ಮಹಿಳೆಯರ ಫೋಟೋ – ವಿಡಿಯೋ ಮಾಡಿ ಪೋಸ್ಟ್ ಮಾಡುತ್ತಿದ್ದ ವ್ಯಕ್ತಿ ಬಂಧನ

ಬೆಂಗಳೂರು: ಯುವತಿಯರ, ಮಹಿಳೆಯರ ಫೋಟೋ ಕ್ಲಿಕ್ಕಿಸಿ, ವಿಡಿಯೋಗಳನ್ನು ರೆಕಾರ್ಡ್ ಮಾಡಿಕೊಂಡು ಅದನ್ನು ಅಸಭ್ಯವಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡುತ್ತಿದ್ದ  ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

‌ನಗರದ ಬನಶಂಕರಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಬಂಧಿತನನ್ನು ಕೆ.ಆರ್.ಪುರಂ ನ ಗುರುದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಈತ ಹೋಟೆಲ್ ಮ್ಯಾನೇಜ್ಮೆಂಟ್ ನಲ್ಲಿ ಪದವಿ ಮುಗಿಸಿ ಕೆಲಸಕ್ಕಾಗಿ ಯತ್ನಿಸುತ್ತಿದ್ದ.

ಇದನ್ನೂ ಓದಿ: ಕೊಲೆಯಾದ ಶವಗಳನ್ನು ಧರ್ಮಸ್ಥಳದಲ್ಲಿ ಹೂಳಿರುವ ಪ್ರಕರಣದ ತನಿಖೆ ಸದ್ಯದ ತುರ್ತು: ಎ ವೇಲನ್‌

ಇತ್ತೀಚೆಗೆ ಕಂಡ ಕಂಡ ಹುಡುಗಿಯರ ಫೋಟೋ ಕ್ಲಿಕ್ಕಿಸಿ ಅದನ್ನು ಅಸಭ್ಯವಾಗಿ ಎಡಿಟ್ ಮಾಡಿ ಇನ್ ಸ್ಟಾ ಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡುತ್ತಿದ್ದ. ಈ ಬಗ್ಗೆ ಯುವತಿಯೊಬ್ಬಳು ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಳು. ಈ ಹಿನ್ನೆಲೆಯಲ್ಲಿ ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ನೋಡಿ: ಪಾಲಾರ್ ಸಿನಿಮಾ | ಚನ್ನರಾಯಪಟ್ಟಣ ಭೂಸ್ವಾಧೀನ ಹೋರಾಟ Janashakthi Media

Donate Janashakthi Media

Leave a Reply

Your email address will not be published. Required fields are marked *