ಡಿ. ರೂಪಾ ಮೌದ್ಗಿಲ್‌ಗೆ ಎಡಿಜಿಪಿ ಹುದ್ದೆ: ಎರಡು ತಿಂಗಳಲ್ಲಿ ಪರಿಗಣಿಸಿ – ಹೈಕೋರ್ಟ್

Please follow and like us:
ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರ (ಎಡಿಜಿಪಿ) ಹುದ್ದೆಗೆ ಬಡ್ತಿ ನೀಡುವ ಸಂಬಂಧ ಹೊಸದಾಗಿ ಮನವಿ ಸಲ್ಲಿಸಲು ಹಿರಿಯ ಪೊಲೀಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್‌ಗೆ ಸೂಚಿಸಿರುವ ಹೈಕೋರ್ಟ್‌, ಏಪ್ರಿಲ್‌ 25 ಶುಕ್ರವಾರದಂದು ಎರಡು ತಿಂಗಳಲ್ಲಿ ಮನವಿಯನ್ನು ಕಾನೂನಿನ ಅನ್ವಯ ಪರಿಗಣಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಎಡಿಜಿಪಿ

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿರುವ ಕ್ರಿಮಿನಲ್‌ ಮಾನಹಾನಿ ಪ್ರಕರಣವು ಖಾಸಗಿ ದಾವೆಯಾಗಿದ್ದು, ಅದನ್ನು ಗಣನೆಗೆ ತೆಗೆದುಕೊಳ್ಳದೇ ನ್ಯಾಯಯುತವಾಗಿ ತನಗೆ ದೊರೆಯಬೇಕಾದ ಬಡ್ತಿ ನೀಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೋರಿ ರೂಪಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ವಾದ-ಪ್ರತಿವಾದ ಆಲಿಸಿದ ಪೀಠವು “ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಸಲ್ಲಿಸಿರುವ ಮಧ್ಯಪ್ರವೇಶ ಕೋರಿರುವ ಅರ್ಜಿಯು ಸೂಕ್ತವಾಗಿಲ್ಲ. ಅವರು ಅಗತ್ಯ ಪಕ್ಷಕಾರರಾಗಿಲ್ಲ. ಇನ್ನು, ರೂಪಾ ಅವರು ಹೊಸದಾಗಿ ಡಿಒಪಿಟಿಗೆ ಮನವಿ ಸಲ್ಲಿಸಬೇಕು. ಮನವಿಯ ಸಂಬಂಧ ಸಕ್ಷಮ ಪ್ರಾಧಿಕಾರವು ಎಂಟು ವಾರಗಳಲ್ಲಿ ನಿರ್ಧಾರ ಕೈಗೊಳ್ಳಬೇಕು” ಎಂದು ನ್ಯಾಯಾಲಯ ಅರ್ಜಿ ಇತ್ಯರ್ಥಪಡಿಸಿತು.

ಇದನ್ನೂ ಓದಿ: ಅಹಮದಾಬಾದ್‌ನಲ್ಲಿ ಅಕ್ರಮ ವಲಸಿಗರ ವಿರುದ್ಧ ಬೃಹತ್ ಕಾರ್ಯಾಚರಣೆ: 500ಕ್ಕೂ ಹೆಚ್ಚು ಬಂಧನ

ರೋಹಿಣಿ ಸಿಂಧೂರಿ ಅವರ ವಕೀಲರು “ರೂಪಾ ವಿರುದ್ಧ ಹೂಡಿರುವ ಕ್ರಿಮಿನಲ್‌ ಮಾನಹಾನಿ ಪ್ರಕರಣದಲ್ಲಿ ರೋಹಿಣಿ ಅವರು ದೂರುದಾರೆಯಾಗಿದ್ದಾರೆ. ಹೀಗಾಗಿ, ಪ್ರಕಣದಲ್ಲಿ ಮಧ್ಯಪ್ರವೇಶಿಕೆ ಕೋರಿ ಅರ್ಜಿ ಸಲ್ಲಿಸಿದ್ದೇವೆ. ಬಡ್ತಿ ವಿಚಾರವು ಡಿಒಪಿಟಿ ನಿಯಮದ ಪ್ರಕಾರ ಇದು ಮುಚ್ಚಿದ ಲಕೋಟೆಯ ಪ್ರಕ್ರಿಯೆಯಾಗಿದೆ” ಎಂದರು.

