ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡದ ಅಧಿಕಾರಿಗಳ ವರ್ತನೆ ಖಂಡಿಸಿ ರೈತರ ಸಂಘ ಪ್ರತಿಭಟನೆ

ಳ್ಳಕೆರೆ: ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡದ ಅಧಿಕಾರಿಗಳ ವರ್ತನೆಯನ್ನು ಖಂಡಿಸಿ ಆಗಸ್ಟ್‌ 1ರಂದು ರೈತ ಸಂಘ ಮತ್ತು ಹಸಿರು ಸೇನೆ ತಾಲ್ಲೂಕು ಘಟಕದ ಕಾರ್ಯಕರ್ತರು ನಗರದ ತಾಲ್ಲೂಕು ಕಚೇರಿ ಬಾಗಿಲಿಗೆ ಅಡ್ಡಲಾಗಿ ಕುಳಿತು ಪ್ರತಿಭಟನೆ ನಡೆಸಿದರು.

ರೈತ ಸಂಘದ ಹಿರಿಯ ಮುಖಂಡ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಮಾತನಾಡಿ, ‘ತಾಲ್ಲೂಕಿನ ತಳು ಹೋಬಳಿ ವ್ಯಾಪ್ತಿಯ ಬೇಡರೆಡ್ಡಿಹಳ್ಳಿ ಗ್ರಾಮ ಪಂಚಾಯಿತಿಗೆ ಕುಡಿಯುವ ನೀರು ಪೂರೈಕೆ ಸಲುವಾಗಿ ಸರಬರಾಜು ಮಾಡಿದ ವಿದ್ಯುತ್ ಪರಿಕರಗಳ ಬಿಲ್ ಪಾವತಿಸಲು ವಿಳಂಬ ಧೋರಣೆ ಅನುಸರಿಸುತ್ತಿದೆʼ ಎಂದು ಗ್ರಾಮ ಪಂಚಾಯಿತಿ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: 13 ವರ್ಷದ ಬಾಲಕನನ್ನು ಅಪಹರಿಸಿ ಸುಟ್ಟು ಹಾಕಿದ ಅಪಹರಣಕಾರರು

‘ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮೂರು ದಿನ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಯಾರೂ ಸ್ಪಂದಿಸುತ್ತಿಲ್ಲ’ ಎಂದು ಅಭಿಷೇಕರೆಡ್ಡಿ ಬೇಸರ ವ್ಯಕ್ತಪಡಿಸಿದರು.

‘ಗ್ರಾಮ ಪಂಚಾಯಿತಿಗೆ ಒದಗಿಸಿದ ವಿದ್ಯುತ್ ಪರಿಕರಿಗಳ ಬಿಲ್ ಪಾವತಿ ಪರಿಶೀಲನೆಗೆ ವಿಶೇಷ ತಂಡ ರಚಿಸಲಾಗಿದೆ. ಆ ತಂಡ ವರದಿ ನೀಡಿದ ಬಳಿಕ ಕ್ರಮ ಕೈಗೊಳ್ಳಲಾಗುವುದು’ ಎಂದು ತಹಶೀಲ್ದಾರ್ ರೇಹಾನ್ ಪಾಷಾ ಮತ್ತು ಇಒ ಎಚ್.ಶಶಿಧರ್ ಪ್ರತಿಭಟನಕಾರರಿಗೆ ಮನವರಿಕೆ ಮಾಡಿದರು.

ಇದನ್ನೂ ನೋಡಿ: ಧರ್ಮಸ್ಥಳದಲ್ಲಿನ ಕೊಲೆ ಅತ್ಯಾಚಾರಗಳ ಹಿಂದೆ ಇರುವವರು ಯಾರು? ಸತ್ಯ ಹೊರ ಬರಲಿ…

Donate Janashakthi Media

Leave a Reply

Your email address will not be published. Required fields are marked *