ಮುಂದಿನ 2 ದಿನಗಳ ಅವಧಿಗೆ ಬೆಂಗಳೂರು ಸೇರಿ ವಿವಿಧ ಭಾಗದಲ್ಲಿ ಧಾರಾಕಾರ ಮಳೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು ಪಡೆದುಕೊಂಡಿದೆ. ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರ ಭಾಗದಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಮುಂದಿನ ಎರಡು ದಿನಗಳ ಅವಧಿಗೆ ಬೆಂಗಳೂರು ಸೇರಿ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಮುಂದಿನ

ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದ್ದು ವಿವಿಧ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಎಲ್ಲೆಲ್ಲಿ ಮಳೆ ಆಗಲಿದೆ ಎನ್ನುವ ವಿವರ ಇಲ್ಲಿದೆ. ಮುಂದಿನ

ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಪಡೆದುಕೊಂಡಿದೆ. ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಬೆಂಗಳೂರು ಸೇರಿ ಕರಾವಳಿ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಮುಂದುವರಿದಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಜರಾತಿಯಲ್ಲಿ ಅಕ್ರಮ; ಇಬ್ಬರು ವಜಾ

ಕರಾವಳಿ ಜಿಲ್ಲೆಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಧಾರಾಕಾರ ಮಳೆ ಮುಂದುವರಿದಿದೆ. ಹೀಗಾಗಿ ಈ ಭಾಗದಲ್ಲಿ ಆರೆಂಜ್ ಅಲರ್ಟ್ ಕೊಡಲಾಗಿದೆ. ಬೆಂಗಳೂರಿನಲ್ಲೂ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಜುಲೈ 18 ಹಾಗೂ 19 ರಂದು ಸಹ ಕರ್ನಾಟಕದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್:

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ಸಾಧಾರಣ ಮಳೆ ಆಗಲಿದೆ. ಅಲ್ಲದೇ ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು ಹಾಗೂ ಕೋಲಾರ ಜಿಲ್ಲೆಗಳಲ್ಲೂ ಧಾರಾಕಾರ ಮಳೆ ಆಗುವ ಸಾಧ್ಯತೆ ಇದ್ದು. ಈ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಅವಧಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಕರ್ನಾಟಕದಾದ್ಯಂತ ನೈಋತ್ಯ ಮಾನ್ಸೂನ್ ಪ್ರಬಲವಾಗಿದೆ ಮತ್ತು ಒಳನಾಡಿನ ಕರ್ನಾಟಕದಾದ್ಯಂತ ದುರ್ಬಲವಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದ್ದು. ಗಾಳಿಯ ವೇಗವು ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ.

ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಇರಲಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಇರಲಿದೆ. ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿ ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ. ಈ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಚಿತ್ರದುರ್ಗ, ತುಮಕೂರು, ರಾಮನಗರ, ಬಳ್ಳಾರಿ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ (ಗಂಟೆಗೆ 30-40 ಕಿ.ಮೀ) ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ರಿಪೋರ್ಟ್ ಹೇಳಿದೆ.

ಇದನ್ನೂ ನೋಡಿ: ಉದ್ಯೋಗ ಸಂಬಂಧಿತ ಪ್ರೋತ್ಸಾಹ ಯೋಜನೆ(ELI) ಎನ್ನುವ ವಂಚನೆಯ ಆಳ‌ ಅಗಲ.. Janashakthi Media

Donate Janashakthi Media

Leave a Reply

Your email address will not be published. Required fields are marked *