ಚುನಾವಣಾ ಆಯೋಗದ ಮೇಲೆ ರಾಗಾ ಅನುಮಾನ ಕೇಂದ್ರ ಸಚಿವ ಕುಮಾರಸ್ವಾಮಿ ಅಸಮಧಾನ

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣೆ ಆಯೋಗದ ಮೇಲೆ ಅನುಮಾನ ಪಟ್ಟಿರುವ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅಸಮಾಧಾನ ಹೊರ ಹಾಕಿದ್ದಾರೆ.  ನವದೆಹಲಿ

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.ಮತಗಳ್ಳತನವಾಗಿದೆ ಎಂದು ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅನುಮಾನ ಪಟ್ಟಿರುವುದು ಕಿಡಿಗೇಡಿ ಪಿತೂರಿಯಾಗಿದೆ. ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳಲು ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನವದೆಹಲಿ

ಇದನ್ನೂ ಓದಿ : ಡೀಸೆಲ್ – ಪೆಟ್ರೋಲ್ ಮೇಲಿನ ಸೆಸ್ ಹೆಚ್ಚಿಸುವುವಂತೆ ಸಂತೋಷ್ ಲಾಡ್ ಮನವಿ

ಮುಂದುವರೆದು, ಮತಗಳ್ಳತನ ಆರೋಪಕ್ಕೆ ಒಂದೇ ಮದ್ದು. ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು.ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ. ಕೇಂದ್ರೀಯ ಚುನಾವಣೆ ಆಯೋಗಕ್ಕೆ ನನ್ನ ಮನವಿ ಅಥವಾ ಒತ್ತಾಯ ಇಷ್ಟೇ; ಎಂದು ಕೇಂದ್ರಕ್ಕೆ ಸಲಹೆ ನೀಡಿದ್ದಾರೆ. ನವದೆಹಲಿ

ಇದನ್ನೂ ನೋಡಿ : ಸ್ವತಂತ್ರ ಪತ್ರಕರ್ತರ ಮೇಲೆ ಹಲ್ಲೆ | ಸ್ಥಳದಲ್ಲಿ ನಡೆದ ಘಟನೆ ಬಗ್ಗೆ ಸತ್ಯ ಬಿಚ್ಚಿಟ್ಟ ರಜತ್​ ಕಿಶನ್ |Janashakthi

Donate Janashakthi Media

Leave a Reply

Your email address will not be published. Required fields are marked *