ಮೆನ್ಯೂ ಚಾರ್ಟ್ ಬದಲಾವಣೆ: ಇಂಜಿನಿಯರಿಂಗ್ ವಿದ್ಯಾರ್ಥಿಗಳ ಉಪವಾಸ ಧರಣಿ

ಹಾವೇರಿ: ತಾಲ್ಲೂಕಿನ ದೇವಗಿರಿ ಗ್ರಾಮ ಹತ್ತಿರದ ಜಿಲ್ಲಾಧಿಕಾರಿ ಕಚೇರಿ ಸಮೀಪ ಇರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಇಂಜಿನಿಯರಿಂಗ್ ಬಾಲಕರ ವಸತಿ ನಿಲಯದಲ್ಲಿ ಊಟದ ಮೆನ್ಯೂ ಚಾರ್ಟ್ ಬದಲಾವಣೆ ಖಂಡಿಸಿ, ಉತ್ತಮ ಗುಣಮಟ್ಟದ ಆಹಾರ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಹಾಸ್ಟೆಲ್ ಘಟಕ ನೇತೃತ್ವದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ವಸತಿ ನಿಲಯದ ಮುಂದೆ ಉಪವಾಸ ಧರಣಿ ನಡೆಸಿದರು.

ಹಾಸ್ಟೆಲ್ ಘಟಕ ಅಧ್ಯಕ್ಷ ರೇವಣಸಿದ್ಧಾರಾದ್ಯ ಎನ್ ಎಸ್ ಮಾತನಾಡಿ, ವಸತಿ ನಿಲಯದಲ್ಲಿ ಸರಿಯಾಗಿ ಉತ್ತಮ ಗುಣಮಟ್ಟದ ಆಹಾರ ನೀಡುತ್ತಿಲ್ಲ, ಕೊಳೆತ ತರಕಾರಿಗಳನ್ನು ನೀಡುತ್ತಾರೆ. ಅನುದಾನ ನೆಪದಿಂದ ಊಟಕ್ಕೆ ಕಡಿತ ಮಾಡಿದ್ದಾರೆ. ಪುಸ್ತಕಗಳು, ಆಟದ ಸಾಮಗ್ರಿಗಳನ್ನು ಮೂರು ವರ್ಷ ಕಳೆದರು ನೀಡಿಲ್ಲ. ಮೆನ್ಯೂ ಚಾರ್ಟ್ ಪ್ರಕಾರ ಊಟ ನೀಡುತ್ತಿಲ್ಲ. ಗ್ರಂಥಾಲಯವನ್ನು ಬಳಕೆಗೆ ನೀಡುತ್ತಿಲ್ಲ ಇಲಾಖೆಯ ಜಿಲ್ಲಾಧಿಕಾರಿಗಳು ಹಾಗೂ ತಾಲ್ಲೂಕು ಅಧಿಕಾರಿಗಳ ವಸತಿ ನಿಲಯಕ್ಕೆ ಬರುವುದಿಲ್ಲ ನಮ್ಮ ಸಮಸ್ಯೆಗಳನ್ನು ಆಲಿಸುವುದಿಲ್ಲ ಎಂದು ದೂರಿದರು.

ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಮಾತನಾಡಿ, ಉತ್ತಮ ಗುಣಮಟ್ಟದ ಆಹಾರ ನೀಡುವಂತೆ ಹಾಗೂ ಮೂಲಭೂತ ಸೌಕರ್ಯಗಳಿಗಾಗಿ ಪ್ರತಿ ಆರು ತಿಂಗಳಿಗೊಮ್ಮೆ ಹೋರಾಟ ಮಾಡಲಾಗುತ್ತದೆ ಶಾಶ್ವತ ಪರಿಹಾರಕ್ಕಾಗಿ ಅಧಿಕಾರಿಗಳ ಮುಂದಾಗುತ್ತಿಲ್ಲ. ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳಿಲ್ಲದೆ ನರಳುವಂತಹ ಸ್ಥಿತಿ ನಿರ್ಮಾಣವಾಗಿದೆ. ನೂರಾರು ವಿದ್ಯಾರ್ಥಿಗಳು ದೂರದ ಊರಿನಿಂದ ಬಂದು ವಸತಿ ನಿಲಯದಲ್ಲಿ ಆಶ್ರಯ ಪಡೆದ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ವಿವೇಕವೂ ವಿವೇಕರ ಸಂದೇಶವೂ ವಿವೇಕಾನಂದರ ಜನ್ಮದಿನದಂದು ಕಳೆದುಕೊಂಡ ವಿವೇಚನೆಯನ್ನು ಮರಳಿ ಪಡೆಯಬೇಕಿದೆ

“ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರ ನೀಡಿದ ವಸತಿ ನಿಲಯದ ಊಟದ ಮೆನ್ಯೂ ಚಾರ್ಟ್ ಪ್ರಕಾರ ಟೆಂಡರ್ ಧರಕ್ಕೂ ಮಾರುಕಟ್ಟೆಯಲ್ಲಿರು ಪ್ರಸ್ತುತ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಕ್ಕೂ ಸಾಕಷ್ಟು ವ್ಯತ್ಯಾಸ ಕಂಡುಬರುತ್ತದೆ ಎಂದು ಇತ್ತೀಚೆಗೆ ಜಿಲ್ಲಾದ್ಯಂತ ಪ್ರತ್ಯೇಕವಾಗಿ ಹಾವೇರಿ ಬಿಸಿಎಮ್ ಇಲಾಖೆಯ ಮೆನ್ಯೂ ಚಾರ್ಟ್ ತಯಾರಿಸಿ ಬದಲಾವಣೆ ಮಾಡಲು ಹೊರಟಿರುವುದು ವಿದ್ಯಾರ್ಥಿ ವಿರೋಧಿಯಾಗಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅನುಮತಿಗಾಗಿ ಕಾಯುತ್ತಿರುವ ಬೆನ್ನಲ್ಲೇ ಜೆಲ್ಲಾದ್ಯಂತ ಹಾಸ್ಟೆಲ್ ಗಳಲ್ಲಿ ಆಹಾರ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಕತ್ತರಿ ಹಾಕುತ್ತಿರವುದು ನಿಲ್ಲಬೇಕು.”

ಹಾಸ್ಟೆಲ್ ವಿದ್ಯಾರ್ಥಿಗಳ ಮಾಸಿಕ ಆಹಾರ ಭತ್ಯೆ ಯನ್ನು ಕನಿಷ್ಠ 3500/ರೂ ಗಳಿಗೆ ಹೆಚ್ಚಿಸಬೇಕು. ರಾಜ್ಯದಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಪ್ರತಿದಿನದ ಮೂರೊತ್ತಿನ ಊಟಕ್ಕೆ ಕೇವಲ 60-70 ರೂ ಗಳಂತೆ ತಿಂಗಳಿಗೆ 1850  ರೂಗಳನ್ನು ಮಾತ್ರ ನೀಡಲಾಗುತ್ತಿದೆ. ಎಲ್ಲ ಆಹಾರ ಪದಾರ್ಥಗಳು, ಗ್ಯಾಸ್, ಬೆಲೆ ಏರಿಕೆ ಆಗಿದೆ. ಆದರೂ ಹಾಸ್ಟೆಲ್ ವಿದ್ಯಾರ್ಥಿಗಳ ಆಹಾರ ಭತ್ಯೆಯನ್ನು ಸರ್ಕಾರ ಹೆಚ್ಚಿಸಿಲ್ಲ. ಇದರಿಂದ ರಾಜ್ಯದ ವಿದ್ಯಾರ್ಥಿಗಳು ಪೌಷ್ಠಿಕ ಆಹಾರದಿಂದ ವಂಚಿತರಾಗುತ್ತಿದ್ದಾರೆ. ಜೈಲಿನಲ್ಲಿರುವ ಕೈದಿಗಳಿಗಳ ಆಹಾರಕ್ಕೆ ಪ್ರತಿದಿನ 450 ರಂತೆ ಒಂದು ತಿಂಗಳಿಗೆ ಸಾವಿರಾರು  ರೂಪಾಯಿ ಖರ್ಚು ಮಾಡುವ ಸರ್ಕಾರ ಹಾಸ್ಟೆಲ್ ವಿದ್ಯಾರ್ಥಿಗಳ ಆಹಾರ ಭತ್ಯೆಯನ್ನು ಕನಿಷ್ಠ ಮಾಸಿಕ 3500 ರೂಗಳಿಗೆ ಹೆಚ್ಚಿಸಬೇಕೆಂದು ಆಗ್ರಹಿಸಿದರು.

