ತಮಿಳುನಾಡು ಸಿಎಂ ಎಂ. ಕೆ ಸ್ಟಾಲಿನ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ. ಕೆ ಸ್ಟಾಲಿನ್ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆ ದಾಖಲಾಗಿದ್ದರೆ. ಚೆನ್ನೈನ ಗ್ರೀಮ್ಸ್ ರಸ್ತೆಯಲ್ಲಿರು ಅಪೋಲೋ ಆಸ್ಪತ್ರೆಗೆ ಸ್ಟಾಲಿನ್ ಅವರನ್ನು ದಾಖಲಿಸಲಾಗಿದೆ.

ನುರಿತ ವೈದ್ಯರ ತಂಡ ಸ್ಟಾಲಿನ್‌ಗೆ ಚಿಕಿತ್ಸೆ ನೀಡುತ್ತಿದ್ದಾರೆ. ಸ್ಟಾಲಿನ್ ಆರೋಗ್ಯ ತಪಾಸಣೆ ನಡೆಸಲಾಗಿದೆ. ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಪೋಲೋ ವೈದ್ಯರು ಹೇಳಿದ್ದಾರೆ. ಇತ್ತ ಸ್ಟಾಲಿನ್ ಆಸ್ಪತ್ರೆ ದಾಖಲಾಗುತ್ತಿದ್ದ ಮಾಹಿತಿ ತಿಳಿಯುತ್ತಿದ್ದಂತೆ ಅಭಿಮಾನಿಗಳು, ಬೆಂಬಲಿಗರು ಅಪೋಪೋ ಆಸ್ಪತ್ರೆಯತ್ತ ದೌಡಾಯಿಸಿದ್ದಾರೆ.

ಇದನ್ನೂ ಓದಿ: ತಾನೇ ತೋಡಿದ ಗುಂಡಿಯಲ್ಲಿ ಚಿಕ್ಕಧಣಿಗಳು

ಈ ಕುರಿತು ಹೇಳಿಕೆ ಪ್ರಕಟಿಸಿರುವ ಅಪೋಲೋ ಆಸ್ಪತ್ರೆಯ ಆಡಳಿತ ಮಂಡಳಿ, ಬೆಳಗ್ಗೆ ನಡೆಯುವಾಗ ತಲೆಸುತ್ತಿದ ಅನುಭವ ಆಗಿರುವ ಹಿನ್ನೆಲೆ ಸಿಎಂ ಎಂಕೆ ಸ್ಟಾಲಿನ್​ ಆಸ್ಪತ್ರೆಗೆ ದಾಖಲಾಗಿದ್ದು, ಅಗತ್ಯವಾದ ಎಲ್ಲಾ ಪರೀಕ್ಷೆ ನಡೆಸಿ, ಚಿಕಿತ್ಸೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮೊದಲು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್​, ಎಐಎಡಿಎಂಕೆ ಮಾಜಿ ಸಚಿವ ಅನ್ವರ್​ ರಾಯ್​ ಅವರು ಡಿಎಂಕೆ ಸೇರುತ್ತಿರುವ ಹಿನ್ನೆಲೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇದಾದ ಬಳಿಕ ಅವರು, ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಪರವಾಗಿ ಕೊಳತ್ತೂರಿನ ಕಪಾಲೀಶ್ವರರ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅರಿವಲಯಂನಿಂದ ಹೊರಟಿದ್ದರು. ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅವರಿಗೆ ಇದ್ದಕ್ಕಿದ್ದಂತೆ ದಣಿದಂತೆ ಕಂಡಿದ್ದರು.

ಇದನ್ನೂ ನೋಡಿ: ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಪ್ರಕರಣಪ್ರಭಾವ ಲೆಕ್ಕಿಸದೆ ಬಂಧಿಸಬೇಕು | Janashakthi Media

Donate Janashakthi Media

Leave a Reply

Your email address will not be published. Required fields are marked *