ಬೆಂಗಳೂರು: 2023ರ ಚುನಾವಣೆಯಲ್ಲಿ ಹೆಚ್.ಡಿ.ಕೋಟೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದ ಮೈಸೂರು ಭಾಗದ ಬಿಜೆಪಿ ನಾಯಕ ಕೃಷ್ಣನಾಯಕ್ ಬಿಜೆಪಿ ಪಕ್ಷದಿಂದ ತೊರೆದು ಜೂನ್ 22 ಭಾನುವಾರದಂದು ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.
ಈ ಮೂಲಕ ಮೈಸೂರು ಭಾಗದಲ್ಲಿ ಚಿಗುರೊಡೆದಿದ್ದ ಕಮಲವನ್ನು ಜೆಡಿಎಸ್ ಚಿವುಟಿ ಹಾಕಿದಂತಾಗಿದೆ.
ಇದನ್ನೂ ಓದಿ: ಹಾಟ್ ಏರ್ ಬಲೂನ್ ಸ್ಫೋಟ; 8 ಮಂದಿ ಸಾವು
ಬೆಂಗಳೂರಿನಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಕೃಷ್ಣನಾಯಕ್ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ. ಇದೇ ವೇಳೆ ಕೃಷ್ಣನಾಯಕ್ ಬೆಂಬಲಿಗರು ಕೂಡ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.
ಇದನ್ನೂ ನೋಡಿ: ವಚನಾನುಭವ 30| ಅಲ್ಲಮನ ವಚನ | ಅರಿವಿನ ಜಾಗೃತಿ – ಡಾ. ಮೀನಾಕ್ಷಿ ಬಾಳಿ Janashakthi Media
