ಹಾಸ್ಟೆಲ್ ಬಯಸಿ ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಎಸ್ಎಫ್ಐ ಪ್ರತಿಭಟನೆ

ಹಾವೇರಿ: ಹಾಸ್ಟೆಲ್ ಬಯಸಿ ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಹಾಗೂ 2025-26 ನೇ ಸಾಲಿನ ಹಾಸ್ಟೆಲ್ ಪ್ರವೇಶ ಆಯ್ಕೆ ಪಟ್ಟಿ ಬಿಡುಗಡೆ ವಿಳಂಬ ನೀತಿಯನ್ನು ಖಂಡಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ ಪ್ರತಿಭಟನೆ, ಧರಣಿ ನಡೆಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕಾಧಿಕಾರಿ ಶಾಂತಪ್ಪ ದೊಡ್ಡಮನಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಮುಖಂಡರಾದ ಸುನೀಲ್ ನಾಗವತ್ ಮಾತನಾಡಿ, ರಾಜ್ಯದಲ್ಲಿ ಶಾಲಾ ಕಾಲೇಜು ಆರಂಭವಾಗಿ ಒಂದು ತಿಂಗಳು ಕಳೆದರು ಹಾಸ್ಟೆಲ್ ಬಯಸಿ ವಿದ್ಯಾರ್ಥಿಗಳು ಹಾಸ್ಟೆಲ್ ಅರ್ಜಿ ಹಾಕಿದ ವಿದ್ಯಾರ್ಥಿಗಳು ಗ್ರಾಮಗಳಿಂದ ಕಾಲೇಜುಗಳಿಗೆ ದಿನನಿತ್ಯವೂ ಹಣ ಕೊಟ್ಟು ಬರುತ್ತಿದ್ದಾರೆ. ಒಂದಡೆ ಅನೇಕ ಗ್ರಾಮಗಳಿಗೆ ಬಸ್  ಸೌಲಭ್ಯ ಇಲ್ಲ ಮತ್ತು ಅನೇಕ ವಿದ್ಯಾರ್ಥಿಗಳು  ಹಾಸ್ಟೆಲ್ ಗೆ ಅರ್ಜಿ ಹಾಕಿ ಆಯ್ಕೆ ಪಟ್ಟಿ ಪ್ರಕಟಿಸುತ್ತಾರೆ ಎಂದು ಬಕಪಕ್ಷಿಗಳ ಹಾಗೆ ಕಾಯುತ್ತಿದ್ದಾರೆ ಮತ್ತು ಅನೇಕ ವಿದ್ಯಾರ್ಥಿಗಳು ದೂರದ ಊರಿನಿಂದ ನೂರಾರು ರೂಪಾಯಿ ಖರ್ಚು ಮಾಡಿಕೊಂಡು ಬರುತ್ತಿದ್ದಾರೆ.

ಇದನ್ನೂ ಓದಿ: ಹಟ್ಟಿ| ಆರೋಗ್ಯ, ಶಿಕ್ಷಣ ಸೇರಿ ವಿವಿಧ ಸಮಸ್ಯೆಗಳನ್ನು ಪರಿಹಾರಿಸಲು ಸಿಪಿಐ(ಎಂ) ಆಗ್ರಹ

ಜಿಲ್ಲೆಯ ಎಲ್ಲಾ ತಾಲ್ಲೂಕಿನ ಆಯ್ಕೆ ಸಮಿತಿಯ ಅಧ್ಯಕ್ಷರು ಶಾಸಕರು ಆಗಿರುವುದರಿಂದ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಬಿಡುಗಡೆಗೆ ವಿಳಂಬ ಮಾಡಬಾರದು, ಮುತುವರ್ಜಿಯಿಂದ ಕೂಡಲೇ ಆಯ್ಕೆ ಪಟ್ಟಿ ಬಿಡುಗಡೆ ಮಾಡಿಸಬೇಕು ಹಾಗೂ ಎಲ್ಲಾ ಹಾಸ್ಟೆಲ್ ಗಳನ್ನು ಕೂಡಲೇ ಯೋಗ್ಯವಾದ ಅಗತ್ಯ ಸೌಲಭ್ಯಗಳನ್ನು ಒಳಗೊಂಡ ಕಟ್ಟಡದಲ್ಲಿ ಪ್ರಾರಂಭಿಸಿ ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಸೌಲಭ್ಯ ಒದಗಿಸಬೇಕು ಮತ್ತು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಹಾಸ್ಟೆಲ್ ಗಳನ್ನು ಕಲ್ಪಿಸಬೇಕು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಎಲ್ಲಾ ತಾಲ್ಲೂಕ ವಿಸ್ತರಣಾಧಿಕಾರಿಗಳು ಎಚ್ಚೆತ್ತುಕೊಂಡು ಈ ಕೂಡಲೇ ಶಾಸಕರ ಗಮನಕ್ಕೆ ತಂದು ಹಾಸ್ಟೆಲ್ ಆಯ್ಕೆ ಪಟ್ಟಿ ಬಿಡುಗಡೆ ಮಾಡಬೇಕು. ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಬೇಕು.  ಮೆನ್ ಚಾರ್ಟ್ ಪ್ರಕಾರ ಉತ್ತಮ ಗುಣಮಟ್ಟದ ಆಹಾರವನ್ನು ಸಮಯಕ್ಕೆ ಸರಿಯಾಗಿ ಒದಗಿಸಬೇಕು. ಅಗತ್ಯ ಮೂಲಭೂತ ಸೌಕರ್ಯಗಳನ್ನು ನೀಡಬೇಕೆಂದು ಹಾಗೂ ವಿದ್ಯಾರ್ಥಿಗಳ ಆಹಾರ ಭತ್ಯೆಯನ್ನು ಕನಿಷ್ಠ 3.500 ರೂ ಕ್ಕೆ ಏರಿಕೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಮುಖಂಡರಾದ ಫಕ್ಕಿರೇಶ್ ಮ್ಯಾಗಳಮನಿ, ಸುನೀಲ್ ಕುಮಾರ್ ಎಲ್, ಸಂಜೀವ್ ತಿಳವಳ್ಳಿ, ಪ್ರಮೋದ್ ಹೆಚ್, ನಾಗರಾಜ ಎಮ್ ಎಚ್, ಜ್ಯೋತಿ ಎಸ್ ಕೆ, ವಿದ್ಯಾ ಹೆಚ್ ಆರ್, ಸೀಮಾ ಬಾನು, ಶ್ರೀಕಾಂತ್ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಇದನ್ನೂ ನೋಡಿ: 17 ಕೋಟಿ ಜನಸಂಖ್ಯೆ ಬಡತನದಿಂದ ಹೊರ ಬಂದಿರುವ ವರದಿಯ‌ ನೈಜತೆಯೇನು?

Donate Janashakthi Media

Leave a Reply

Your email address will not be published. Required fields are marked *