ರೂಪಾ ಪರ ವಕೀಲ “ರೋಹಿಣಿ ದೂರು ದಾಖಲಿಸಿದ್ದು, ತನಿಖೆ ನಡೆದು ಅದನ್ನು ಕೈಬಿಡಲಾಗಿದೆ. ತನಿಖೆ ಕೈಬಿಟ್ಟ ಮೇಲೂ ಬಡ್ತಿ ನೀಡುತ್ತಿಲ್ಲ. ಅಡ್ವೊಕೇಟ್‌ ಜನರಲ್‌ ಮತ್ತು ಕಾನೂನು ಇಲಾಖೆಯು ತಮ್ಮ ಮತ್ತು ರೋಹಿಣಿ ನಡುವಿನ ದಾವೆಗಳು ಖಾಸಗಿ ಪ್ರಕರಣ ಎಂದು ಹೇಳಿದೆ. ಇದು ಸೇವಾ ಷರತ್ತು ಮತ್ತು ನಿಯಮಗಳಿಗೆ ಅನ್ವಯಿಸುವುದಿಲ್ಲ” ಎಂದರು.

ಆಗ ಪೀಠವು “ರೋಹಿಣಿ ಅವರು ಇದರಲ್ಲಿ ಅಗತ್ಯ ಪಕ್ಷಕಾರರಾಗಲ್ಲ. ಇದು ಡಿಒಪಿಟಿ ಮತ್ತು ರೂಪಾ ಅವರಿಗೆ ಸಂಬಂಧಿಸಿದ ವಿಚಾರ. ಇದರಲ್ಲಿ ರೋಹಿಣಿ ಅವರು ಆತಂಕಗೊಳ್ಳುವುದು ಏನಿದೆ? ನೀವು ಕೇಡರ್‌ ಅಲ್ಲವೇ ಇಲ್ಲ. ಬೇರೆ ಕಾರಣಕ್ಕೆ ಅರ್ಜಿ ಸಲ್ಲಿಸಬಾರದು” ಎಂದು ಮೌಖಿಕವಗಿ ಹೇಳಿ ಅರ್ಜಿ ಇತ್ಯರ್ಥಪಡಿಸಿತು.

ಹಿರಿಯ ಐಪಿಎಸ್‌ ಅಧಿಕಾರಿ ಹೇಮಂತ್‌ ನಿಂಬಾಳ್ಕರ್‌ ಅವರು ಐ ಮಾನಿಟರಿ ಅಡ್ವೈಸರಿ ಪ್ರಕರಣದಲ್ಲಿ ಆರೋಪಿಯಾಗಿದ್ದು, ಅವರ ವಿರುದ್ಧ ಸಿಬಿಐ ಸಕ್ಷಮ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ. ಅದನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿತ್ತು. ಇದಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದೆ. ಅದಾಗ್ಯೂ, ಹೇಮಂತ್‌ ನಿಂಬಾಳ್ಕರ್‌ ಅವರಿಗೆ ಎಡಿಜಿಪಿ ಹುದ್ದೆಗೆ ಬಡ್ತಿ ನೀಡಲಾಗಿದೆ. ಹೀಗಾಗಿ, ರೋಹಿಣಿ ಸಿಂಧೂರಿ ಮಾಡಿರುವ ಆರೋಪಗಳನ್ನು ಆಧರಿಸಿ ತಮ್ಮ ಬಡ್ತಿಯನ್ನು ತಡೆಹಿಡಿಯಬಾರದು ಎಂದು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಮನವಿಯಲ್ಲಿ ರೂಪಾ ವಿವರಿಸಿದ್ದಾರೆ.

ಇದನ್ನೂ ನೋಡಿ: ನಿಶಿಕಾಂತ್ ದುಬೆ, ಧನ್ಕರ್‌ ಅವರ ಸುಪ್ರೀಂಕೋರ್ಟ್ ವಿರುದ್ಧ ಮಾತುಗಳು ನ್ಯಾಯಾಂಗ ನಿಂದನೆಯಲ್ಲವೇ? Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *