ಬೆಂಗಳೂರು: ಶ್ರಾವಣ ಮಾಸದಲ್ಲಿ ಬರುವ ವರಮಹಾಲಕ್ಷ್ಮಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ.ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಜನರು ಸಾಲು ಹಬ್ಬಗಳ ಆಚರಣೆಯಲ್ಲಿ ಬ್ಯೂಸಿಯಾಗುತ್ತಾರೆ. ಪ್ರತಿಯೊಂದು ಮನೆಯಲ್ಲೂ ವರಮಹಾಲಕ್ಷ್ಮಿ ಹಬ್ಬ ಆಚರಿಸಲಾಗುತ್ತದೆ. ವರಮಾಹಲಕ್ಷ್ಮಿ ಹಬ್ಬದ ನಿಮಿತ್ತ ಮಾರುಕಟ್ಟೆಗಳಲ್ಲಿ ಖರಿದಿ ಭರಾಟೆ ಜೋರಾಗಿದೆ. ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳ ಖರೀದಿಗಾಗಿ ಗ್ರಾಹಕರು ಕೆಆರ್ ಮಾರುಕಟ್ಟೆಯತ್ತ ಬರುತ್ತಿದ್ದಾರೆ. ಬೆಂಗಳೂರು
ಹಬ್ಬದ ಹಿನ್ನೆಲೆಯಲ್ಲಿ ಬೇಡಿಕೆ ಹೆಚ್ಚಾಗಿದ್ದು, ಅಗತ್ಯದಷ್ಟು ವಸ್ತುಗಳ ಪೂರೈಕೆಯಾಗುತ್ತಿಲ್ಲ. ಇದರಿಂದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಹೂವು, ಹಣ್ಣು ಮತ್ತು ತರಕಾರಿಗಳ ಬೆಲೆ ಏರಿಕೆಯಾಗಿದೆ. ಹೂವು, ಹಣ್ಣುಗಳ ಬೆಲೆಯಲ್ಲಿ ಏರಿಕೆ ಕಂಡು ಗ್ರಾಹಕರು ಅಸಮಾಧಾನ ಹೊರಹಾಕಿದ್ದಾರೆ. ಕಳೆದ ವಾರಕ್ಕಿಂತ ಈ ದರದಲ್ಲಿ ಗಜಗಜಾಂತರ ವ್ಯತ್ಯಾಸವಿದೆ ಎನ್ನುತ್ತಿದ್ದಾರೆ.
ಇದನ್ನೂ ಓದಿ : ಧರ್ಮಸ್ಥಳ| ಯೂಟ್ಯೂಬರ್‌ಗಳ ಮೇಲೆ ಹಲ್ಲೆ: ನಟ ಪ್ರಕಾಶ್ ರಾಜ್ ಖಂಡನೆ
ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಹಣ್ಣು, ತರಕಾರಿ ಮತ್ತು ಹೂವುಗಳ ಬೆಲೆ ಗಗನಕ್ಕೇರಿದೆ. ಹಬ್ಬದ ಬೇಡಿಕೆಯಿಂದಾಗಿ ಪೂರೈಕೆ ಕಡಿಮೆಯಾಗಿದ್ದು, ಬೆಲೆ ಏರಿಕೆಗೆ ಕಾರಣವಾಗಿದೆ. ಗ್ರಾಹಕರು ಬೆಲೆ ಏರಿಕೆಯಿಂದಾಗಿ ತೊಂದರೆ ಅನುಭವಿಸುತ್ತಿದ್ದಾರೆ. ಬಟಾಣಿ, ಹುರುಳಿಕಾಯಿ, ಆಪಲ್, ದಾಳಿಂಬೆ ಮುಂತಾದ ವಸ್ತುಗಳ ಬೆಲೆಗಳು ತೀವ್ರವಾಗಿ ಏರಿಕೆಯಾಗಿವೆ. ಹೂವುಗಳ ಬೆಲೆಯೂ ಅಧಿಕವಾಗಿದೆ.
ಇದನ್ನೂ ನೋಡಿ : ಧರ್ಮಸ್ಥಳ | ಮಗಳನ್ನು ನೆನೆದು ಕಣ್ಣೀರು ಹಾಕಿದ ತಾಯಿ, ಆ ದಿನ ಏನಾಯ್ತು? ವಿವರವಾಗಿ ಬಿಚ್ಚಿಟ್ಟ ಪದ್ಮಲತಾಳ ಅಕ್ಕ
