೆಬ್ರವರಿ 15 ರಂದು ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಸ್ತ್ರಾಸ್ತ್ರ

ಮೈಸೂರಿನಲ್ಲಿ ಮಾತನಾಡಿದ ಸಿಎಂ, ಚಾಮರಾಜನಗರದಲ್ಲಿ ಸಂಪುಟ ಸಭೆ ನಡೆಸುವ ಮೂಲಕ ಆ ಭಾಗದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಆಶಾ ಕಾರ್ಯಕರ್ತೆಯರಿಗೆ ಮಾಸಿಕ 10 ಸಾವಿರ ರೂ.ಗಳ ಗೌರವಧನ: ಸಿಎಂರೊಂದಿಗೆ ಆಶಾ ಕಾರ್ಯಕರ್ತೆಯರ ಸಂಧಾನ

ಶರಣಾದ ನಕ್ಸಲರ ಶಸ್ತ್ರಾಸ್ತ್ರ ನಾಪತ್ತೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ʼಶಸ್ತ್ರಾಸ್ತ್ರ ಎಲ್ಲಿದೆ ಎನ್ನುವುದು ಪೊಲೀಸರಿಗೆ ಗೊತ್ತಿದೆ. ಮಹಜರು ಮಾಡಿ ಶಸ್ತ್ರಾಸ್ತ್ರಗಳನ್ನು ತರುತ್ತಾರೆ. ನಕ್ಸಲಿಸಂ ಇರಬಾರದು ಎಂಬುದು ನಮ್ಮ ಉದ್ದೇಶವಾಗಿದೆʼ ಎಂದು ಹೇಳಿದ್ದಾರೆ.

ಅನ್ಯಾಯ ಶೋಷಣೆ ವಿರುದ್ಧ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಯಾವುದೇ ಹೋರಾಟ ನಡೆಸಿದರೂ ಶಾಂತಿಯುತವಾಗಿ ಇರಬೇಕು ಎಂದು ಹೇಳಿದ ಸಿಎಂ, ಮತ್ತೊಬ್ಬ ನಕ್ಸಲ್ ಇದ್ದಾನೋ ಇಲ್ಲವೋ ನಮಗೆ ಮಾಹಿತಿ ಇಲ್ಲ. ಮುಖ್ಯವಾಹಿನಿಗೆ ಬರುವಂತೆ ಆತನಿಗೂ ನಾನು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ನೋಡಿ : ಐಸಿಡಿಎಸ್ 50| ಅಂಗನವಾಡಿ ಬಲಗೊಳಿಸಲು ಹುಟ್ಟಿದ ಸಂಘಟನೆ ಐಫ್ಹಾ (AIFAWH-35) Janashakthi Media

Donate Janashakthi Media

Leave a Reply

Your email address will not be published. Required fields are marked *