ಬೆಂಗಳೂರು | 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ- ಆರೋಪಿ ಬಂಧನ

Please follow and like us:
ಬೆಂಗಳೂರು: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಪೈಶಾಚಿಕ ಕೃತ್ಯ ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ರಾತ್ರಿ 7.30ರ ಸುಮಾರಿಗೆ ಸುಮಾರಿಗೆ ಘಟನೆ ನಡೆದಿದೆ. ಸೋಮವಾರ ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಯಾರು ಇರಲಿಲ್ಲ. ಈ ವೇಳೆ ಮನೆಗೆ ಬಂದ ಅಭಿಷೇಕ್​ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದಿದ್ದಾನೆ. ಬಳಿಕ, ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತ : ಬೆನ್ನಿನ ಎರಡು ಮೂಳೆ ಮುರಿತ, ಕುತ್ತಿಗೆಗೆ ಪೆಟ್ಟು

ಅತ್ಯಾಚಾರವೆಸಗುವ ವೇಳೆ ಬಾಲಕಿ ನರಳಿ ನರಳಿ ಪ್ರಾಣ ಬಿಟ್ಟಿದ್ದಾಳೆ. ಸದ್ಯ, ರಾಮಮೂರ್ತಿ ನಗರ ಠಾಣೆ ಪೊಲೀಸರು ಆರೋಪಿ ಅಭಿಷೇಕನನ್ನು ಬಂಧಿಸಿದ್ದಾರೆ. ಇನ್ನು, ಅಭಿಷೇಕ್​ ಕುಮಾರ್​ ಕೂಡ ಗಾರೆ ಕೆಲಸ ಮಾಡಿಕೊಂಡಿದ್ದ ಎಂಬುದಾಗಿ ತಿಳಿದು ಬಂದಿದೆ.

ಬಿಹಾರ ಮೂಲದ ಅಭಿಷೇಕ್ ಕುಮಾರ್ ಬಂಧನವನ್ನು ಪೂರ್ವ ಪೊಲೀಸ್ ಉಪ ಆಯುಕ್ತ ಡಿ ದೇವರಾಜ್ ಖಚಿತಪಡಿಸಿದ್ದಾರೆ. ಶಂಕಿತ ವ್ಯಕ್ತಿ ಬಿಹಾರ ಮೂಲದ ಕಾರ್ಮಿಕ ಎಂದು ದೇವರಾಜ್ ತಿಳಿಸಿದ್ದಾರೆ. ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರಿಂದ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Please follow and like us:
Donate Janashakthi Media

Leave a Reply

Your email address will not be published. Required fields are marked *