ಚಿತ್ರದುರ್ಗ| ಹಿಂಡಸಕಟ್ಟೆ ಗ್ರಾಮದ ಜನರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣ

ಚಿತ್ರದುರ್ಗ : ಹಿರಿಯೂರು ತಾಲ್ಲೂಕಿನ ಉಡುವಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ಹಿಂಡಸಕಟ್ಟೆ ಗ್ರಾಮದ ಜನರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಂತರ್ಜಲ ಕುಸಿತದಿಂದ ಕೊಳವೆ ಬಾವಿಗಳಲ್ಲಿ ನೀರು ಬತ್ತಿದ್ದು. 500 ಜನಸಂಖ್ಯೆ ಇರುವ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ 3 ಕೊಳವೆ ಬಾವಿ ಕೊರೆಸಲಾಗಿದೆ. ಚಿತ್ರದುರ್ಗ

ಈ ನೀರು ಗ್ರಾಮಸ್ಥರಿಗೆ ಸಾಲುತ್ತಿಲ್ಲ. ಆದರೆ, ಕೊಳವೆ ಬಾವಿಗಳಲ್ಲಿ ಸಣ್ಣ ಪ್ರಮಾಣದಲ್ಲಿ ನೀರು ಬರುತ್ತಿದೆ. ಗ್ರಾಮದ ಮಹಿಳೆಯರು ಗ್ರಾಮ ಪಂಚಾಯಿತಿ ಆಡಳಿತಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಆರ್. ಲೋಕೇಶ್ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಭೂಮಿ ಗೆದ್ದ ರೈತರು | ಸರ್ಕಾರವನ್ನು ನಡುಗಿಸಿದ ಐತಿಹಾಸಿಕ ಹೋರಾಟ

ಉಡುವಳ್ಳಿ ಕೆರೆಯಲ್ಲಿ ನೀರಿದ್ದರೆ ನಮ್ಮ ಭಾಗದಲ್ಲಿ ಅಂತರ್ಜಲ ವೃದ್ಧಿಸುತ್ತದೆ. ಯಾವುದಾದರೂ ಮೂಲದಿಂದ ಉಡುವಳ್ಳಿ ಕೆರೆಗೆ ನೀರು ಹರಿಸಿ ಎಂದು 25-30 ವರ್ಷದಿಂದ ಹೋರಾಟ ನಡೆಸುತ್ತಿದ್ದರೂ ಜನಪ್ರತಿನಿಧಿಗಳ ಕಣ್ಣು ತೆರೆದಿಲ್ಲ ಎಂದು ಅವರು ಆರೋಪಿಸಿದರು.

ಶ್ರಾವಣ ಮಾಸ ಆರಂಭವಾಗಿದೆ. ಹಬ್ಬ, ಮದುವೆ ಇತ್ಯಾದಿ ಸಮಾರಂಭ ನಡೆಯುವ ದಿನಗಳಲ್ಲಿ ಬಳಸಲು ನೀರೇ ಇಲ್ಲದಿದ್ದರೆ ಜನ ಏನು ಮಾಡಬೇಕು ಎಂದು ಗ್ರಾಮದ ಲೋಕೇಶ್ ಪ್ರಶ್ನಿಸಿದರು.

ಇದನ್ನೂ ನೋಡಿ : ಪರಿಸರ ಜಾಗೃತಿ | ‘ಪ್ಲಾಸ್ಟಿಕ್ ಬಳಕೆಯಿಂದ ಜೀವರಾಶಿಗೆ ಅಪಾಯ‘ Janashakthi Media

Donate Janashakthi Media

Leave a Reply

Your email address will not be published. Required fields are marked *