ಬೆಂಗಳೂರು: ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದೂ, ಭಾರೀ ಮಳೆ ಹಿನ್ನೆಲೆಯಲ್ಲಿ ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಕರಾವಳಿ ಹಾಗೂ ಮಲೆನಾಡು ಸೇರಿದಂತೆ ವಿವಿಧ ಭಾಗದಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕೆಆರ್ಎಸ್ ಹಾಗೂ ಹಾರಂಗಿ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಜುಲೈ 8ರಂದು ವಿವಿಧ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಕೊಡಗಿನ ತಲಕಾವೇರಿಯಲ್ಲಿ 48.8 ಮಿ.ಮೀ ಮಳೆಯಾಗಿದೆ. ಇಂದೂ ಸಹ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾಗಮಂಡಲ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.
ಇದನ್ನೂ ಓದಿ: ಸುಪ್ರೀಂ ಕೋರ್ಟಿನ ಸಿಬ್ಬಂದಿ ನೇಮಕಾತಿಯಲ್ಲಿ ಒಬಿಸಿ ಮೀಸಲಾತಿಯ ಮಹತ್ವದ ನಡೆ
ಕೆಆರ್ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 122.50
ಒಳಹರಿವು: 33,197
ಹೊರಹರಿವು: 29,126 ಕ್ಯೂಸೆಕ್ಸ್ಗಳಲ್ಲಿ
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,853.25
ಒಳಹರಿವು: 7,369
ಹೊರಹರಿವು: 5,000 ಕ್ಯೂಸೆಕ್ಸ್ಗಳಲ್ಲಿ
ಕಬಿನಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284.00
ಇಂದಿನ ಮಟ್ಟ: 2,281.2
ಒಳಹರಿವು: 14,948
ಹೊರಹರಿವು: 12,000 ಕ್ಯೂಸೆಕ್ಸ್ಗಳಲ್ಲಿ
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2,919.81
ಒಳಹರಿವು: 17,540
ಹೊರಹರಿವು: 15,325 ಕ್ಯೂಸೆಕ್ಸ್ಗಳಲ್ಲಿ
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,794.90
ಒಳಹರಿವು: 39,148
ಹೊರಹರಿವು: 7,023 ಕ್ಯೂಸೆಕ್ಸ್ಗಳಲ್ಲಿ
ಸೂಪಾ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 542.28
ಒಳಹರಿವು: 26,213.2
ಹೊರಹರಿವು: 4,280.37 ಕ್ಯೂಸೆಕ್ಸ್ಗಳಲ್ಲಿ
ಮಾಣಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 585.50
ಒಳಹರಿವು: 3,934
ಹೊರಹರಿವು: 0
ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,625.07
ಒಳಹರಿವು: 54,550
ಹೊರಹರಿವು: 61,645
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.5
ಇಂದಿನ ಮಟ್ಟ: 2,066.65
ಒಳಹರಿವು: 9,653
ಹೊರಹರಿವು: 194
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,161
ಒಳಹರಿವು: 21,022
ಹೊರಹರಿವು: 1,464
ಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 170.9
ಒಳಹರಿವು: 20,626
ಹೊರಹರಿವು: 5,198
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.6
ಇಂದಿನ ಮಟ್ಟ: 517.31
ಒಳಹರಿವು: 1,10,612
ಹೊರಹರಿವು: 1,15,045
ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 490.80
ಒಳಹರಿವು: 1,15,000
ಹೊರಹರಿವು: 1,12,577
ಇದನ್ನೂ ನೋಡಿ: ಅನ್ನ ತಿನ್ನುವವರೆಲ್ಲ ರೈತರ ಹೋರಾಟ ಬೆಂಬಲಿಸಬೇಕು | ಚನ್ನರಾಯಪಟ್ಟಣ ಹೋರಾಟಕ್ಕೆ ಸಾಹಿತಿ ಕಲಾವಿದರ ಸಾತ್
