ಸಿಗಂದೂರು ಸೇತುವೆ | ಉದ್ಘಾಟನೆಗೆ ಸಿಎಂ ಗೈರು – ಗಡ್ಕರಿ ನಿರ್ಧಾರಕ್ಕೆ ಸಿಎಂ ಆಕ್ರೋಶ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರ – ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ ಎಂದು ಜುಲೈ 14ರಂದು ಮುಖ್ಯಮಂತ್ರಿ ಸಿದ್ದಾರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಸಿದ್ದಾರಾಮಯ್ಯ, ಸಾಗರ – ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭಕ್ಕೆ ನನ್ನನ್ನು ತಡವಾಗಿ ಆಮಂತ್ರಿಸಿದ್ದು, ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಹಲವು ಅಭಿವೃದ್ದಿ ಕಾರ್ಯಕ್ರಮಗಳನ್ನು ನಾನು ಹಮ್ಮಿಕೊಂಡಿರುವುದರಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. .

ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮುಂದೂಡಿ, ಬೇರೊಂದು ದಿನ ಆಯೋಜಿಸಬೇಕು ಎಂದು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆ ಸಚಿವರಾದ ನಿತಿನ್ ಗಡ್ಕರಿ ರಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ ನಿಧನ

ಪತ್ರದ ಸಾರಾಂಶ ಇಂತಿದೆ

ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಶಿವಮೊಗ್ಗ ಜಿಲ್ಲೆ ಸಾಗರದ ನೆಹರೂ ಕ್ರೀಡಾಂಗಣದಲ್ಲಿ ಇಂದು ಸಾಗರ – ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಿದೆ.

ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರನ್ನು ಸಹಾ ಮುದ್ರಿಸಲಾಗಿದೆ. ಆದರೆ ನನಗೆ ಈ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡದ ಕಾರಣದಿಂದ ಈಗಾಗಲೇ ನನ್ನ ಅಧ್ಯಕ್ಷತೆಯಲ್ಲಿ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ.

ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆಯು ಇಂತಹ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜನೆಗೆ ಮುನ್ನ ರಾಜ್ಯ ಸರ್ಕಾರವನ್ನು ಮುಂಚಿತವಾಗಿಯೇ ಸಂಪರ್ಕಿಸಿದ್ದರೆ ಮತ್ತಷ್ಟು ಸಮರ್ಪಕವಾಗಿರುತ್ತಿತ್ತು.

ಮುಂದೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಸಂದರ್ಭದಲ್ಲಿ ರಾಜ್ಯ ಸರ್ಕಾರವನ್ನು ಸಕಾಲದಲ್ಲಿ ಸಂಪರ್ಕಿಸುವಂತೆ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆಗೆ ಸೂಚನೆ ನೀಡಬೇಕು ಎಂದು ತಮ್ಮಲ್ಲಿ ವಿನಂತಿಸುತ್ತೇನೆ.

ಇಂದಿನ ಕಾರ್ಯಕ್ರಮವನ್ನು ಮುಂದೂಡಿ, ನಿಮಗೆ ಅನುಕೂಲವಾಗುವ ಒಂದೆರೆಡು ದಿನಾಂಕಗಳನ್ನು ನನಗೆ ಒದಗಿಸಬೇಕೆಂದು ಕೋರುತ್ತೇನೆ. ಆ ಮೂಲಕ ಇಂಥದ್ದೊಂದು ಮಹತ್ವದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ನಾನು ಕೂಡ ಭಾಗವಹಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ನೋಡಿ: ಬೆಂಗಳೂರು | ಜುಲೈ13ರಂದು ಸಾಮ್ರಾಟ್ ಅಶೋಕ ನಾಟಕ ಪ್ರದರ್ಶನJanashakthi Media

Donate Janashakthi Media

Leave a Reply

Your email address will not be published. Required fields are marked *