ಬೆಂಗಳೂರು ಕಾಲ್ತುಳಿತ: ರಾಜ್ಯಪಾಲರಿಗೆ ಪತ್ರ ಬರೆದ ನಾಗರಿಕ ಹಕ್ಕುಗಳ ಸಂಸ್ಥೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿರುವ ಘಟನೆ ಬಗ್ಗೆ ನಾಗರಿಕ ಹಕ್ಕುಗಳ ಸಂಸ್ಥೆ ರಾಜ್ಯಪಾಲರಿಗೆ ಪತ್ರ ಬರೆದಿದೆ. ಸರ್ಕಾರವನ್ನು ಅಮಾನತಿನಲ್ಲಿಡುವಂತೆ ಮನವಿ ಮಾಡಿದೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಿಗೆ ಪತ್ರ ಬರೆದಿರುವ ಸಿಟಿಜನ್ ರೈಟ್ಸ್ ಫೌಂಡೇಷನ್, ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ಪೂರ್ಣವಾಗುವವರೆಗೂ ಸರ್ಕಾರವನ್ನು ಅಮಾನತಿನಲ್ಲಿಡುವಂತೆ ಮನವಿ ಮಾಡಿದೆ.

ಇದನ್ನೂ ಓದಿ: ವಿಧಾನ ಪರಿಷತ್​ನ ನಾಲ್ವರು ಎಂಎಲ್​ಸಿಗಳ ನಾಮನಿರ್ದೇಶನ ಖಚಿತ

ಕಾನೂನು ಸುವ್ಯವಸ್ಥೆ ಕಾಪಾಡಲು ಶ್ರಮಿಸಿರುವ ಅಧಿಕಾರಿಗಳಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯಬೇಕು. ಘಟನೆ ಬಗ್ಗೆ ಸೂಕ್ತ ತನಿಖೆ ಆಗಬೇಕು. ತನಿಖೆ ಮುಗಿಯುವವರೆಗೂ ಸರ್ಕಾರವನ್ನು ಅಮಾನತಿನಲ್ಲಿಡಬೇಕು ಎಂದು ಒತ್ತಾಯಿಸಿದೆ.

ಇದನ್ನೂ ನೋಡಿ: ಶಾಂತಿಯ ನಡಿಗೆ ಮಂಗಳೂರಿನ ಕಡೆಗೆ – ಸಮಾನ ಮನಸ್ಕರ ನಿರ್ಧಾರ Janashakthi Media

Donate Janashakthi Media

Leave a Reply

Your email address will not be published. Required fields are marked *