ನಾಗಪುರ: ಶನಿವಾರದಂದು ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯಸಭಾ ಸದಸ್ಯರೂ ಆದ ಸಂಜಯ್ ರಾವತ್, ಮುಂಬರುವ ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಶಿವಸೇನೆ (ಉದ್ಧವ್ ಬಣ) ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ.
ಇಂಡಿಯಾ ಮೈತ್ರಿಕೂಟ ಹಾಗೂ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟಗಳನ್ನು ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಗಾಗಿ ಮಾಡಿಕೊಳ್ಳಲಾಗಿತ್ತು ಎಂದು ಶಿವಸೇನೆ ನಾಯಕ ಹೇಳಿದ್ದಾರೆ.
ಇದನ್ನೂ ಓದಿ: ಬಾಳ್ಳುಪೇಟೆ ಗ್ರಾಮ ಪಂಚಾಯಿತಿಯಲ್ಲಿ 45. 74 ಲಕ್ಷ ಹಣ ದುರುಪಯೋಗ: ಪಿಡಿಒ ಅಮಾನತು
“ಮೈತ್ರಿಕೂಟದಲ್ಲಿ ಪ್ರತಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ದೊರೆಯುವುದಿಲ್ಲ ಹಾಗೂ ಅದರಿಂದ ಸಂಘಟನಾತ್ಮಕ ಬೆಳವಣಿಗೆಗೆ ಧಕ್ಕೆಯಾಗುತ್ತದೆ. ನಾವು ಮುಂಬೈ, ಥಾಣೆ, ನಾಗಪುರ ಹಾಗೂ ಇನ್ನಿತರ ಮಹಾನಗರ ಪಾಲಿಕೆ ಚುನಾವಣೆಗಳು, ಜಿಲ್ಲಾ ಪಂಚಾಯತಿಗಳು ಹಾಗೂ ಪಂಚಾಯತಿಗಳಿಗೆ ನಮ್ಮ ಸ್ವಂತ ಬಲದ ಮೇಲೆ ಸ್ಪರ್ಧಿಸಲಿದ್ದೇವೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಶಿವಸೇನೆ (ಉದ್ಧವ್ ಬಣ) ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಬೇಕು ಎಂದು ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ನಿರ್ದೇಶನ ನೀಡಿದ್ದಾರೆ ಎಂದೂ ಅವರು ಹೇಳಿದ್ದಾರೆ.
ಇದನ್ನೂ ನೋಡಿ: ಭತ್ತ ಖರೀದಿ ಕೇಂದ್ರ ತೆರೆಯಲು ವಿಳಂಬ: ಮಂಡ್ಯದಲ್ಲಿ ಕೃಷಿ ಸಚಿವರ ಕಚೇರಿ ಎದುರು ಭತ್ತ ಸುರಿದು ಪ್ರತಿಭಟನೆ