ಬೆಂಗಳೂರು| 4 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ; ಮೂವರು ಸಾವು

ಬೆಂಗಳೂರು: ಆಗಸ್ಟ್ 16 ಬೆಳಗಿನಜಾವ 3:30ರ ಸುಮಾರಿಗೆ ನಗರದ ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೂವರು ಸಾವನ್ನಪ್ಪಿರುವ ಘಟನೆ ನಡೆದಿರುವುದಾಗಿ ವರದಿಯಾಗಿದೆ.

ದುರ್ಘಟನೆಯಲ್ಲಿ ರಾಜಸ್ಥಾನ ಮೂಲದ ಮದನ್ ಸಿಂಗ್ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರು

ನಾಲ್ಕು ಅಂತಸ್ತಿನ ಕಟ್ಟಡದ ನೆಲಮಹಡಿ ಹಾಗೂ ಮೊದಲ ಮಹಡಿಯಲ್ಲಿ ಪ್ಲಾಸ್ಟಿಕ್ ಮ್ಯಾಟ್‌ಗಳನ್ನು ಸಂಗ್ರಹಿಸಿಟ್ಟಿದ್ದ ಗೋದಾಮಿತ್ತು. ಮೂರನೇ ಮಹಡಿಯಲ್ಲಿದ್ದ ಮನೆಯಲ್ಲಿ ಮದನ್ ಕುಮಾರ್, ಅವರ ಪತ್ನಿ ಇಬ್ಬರು ಮಕ್ಕಳು​​ ವಾಸವಿದ್ದರು. ನಾಲ್ಕನೇ ಮಹಡಿಯಲ್ಲಿ ಒಂದು ರೂಮ್ ಇತ್ತು.

ಇದನ್ನೂ ಓದಿ: ಜಾತಿ ಜನಗಣತಿ: ಸರ್ಕಾರ ಎಲ್ಲರ ಅಭಿಪ್ರಾಯ ಪಡೆಯಲಿದೆ – ಎನ್.ಎಸ್.ಬೋಸರಾಜು

ಅಗ್ನಿ ಅವಘಡದಿಂದಾಗಿ ಮದನ್ ಕುಮಾರ್ ಕುಟುಂಬ ಹಾಗೂ ಮೊದಲ ಮಹಡಿಯಲ್ಲಿನ ಗೋದಾಮಿನೊಳಗೆ ಮೂವರು ಕಾರ್ಮಿಕರು ಸಿಲುಕಿಕೊಂಡಿದ್ದರು. ಸದ್ಯ ಮದನ್ ಕುಮಾರ್ ಸೇರಿದಂತೆ ಮೂವರು ಮೃತಪಟ್ಟಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಟ್ಟಡದ ನೆಲಮಹಡಿಯಲ್ಲಿದ್ದ ಪ್ಲಾಸ್ಟಿಕ್ ಮ್ಯಾಟ್ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಅವಘಡ ಸಂಭವಿಸಿದೆ ಎನ್ನಲಾಗುತ್ತಿದ್ದು, ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದುವರೆಗೂ ಮೂವರ ಮೃತದೇಹಗಳನ್ನ ಆಸ್ಪತ್ರೆಗೆ ರವಾನಿಸಲಾಗಿದ್ದು, ಉಳಿದವರೂ ಸಹ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ ನಡೆಯುತ್ತಿದೆ.

ಇದನ್ನೂ ನೋಡಿ: ವಚನಾನುಭವ – 31 | ಅಂಬಿಗರ ಚೌಡಯ್ಯನ ವಚನ – ಕುಲಹೀನ ಶಿಷ್ಯಂಗೆ ಅನುಗ್ರಹವ ಮಾಡಿ Janashakthi Media

Donate Janashakthi Media

Leave a Reply

Your email address will not be published. Required fields are marked *