ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ಎಸಗಿದ ಪ್ರೊಫೆಸರ್; ಎಫ್ಐಆರ್ ದಾಖಲು

ಶಿವಮೊಗ್ಗ: ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳವೆಸಗಿರುವ ಆರೋಪ ನಗರದ ಸಿಮ್ಸ್ ಕಾಲೇಜು ಪ್ರೊಫೆಸರ್ ವಿರುದ್ಧ ಕೇಳಿಬಂದಿದ್ದೂ, ಪ್ರೊಫೆಸರ್ ಬಂಧನಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

ಸಿಮ್ಸ್ ಕಾಲೇಜು ಪ್ರೊಫೆಸರ್ ಡಾ. ಅಶ್ವಿನ್ ಹೆಬ್ಬಾರ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಂತ್ರಸ್ತ ವಿದ್ಯಾರ್ಥಿನಿ ಶಿವಮೊಗ್ಗದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಪ್ರೊಫೆಸರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಇದನ್ನೂ ಓದಿ: ಜೂನ್ 25: ನೆನಪಿನಲ್ಲಿ ಇಟ್ಟುಕೊಳ್ಳಬೇಕಾದ ಪ್ರತಿರೋಧದ ದಿನ

ಪ್ರಕರಣ ದಾಖಲಾಗುತ್ತಿದ್ದಂತೆ ಪ್ರೊಫೆಸರ್ ಡಾ.ಅಶ್ವಿನ್ ಹೆಬ್ಬಾರ್ ನಾಪತ್ತೆಯಾಗಿದ್ದಾರೆ. ಪ್ರೊಫೆಸರ್ ನನ್ನು ಬಂಧಿಸುವಂತೆ ಆಗ್ರಹಿಸಿ ಸಿಮ್ಸ್ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ತರಗತಿಗಳನ್ನು ಬಹಿಷ್ಕರಿಸಿ ಕೈಗೆ ಕಪ್ಪುಪಟ್ಟಿ ಧರಿಸಿ ಕಾಲೇಜು ಬಳಿ ಪ್ರತಿಭಟನೆ ನಡೆಸುತ್ತಿದ್ದು, ಪ್ರೊಫೆಸರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ನೋಡಿ: ಕೌಶಲ್ಯದ ಹೆಸರಲ್ಲಿ ಕಾರ್ಮಿಕ ಮಂಡಳಿಯ ಹಣ ವ್ಯಯ – ಕಾರ್ಮಿಕ ಸಂಘಟನೆಗಳ ಆಕ್ಷೇಪ

Donate Janashakthi Media

Leave a Reply

Your email address will not be published. Required fields are marked *