ಬೇಡಿಕಗಳು:- 

  • ಗುಣಮಟ್ಟದ ಆಹಾರ ನೀಡಬೇಕು.
  • ಮೇನು ಚಾಟ್ ಪ್ರಕಾರ ಆಹಾರ ನೀಡಬೇಕು.
  • ಶುಚಿ ಕಿಟ್ ಕೋಡಬೇಕು.
  • ಮೆನು ಚಾರ್ಟ್ ಬದಲಾವಣೆ ಮಾಡಬೇಕು.
  • ಕಾಟ್ ಬೆಡ್ ಕೊಡಬೇಕು
  • ಶೌಚಾಲಯ ಸರಿಪಡಿಸಿ ಸ್ವಚ್ಛತೆ ಕಾಪಾಡಬೇಕು.
  • ಕುಡಿಯುವ ನೀರಿನ ಸಮಸ್ಯೆ ಸರಿಪಡಿಸಬೇಕು.
  • ಗ್ರಂಥಾಲಯ ನಿರ್ವಹಣೆ ಮಾಡಬೇಕು.
  • ಪುಸ್ತಕಗಳು ವಿತರಣೆ ಮಾಡಬೇಕು.
  • ಮೈದಾನ ವ್ಯವಸ್ಥೆ ಮಾಡಿಕೊಡಬೇಕು.
  • ಕ್ರೀಡಾ ಸಾಮಗ್ರಿಗಳನ್ನು ಕೊಡಬೇಕು.
  • ಬಸ್ಸು ಸೌಲಭ್ಯ ಕುರಿತು ಅಧಿಕಾರಿಗಳು ಮಧ್ಯಪ್ರವೇಶ ಮಾಡಬೇಕು.
  • ಪ್ರಥಮ ಚಿಕಿತ್ಸೆ ಸಾಮಗ್ರಿಗಳು ಕೊಡಬೇಕು.
  • ಉಪಾಹಾರ ಸಮಸ್ಯೆ ಬಗೆಹರಿಸಬೇಕು.

ಈ ಸಂದರ್ಭದಲ್ಲಿ ಮಾರುತಿ ರೆಡ್ಡಿ, ಮನೋಜ ಪಂಚಗಟ್ಟಿಮಠ, ಯಶವಂತ ಪಿ ಕೆ, ದರ್ಶನ ಯು ಎಮ್, ರಮೇಶ ಎಲ್, ರೇವಣಸಿದ್ದು ಕೆ ಆರ್, ಚೇತನ ಕೆ, ಶಿವಕುಮಾರ್, ಸಾಗರ ಎಸ್, ದರ್ಶನ ಪಿ ಎಚ್, ಅಭಿಷೇಕ ಎನ್ , ಶ್ರೀಧರ ಯು, ಪುನೀತ್ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಇದನ್ನೂ ನೋಡಿ: ಉನ್ನತ ಶಿಕ್ಷಣವನ್ನು ಕೇಂದ್ರೀಕರಣಗೊಳಿಸುವ, ಆರೆಸ್ಸೆಸ್ ಸಿದ್ಧಾಂತಕ್ಕೆ ಅವಕಾಶ ಕಲ್ಪಿಸುವ ಯುಜಿಸಿ ತಿದ್ದುಪಡಿಗಳು…

Donate Janashakthi Media

Leave a Reply

Your email address will not be published. Required fields are marked *